ರಾಜ್ಯದಲ್ಲಿ ಮಹಿಳೆಯರಿಗೆ ಸುರಕ್ಷತೆಯಿಲ್ಲ ಎಂಬುದು ಪದೇ ಪದೇ ಸಾಬೀತಾಗಿದೆ : ಹೇಮಲತಾ ನಾಯಕ
ಕೊಪ್ಪಳ : ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದಾಗಿನಿAದ ಮಹಿಳೆಯರಿಗೆ ಸುರಕ್ಷತೆಯಿಲ್ಲ ಎಂಬುದು ಪದೇ ಪದೇ ಸಾಬೀತಾಗಿದೆ ಎಂದು ವಿಧಾನಪರಿಷತ್ ಸದಸ್ಯೆ ಹೇಮಲತಾ ನಾಯಕ ಹೇಳಿದರು.
ಅವರು ಶುಕ್ರವಾರದಂದು ನಗರದ ಪತ್ರಿಕಾಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ತೀರಾ ಹದಗೆಟ್ಟಿದೆ, ಹಿಂದೂ ಕಾರ್ಯಕರ್ತರ ಮೇಲೆ ಬಿಜೆಪಿ ಕಾರ್ಯಕರ್ತರ ಮೇಲೆ ಹಗೆತನ ಸಾಧಿಸುವುದು ಕಾಂಗ್ರೆಸ್ ಪಕ್ಷಕ್ಕೆ ಸರ್ವೇ ಸಾಮಾನ್ಯವಾಗಿದೆ, ಪ್ರಧಾನಿ ಮೋದಿಯವರು ನಾರಿ ಶಕ್ತಿ ಸಮ್ಮಾನ್ ಯೋಜನೆ ರೂಪಿಸುತ್ತಿದ್ದರೆ ಇತ್ತಕಡೆ ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಮಹಿಳಾ ವಿರೋಧಿ ಹೇಳಿಕೆಯನ್ನು ನೀಡುತ್ತಾರೆ, ಮಹಿಳೆಯು ಅಡುಗೆ ಮನೆಗೆ ಸೀಮಿತವಾಗಿರಬೇಕು ಎನ್ನುವರು, ಹೈಕೋರ್ಟ ಕೂಡ ಬೆಳಗಾವಿಯಲ್ಲಿ ನಡೆದ ಮಹಿಳೆ ಮೇಲಿನ ದೌರ್ಜನ್ಯ ಕಳವÀಳ ವ್ಯಕ್ತಪಡಿಸಿದೆ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎನ್ನಲು ಇದಕ್ಕಿಂತ ಪುರಾವೆ ಬೇಕಾ ? ಎಂದ ಅವರು ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಮಹಿಳೆಯರ ಮೇಲಿನ ದೌರ್ಜನ್ಯ ಶೇ.72% ರಷ್ಟು ಹೆಚ್ಚಾಗಿದೆ,ಹುಬ್ಬಳ್ಳಿಯಲ್ಲಿ ಹಿಂದೂ ಯುವತಿ ನೇಹಾ ಹಿರೇಮಠ ಅವರ ಹತ್ಯೆ ಅತ್ಯಂತ ದುರಾದೃಷ್ಟಕರ ಸಂಗತಿ ಈ ಘಟನೆ ಖಂಡಾನರ್ಹ ಆರೋಪಿಗೆ ಕಠಿಣ ಶಿಕ್ಷೆಯಾಗಬೇಕು ಎಂದ ಅವರು ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಯಾವುದೇ ಅಭಿವೃದ್ಧಿ ಕಾರ್ಯಗಳು ಆಗಿಲ್ಲ,ಗ್ಯಾರಂಟಿ ಹೆಸರಿನಲ್ಲಿ ಬೆಲೆ ಏರಿಕೆ, ವಿದ್ಯುತ್ ದರ ಹೆಚ್ಚಳ, ಎಸ್‌ಆರ್ ವ್ಯಾಲ್ಯೂ ದರ ಹೆಚ್ಚಳ, ಆಡಳಿತ ಪಕ್ಷದ ಶಾಸಕರೇ ವ್ಯಾಪಕ ಭ್ರಷ್ಟಾಚಾರದ ಬಗ್ಗೆ ದೂರು ನೀಡುತ್ತಿದ್ದಾರೆ, ಆರ್ಥಿಕವಾಗಿ ರಾಜ್ಯ ಸರಕಾರ ದಿವಾಳಿಯಾಗುತ್ತಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಪಕ್ಷದ ಗೀತಾ ಮುತ್ತಾಳ, ಗೀತಾ ಪಾಟೀಲ್, ಪ್ರಸಾದ್ ಗಾಳಿ ಉಪಸ್ಥಿತರಿದ್ದರು.
Comments are closed.