ಹುಲಿಗೆಮ್ಮ ದೇವಸ್ಥಾನ ಅಭಿವೃದ್ಧಿಗೆ ವಿಶೇಷ ಅನುದಾನ ತರುವೆ- ಡಾ.ಬಸವರಾಜ
ಕೊಪ್ಪಳ: ಕಲ್ಯಾಣ ಕರ್ನಾಟಕ ಭಾಗದ ಶಕ್ತಿ ದೇವತೆ ಹಾಗೂ ಸುಪ್ರಸಿದ್ಧ ಧಾರ್ಮಿಕ ಸ್ಥಳವಾದ ಹುಲಿಗಿಯ ಹುಲಿಗೆಮ್ಮದೇವಿ ಸನ್ನಿಧಾನಕ್ಕೆ ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕರ್ನಾಟಕವಷ್ಟೇ ಅಲ್ಲದೇ ನೆರೆರಾಜ್ಯಗಳಿಂದ ಭಕ್ತರು ಹುಲಿಗೆಮ್ಮದೇವಿಯ ದರ್ಶನಕ್ಕೆ ಆಗಮಿಸುತ್ತಾರೆ. ಭಕ್ತರ ಸಂಖ್ಯೆಗೆ ಅನುಗುಣವಾಗಿ ಮೂಲಸೌಕರ್ಯ ಅಭಿವೃದ್ಧಿ ಮಾಡುವ ಸಂಕಲ್ಪ ಮಾಡಿದ್ದೇನೆ. ಹುಲಿಗೆಮ್ಮದೇವಿಯ ಆಶೀರ್ವಾದ, ಜನರ ಸಹಕಾರ ಅಗತ್ಯ ಎಂದರು.
ಶ್ರೀಕ್ಷೇತ್ರವು ರಾಜ್ಯ ಸರ್ಕಾರಕ್ಕೆ ನೂರಾರು ಕೋಟಿ ರೂ. ಆದಾಯ ತರುತ್ತಿದೆ. ಆದರೆ, ನಿರೀಕ್ಷಿತ ಮಟ್ಟದಲ್ಲಿ ಅಭಿವೃದ್ಧಿ ಆಗಿಲ್ಲ. ಕಳೆದ ಅಧಿವೇಶನದಲ್ಲಿ ಹುಲಿಗೆಮ್ಮ ಅಭಿವೃದ್ಧಿ ಪ್ರಾಧಿಕಾರ ರಚಿಸಲಾಗಿದೆ. ಆದರೆ, ಅಭಿವೃದ್ಧಿ ರೂಪುರೇಷೆ ಇನ್ನು ಸಿದ್ಧವಾಗಿಲ್ಲ. ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ, ಹುಲಿಗೆಮ್ಮ ದೇವಸ್ಥಾನ ಅಭಿವೃದ್ಧಿಗೆ ವಿಶೇಷ ಅನುದಾನ ತಂದು ಅಭಿವೃದ್ಧಿ ಪಡಿಸುವೆ ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರು, ಕಾರ್ಯಕರ್ತರು ಜೊತೆಗಿದ್ದರು.
Comments are closed.