ರಾಜ್ಯದ ಅಭಿವೃದ್ಧಿ ಹಾಗೂ ಗ್ಯಾರಂಟಿ ಅನುಷ್ಠಾನ ನೋಡಿ ಕಾಂಗ್ರೆಸ್ ಪಕ್ಷಕ್ಕೆ ಮತವನ್ನು ನೀಡಿ;   ಬಸವರಾಜ ರಾಯರೆಡ್ಡಿ  

Get real time updates directly on you device, subscribe now.


ಕುಷ್ಟಗಿ.ಏ.18: ದೇಶದ ಭವಿಷ್ಯ ಉಜ್ವಲ ಗೊಳಿಸುವ ಉದ್ದೇಶದಿಂದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಬೇಕು ಎಂದು ಯಲಬುರ್ಗಾ ಶಾಸಕರು ಹಾಗೂ ಸಿ.ಎಂ ಆರ್ಥಿಕ ಸಲಹೆಗಾರರು ಬಸವರಾಜ ರಾಯರೆಡ್ಡಿ ಹೇಳಿದರು.
ಲೋಕಸಭಾ ಸಾರ್ವತ್ರಿಕ ಚುನಾವಣೆ ಪ್ರಯುಕ್ತ ಕುಷ್ಟಗಿ-ಹನುಮಸಾಗರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ತಾಲೂಕಿನ ಹಿರೇಮನ್ನಾಪೂರ ಗ್ರಾಮದ ಶ್ರೀ ಶರಣಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಏರ್ಪಡಿಸಿದ್ದ ಚುನಾವಣಾ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ಮೋದಿಯವರ ಆಡಳಿತ ಹಾಗೂ ಸಿದ್ದರಾಮಯ್ಯನವರ ನಡುವೆ ಚುನಾವಣೆ ನಡೆಯುತ್ತಿದೆ. ದೇಶದಲ್ಲಿ ಅತೀ ಹೆಚ್ಚು ಡ್ಯಾಂ ನಿರ್ಮಾಣ ಮಾಡಿದ್ದು ಕಾಂಗ್ರೆಸ್ ಪಕ್ಷ.
ನೀರಾವರಿ, ವಿದ್ಯುತ್, ಶೋಷಿತ ವರ್ಗಕ್ಕೆ ಅಧಿಕಾರ ಸೇರಿದಂತೆ ಅನೇಕ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಕಾಂಗ್ರೆಸ್ ಪಕ್ಷ ನೀಡಿದೆ.
182 ಸಾವಿರ ಕೋಟಿ ಭಾರತ ದೇಶದ ಆರ್ಥಿಕ ಸಾಲದಲ್ಲಿ ಕೊಳೆಯುತ್ತಿದೆ. ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿದೆ. ಅಭಿವೃದ್ಧಿ ಜಾತಿಗೆ ಮತವನ್ನು ನೀಡುವ ಮೂಲಕ ನಮ್ಮ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ.ರಾಜಶೇಖರ ಹಿಟ್ನಾಳ ಅವರಿಗೆ ಹೆಚ್ಚಿನ ಮತವನ್ನು ನೀಡಬೇಕು ಎಂದು ಹೇಳಿದರು.
ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಮಾತನಾಡಿದ ಅವರು ಸುಳ್ಳು ಮತ್ತು ಸತ್ಯದ ನಡುವೆ ಚುನಾವಣೆ ನಡೆಯುತ್ತಿದೆ. ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಇನ್ನೂ ಐದು ಗ್ಯಾರಂಟಿ ಯೋಜನೆಗಳನ್ನು ಸಮರ್ಪಕ ಜಾರಿಗೆ ತರುತ್ತವೆ ಎಂದು ಹೇಳಿದರು. ಬಡವರು, ರೈತರ ಸಾಲಮನ್ನಾ ಮಾಡುತ್ತೇವೆ ಎಂದು ಭರವಸೆ ನೀಡಿದರು. ಸೂಟ್, ಬೂಟಿನ ಸರಕಾರ ನಮ್ಮ ಪಕ್ಷ ಅಲ್ಲ ಸ್ವಾಮಿ. ಜಾತಿ ಜಾತಿಗಳ ಮಧ್ಯೆ ವಿಷ ಬೀಜ ಬಿತ್ತುವ ಮೂಲಕ ದ್ವೇಷದ ರಾಜ ಕಾರಣ ಮಾಡುತ್ತಿದ್ದಾರೆ ಬಿಜೆಪಿಯವರು ಎಂದು ಹೇಳಿದರು.
ಈ ಸಂದರ್ಭದಲ್ಲಿ ಕೊಪ್ಪಳ ಶಾಸಕ ಕೆ.ರಾಘವೇಂದ್ರ ಹಿಟ್ನಾಳ, ಸಂಸದ ಸಂಗಣ್ಣ ಕರಡಿ, ಮಾಜಿ ಸಚಿವ ಹಾಗೂ ಜಿಲ್ಲಾ ಅಧ್ಯಕ್ಷ ಅಮರೇಗೌಡ ಪಾಟೀಲ್ ಬಯ್ಯಾಪೂರ, ಕಾಡಾ ಅಧ್ಯಕ್ಷ ಹಸನಸಾಬ ದೋಟಿಹಾಳ, ವಿ.ಆರ್ ಪಾಟೀಲ್, ಮೈನುದ್ದೀನ್ ಮುಲ್ಲಾ, ಟಿ.ಜನಾರ್ಧನ ಹುಲಗಿ, ಉಮೇಶ ಮಂಗಳೂರು, ಕಲ್ಲಪ್ಪ ತಳವಾರ, ದೊಡ್ಡಬಸವನಗೌಡ ಪಾಟೀಲ್ ಬಯ್ಯಾಪೂರ, ಉಮೇಶ ಮಂಗಳೂರು, ಮಹಿಳಾ ಜಿಲ್ಲಾ ಅಧ್ಯಕ್ಷೆ ಮಾಲತಿ ನಾಯಕ, ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಫಾರೂಕ್ ಡಲಾಯತ್, ಸದಸ್ಯೆ ಶಾರದಾ ಕಟ್ಟಿಮನಿ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು, ಹಿರೇಮನ್ನಾಪೂರ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಮತದಾರರು ಉಪಸ್ಥಿತರಿದ್ದರು.

Get real time updates directly on you device, subscribe now.

Comments are closed.

error: Content is protected !!