ನೇಹಾ ಕೊಲೆ ಪ್ರಕರಣ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಿ: ಆದಿಲ್ ಪಟೇಲ್
ಕೊಪ್ಪಳ: ಹುಬ್ಬಳ್ಳಿಯ ಬಿವಿಬಿ ಕಾಲೇಜಿನ ಆವರಣದಲ್ಲಿ ನಡೆದ ವಿದ್ಯಾರ್ಥಿನಿ ನೇಹಾ ಹಿರೇಮಠ ಅವರ ಕೊಲೆಯನ್ನು ಸಮಾಜದಲ್ಲಿರುವ ಎಲ್ಲರೂ ಖಂಡಿಸಬೇಕು. ಆರೋಪಿಗೆ ಕಠಿಣ ಶಿಕ್ಷೆ ವಿಧಿಸಿ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಜಿಲ್ಲಾ ಅಧ್ಯಕ್ಷರಾದ ಆದಿಲ್ ಪಟೇಲ್ ಆಗ್ರಹಿಸಿದ್ದಾರೆ.
ಕಾಲೇಜಿನ ಆವರಣದಲ್ಲಿ ಇಂಥ ಪರಿಸ್ಥಿತಿಗಳು ನಿರ್ಮಾಣವಾದರೆ ಹೆಣ್ಣು ಮಕ್ಕಳನ್ನು ಶಾಲಾ ಕಾಲೇಜುಗಳಿಗೆ ಪಾಲಕರು ಕಳುಹಿಸುವುದು ಕಷ್ಟವಾಗುತ್ತದೆ. ನಾವೆಲ್ಲರು ಜಾಗೃತರಾಗಬೇಕು. ಇಂಥ ದುಷ್ಕೃತ್ಯ ನಡೆದಾಗಲೂ ಕಣ್ಮುಚ್ಚಿ ಕುಳಿತುಕೊಳ್ಳುವುದು ನ್ಯಾಯವಲ್ಲ. ಜಾತಿ, ಮತ, ಪಂಥ ಮರತು ಒಗ್ಗಟ್ಟಿನಿಂದ ಖಂಡಿಸಬೇಕು. ಆರೋಪಿಗೆ ಕಠಿಣ ಶಿಕ್ಷೆಯಾದಾಗ ಮಾತ್ರ ನೇಹಾ ಸಾವಿಗೆ ನ್ಯಾಯ ಸಿಕ್ಕಂತಾಗುತ್ತದೆ ಎಂದು ಅವರು ಆಗ್ರಹಿಸಿದ್ದಾರೆ.
Comments are closed.