ವಿದ್ಯಾರ್ಥಿನಿ ನೇಹಾಳ ಭೀಕರ ಕೊಲೆ, ಹತ್ಯೆ ಅತ್ಯಂತ ಖಂಡನೀಯ: ಕಠಿಣ ಶಿಕ್ಷೆ ವಿಧಿಸಲು ಎಸ್ಎಫ್ಐ ಆಗ್ರಹ

0

Get real time updates directly on you device, subscribe now.

ಹುಬ್ಬಳ್ಳಿಯ ಬಿವಿಬಿ ಕಾಲೇಜ್ ವಿದ್ಯಾರ್ಥಿನಿ ನೇಹಾಳ ಭೀಕರ ಕೊಲೆ, ಹತ್ಯೆ ಅತ್ಯಂತ ಖಂಡನೀಯ: ಕಠಿಣ ಶಿಕ್ಷೆ ವಿಧಿಸಲು ಎಸ್ಎಫ್ಐ ಆಗ್ರಹ.

ಹುಬ್ಬಳ್ಳಿಯ ಬಿವಿಬಿ ಕಾಲೇಜ್ ಕ್ಯಾಂಪಸ್ ನಲ್ಲಿ ನಡೆದ ವಿದ್ಯಾರ್ಥಿನಿ ನೇಹಾಳ ಭೀಕರ ಕೊಲೆ, ಹತ್ಯೆ ಅತ್ಯಂತ ಖಂಡನೀಯ, ತಪ್ಪಿತಸ್ಥ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಲು ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಗಂಗಾವತಿ ತಾಲೂಕ ಸಮಿತಿ ಆಗ್ರಹಿಸುದೆ.

ಮಹಿಳೆಯರ ಮೇಲೆ ದೌರ್ಜನ್ಯ, ಶೋಷಣೆ, ಕೊಲೆಗಳು ದಿನೇ ದಿನೇ ಹೆಚ್ಚುತ್ತಿದ್ದು ಮಹಿಳೆಯರಿಗೆ, ವಿದ್ಯಾರ್ಥಿನಿಯರಿಗೆ ಸೂಕ್ತ ಭದ್ರತೆ,ರಕ್ಷಣೆ ಇಲ್ಲದೆ ಇರುವುದು ಈ ಘಟನೆಗಳಿಗೆ ಕಾರಣವಾಗಿವೆ. ಹುಬ್ಬಳ್ಳಿ ವಿದ್ಯಾನಗರದ ಕೆಎಲ್ಇಯ ಅಡ್ಡಿಯಲ್ಲಿ ಬರುವ ಕರ್ನಾಟಕ ಲಿಂಗಾಯತ ಶಿಕ್ಷಣ ತಾಂತ್ರಿಕ ವಿಶ್ವವಿದ್ಯಾನಿಲಯ (ಬಿವಿಬಿ) ಆವರಣದಲ್ಲಿ ಗುರುವಾರ ರಂದು ಎಂಸಿಎ ಮೊದಲ ವರ್ಷದಲ್ಲಿ ಓದುತ್ತಿದ್ದ ನೇಹಾ ಹಿರೇಮಠ (24) ಎಂಬ ವಿದ್ಯಾರ್ಥಿನಿಯನ್ನು ಹಡಹಾಗಲೆ ತನ್ನ ಹಳೆಯ ಸಹಪಾಠಿ ಚಾಕುವಿನಿಂದ ಕೊಲೆಮಾಡಿ ಹತ್ಯೆಗೈದಿರುವುದು ಅತ್ಯಂತ ಖಂಡನೀಯ. ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥ ಆರೋಪಿಗೆ ಅತ್ಯಂತ ಕಠಿಣ ಶಿಕ್ಷೆಯನ್ನು ವಿಧಿಸಬೇಕು.

ಈ ಪ್ರಕರಣಗಳು ರಾಜ್ಯಾದ್ಯಂತ ಪ್ರತಿ ದಿನವೂ ನಡೆಯುತ್ತಿದ್ದು ಸರ್ಕಾರ ಇವುಗಳ ಬಗ್ಗೆ ಗಮನ ನೀಡದೆ ಇರುವುದು ಈ ರೀತಿಯ ಘಟನೆಗಳು ಹೆಚ್ಚಾಗಿವೆ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಎಲ್ಲಾ ಶಾಲಾ – ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರಿಗೆ, ಮಹಿಳೆಯರಿಗೆ ಸೂಕ್ತ ರಕ್ಷಣೆ ನೀಡಬೇಕು ಆದರೆ ಇದನ್ನು ರಾಜ್ಯ ಸರ್ಕಾರ ಜಾರಿ ಮಾಡಿಲ್ಲ ತಕ್ಷಣ ಇದನ್ನು ರಚನೆ ಮಾಡಬೇಕು. ಇಂತಹ ಆರೋಪಿಗಳಿಗೆ ಕಾನೂನು ಕಠಿಣ ಶಿಕ್ಷೆ ವಿಧಿಸಿ ವಿದ್ಯಾರ್ಥಿನಿಯರಿಗೆ, ಮಹಿಳೆಯರಿಗೆ ಸೂಕ್ತ ರಕ್ಷಣೆ ನೀಡಬೇಕೆಂದು ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಸಮಿತಿಯು ಈ ಮೂಲಕ ಆಗ್ರಹಿಸುತ್ತದೆ.

ಅಧ್ಯಕ್ಷರು ಗ್ಯಾನೇಶ್ ಕಡಗದ ಕಾರ್ಯದರ್ಶಿ ಶಿವುಕುಮಾರ್  ಸದಸ್ಯರಾದ ನಾಗರಾಜ್. ಸೋಮನಾಥ್.ಶರೀಪ್. ಬಾಲಾಜಿ. ಬಸಯ್ಯ್. ಹನುಮಂತ ಇದ್ದರು

Get real time updates directly on you device, subscribe now.

Leave A Reply

Your email address will not be published.

error: Content is protected !!
%d bloggers like this: