ಕರ್ನಾಟಕ ದೇಶಕ್ಕೆ ಮಾದರಿ: ರಾಯರೆಡ್ಡಿ
ರಾಯರೆಡ್ಡಿ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆ
ಯಲಬುರ್ಗಾ: ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಹಾಗೂ ಶಾಸಕರಾದ ಬಸವರಾಜ ರಾಯರೆಡ್ಡಿ ಅವರ ನೇತೃತ್ವದಲ್ಲಿ ವಿವಿಧ ಪಕ್ಷಗಳಿಂದ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಗೊಂಡರು.
ಶುಕ್ರವಾರ ಸಂಜೆ ಯಲಬುರ್ಗಾ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ಕಾಂಗ್ರೆಸ್ ಶಾಲು ಹೊದಿಸಿ ಕಾರ್ಯಕರ್ತರನ್ನು ಬರಮಾಡಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಅವರು, ಗ್ಯಾರೆಂಟಿ ಯೋಜನೆ ಅನುಷ್ಠಾನದಲ್ಲಿ ಕರ್ನಾಟಕ ದೇಶಕ್ಕೆ ಮಾದರಿಯಾಗಿದೆ. ಪ್ರಸಕ್ತ ಗ್ಯಾರೆಂಟಿ ಯೋಜನೆಗಾಗಿ 52 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ. ಇಷ್ಟು ಪ್ರಮಾಣದ ಹಣ ನೇರವಾಗಿ ಜನರ ಖಾತೆಗೆ ಸೇರುತ್ತಿರುವುದು ಇದೇ ಮೊದಲ. ಇದರ ಶ್ರೇಯಸ್ಸು ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತದೆ. ಪ್ರತಿ ಕುಟುಂಬಕ್ಕೂ ಗ್ಯಾರೆಂಟಿ ಯೋಜನೆ ಪರಿಣಾಮಕಾರಿಯಾಗಿ ತಲುಪಿಸುವಲ್ಲಿ ನಾವು ಯಶಸ್ವಿಯಾಗಿದ್ದೇವೆ. 1.10 ಕೋಟಿ ಕುಟುಂಬಗಳನ್ನು ಬಡತನ ರೇಖೆಯಿಂದ ಮೇಲೆತ್ತಲಾಗಿದೆ ಎಂದರು.
ಶಾಸಕ ಕೆ.ರಾಘವೇಂದ್ರ ಹಿಟ್ನಾಳ್ ಮಾತನಾಡಿ, ಜನರ ಆಶೋತ್ತರಗಳಿಗೆ ಸ್ಪಂದಿಸುವ ಏಕೈಕ ಪಕ್ಷ ಕಾಂಗ್ರೆಸ್. ಯಾರೂ ಹಸಿವಿನಿಂದ ಬಳಲ ಬಾರದು ಎಂಬ ಉದ್ದೇಶದಿಂದ ಅಕ್ಕಿ, ಕುಟುಂಬ ನಿರ್ವಹಣೆಗಾಗಿ ಮನೆ ಒಡೆತಿಗೆ ಪ್ರತಿ ತಿಂಗಳು 2 ಸಾವಿರ ರೂ. ಉಚಿತ ಬಸ್ ಹಾಗೂ ವಿದ್ಯುತ್ ನೀಡಲಾಗಿತ್ತಿದೆ. ಕಾಂಗ್ರೆಸ್ ಪಕ್ಷದ ಗುರುತಿಗೆ ಮತ ಹಾಕಿ ಹಾಗೂ ಹಾಕಿಸಿ ಕಾಂಗ್ರೆಸ್ ಅಭ್ಯರ್ಥಿ ಯನ್ನು ಪ್ರಚಂಡ ಬಹುಮತದಿಂದ ಆರಿಸಿ ತರಬೇಕು ಎಂದರು.
ಕಾಂಗ್ರೆಸ್ ಮುಖಂಡರಾದ ಅಮರೇಶ್ ಕರಡಿ ಮಾತನಾಡಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದ ಒಂದೇ ವರ್ಷದಲ್ಲಿ ಗ್ಯಾರೆಂಟಿ ಯೋಜನೆ ಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಿದೆ. ಇಷ್ಟು ವೇಗವಾಗಿ ಅನುಷ್ಠಾನ ಮಾಡುವುದು ಸುಲಭವಲ್ಲ. ಜನಪರ ಪಕ್ಷ ಮಾತ್ರ ಮಾಡಲು ಸಾಧ್ಯವಿದೆ. ಕೊಟ್ಟ ಮಾತಿನಂತೆ ನಡೆದ ಏಕೈಕ ಪಕ್ಷ ಕಾಂಗ್ರೆಸ್ ಆಗಿದೆ. ಕೊಪ್ಪಳ ಲೋಕಸಭಾ ಕ್ಷೇತ್ರದ ಅಭಿವೃದ್ಧಿಗಾಗಿ ಕಾಂಗ್ರೆಸ್ ಅಭ್ಯರ್ಥಿ ಕೆ.ರಾಜಶೇಖರ ಹಿಟ್ನಾಳ್ ಅವರಿಗೆ ಮತ ನೀಡಿ ಅಭೂತಪೂರ್ವ ಬಹುಮತದಿಂದ ಗೆಲ್ಲಿಸಬೇಕು ಎಂದರು.
ಈ ವೇಳೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
Comments are closed.