ಭಾಗ್ಯನಗರ ಪಟ್ಟಣದ ಶ್ರೀನಿವಾಸ ಕೂದಲೋದ್ಯಮ ಕಾರ್ಮಿಕರಿಗೆ ಮತದಾನ ಜಾಗೃತಿ
ಕೊಪ್ಪಳ:- ಲೋಕಸಭಾ ಸಾರ್ವತ್ರಿಕ ಚುನಾವಣೆ ಕುರಿತು ಕಾರ್ಮಿಕರಿಗೆ ಜಾಗೃತಿ ಮೂಡಿಸಲು ತಾಲೂಕ ಸ್ವೀಪ್ ಸಮಿತಿ ವತಿಯಿಂದ ಶ್ರೀನಿವಾಸ ಕೂದಲೋದ್ಯಮ ಕಾರ್ಮಿಕರಿಗೆ ದಿನಾಂಕ:18-04-2024ರಂದು ಮತದಾನ ಜಾಗೃತಿ ಕಾರ್ಯಕ್ರಮ ಜರುಗಿತು.
ತಾಲೂಕ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಹನಮಂತಪ್ಪ ಮಾತನಾಡಿ ಮೇ-7ರಂದು ಜರುಗುವ ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ಕಡ್ಡಾಯವಾಗಿ ಮತಗಟ್ಟೆ ಕೇಂದ್ರಕ್ಕೆ ಹೋಗಿ ಮತ ಚಲಾಯಿಸುವದರ ಮೂಲಕ ಸುಭದ್ರ ದೇಶವನ್ನಾಗಿ ನಿರ್ಮಿಸೋಣ. ಮತದಾನ ದಿನದಂದು ಚುನಾವಣೆ ಅಗತ್ಯ ದಾಖಲಾತಿಗಳನ್ನು ತೆಗೆದುಕೊಂಡು ಹೋಗಿ ನಮಗೆ ಸೂಕ್ತ ಎನಿಸುವ ವ್ಯಕ್ತಿಗೆ ಮತ ಚಲಾಯಿಸಬೇಕು. ಕಾರ್ಖಾನೆಯ ಎಲ್ಲಾ ನೌಕರರು, ಕಾರ್ಮಿಕರು ಕಡ್ಡಾಯವಾಗಿ ಚಾಚು ತಪ್ಪದೇ ಮತದಾನ ಮಾಡಿ ಇತರರಿಗೆ ಮಾದರಿಯಾಗಬೇಕೆಂದು ಕರೆ ನೀಡಿದರು. ಕಳೆದ ಲೋಕಸಭಾ ಚುನಾವಣೆಗಿಂತ ಈ ಬಾರಿ ವಿನೂತನವಾಗಿ ಸ್ವೀಪ್ ಕಾರ್ಯಕ್ರಮಗಳನ್ನು ಜರುಗಿಸುವ ಮೂಲಕ ಜಿಲ್ಲೆಯ ಮತದಾನ ಶೇಕಡಾವಾರು ಪ್ರಮಾಣವನ್ನು ಹೆಚ್ಚಿಸಲು ಆಯೋಗದ ಉದ್ದೇಶವನ್ನು ಈಡೇರಿಸೋಣ ಎಂದರು. ಮತದಾನ ಪವಿತ್ರವಾದ ಕಾರ್ಯ. ಮತದಾನ ಮೂಲಕ ದೇಶಕ್ಕೆ ದೊಡ್ಡ ಕೊಡುಗೆ ನೀಡಿದಂತಾಗುತ್ತದೆ ಎಂದರು. ಸ್ವೀಪ್ ಕಾರ್ಯಕ್ರಮದಲ್ಲಿ ಸೇರಿರುವ ಎಲ್ಲಾ ನರೇಗಾ ಕೂಲಿಕಾರರು ನಿಮ್ಮ ಕುಟುಂಬದ 18 ವರ್ಷ ಮೇಲ್ಪಟ್ಟ ಸದಸ್ಯರು ಮತ ಚಲಾಯಿಸುವ ಮೂಲಕ ದೇಶಕ್ಕೆ ಸುಭದ್ರ ಆಡಳಿತ ಒದಗಿಸಲು ಕೈ ಜೋಡಿಸೊಣ ಎಂದರು.
ಭಾಗ್ಯನಗರ ಪುರಸಭೆ ಮುಖ್ಯಾಧಿಕಾರಿ ಸುರೇಶ ಬಬಲಾದಿ ಮಾತನಾಡಿ ಪ್ರಜಾಫ್ರಭುತ್ವ ವ್ಯವಸ್ಥೆಯಲ್ಲಿ ಮತದಾನಕ್ಕೆ ಗೌರವವಿದೆ. ಪ್ರತಿ ಮತ ದೇಶದ ಭವಿಷ್ಯವನ್ನು ರೂಪಿಸುವ ಶಕ್ತಿ ಅಡಗಿದೆ ಎಂದರು.
ನಮ್ಮ ಧ್ವನಿ, ನಮ್ಮ ಮತ, ನಮ್ಮ ಮತ ನಮ್ಮ ಹಕ್ಕು, ನಮ್ಮ ಓಟು ನಮ್ಮ ಪವರ್, ನಮ್ಮ ಮತ ನಮ್ಮ ಆಯ್ಕೆ ಇತ್ಯಾದಿ ಕುರಿತು ಬಟಿಂಗ್ಸ್ ನಲ್ಲಿರುವ ಘೋಷಣೆಗಳೊಂದಿಗೆ ಮುಕ್ತಾಯಗೊಂಡಿತು. ನಂತರ ಕಡ್ಡಾಯ ಮತದಾನ ಮಾಡಲು ಎಲ್ಲಾ ಕಾರ್ಮಿಕರಿಗೆ ಮತದಾರರ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು. 120 ಕ್ಕೂ ಕಾರ್ಮಿಕರು ಮತದಾರರ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
ಸದರಿ ಸ್ವೀಪ್ ಕಾರ್ಯಕ್ರಮದಲ್ಲಿ ಶ್ರೀನಿವಾಸ ಕೂದಲೋದ್ಯಮ ಇಂಡಸ್ಟ್ರೀಸ್ ನ ವ್ಯವಸ್ಥಾಪಕ ಕಿರಣಕುಮಾರ, ತಾಲೂಕ ಸ್ವೀಪ್ ಸಮಿತಿ ಸದಸ್ಯರಾದ ಬಸವರಾಜ ಬಳಿಗಾರ, ವಿರೇಶ್ ಬಡಿಗೇರ, ತಾಲೂಕ ಐಇಸಿ ಸಂಯೋಜಕ ದೇವರಾಜ ಪತ್ತಾರ, ಕಾರ್ಮಿಕರು, ಪುರಸಭೆ ಸಿಬ್ಬಂದಿಗಳು ಹಾಜರಿದ್ದರು.
Comments are closed.