ಭಗವಾನ್ ಮಹಾವೀರ ಜಯಂತಿ ಜಯಂತಿ: ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ
ಕೊಪ್ಪಳ,): ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಭಗವಾನ್ ಶ್ರೀ ಮಹಾವೀರ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಭಾನುವಾರ ಆಚರಿಸಲಾಯಿತು.
ಲೋಕಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಜಯಂತಿಯನ್ನು ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಯಿತು. ಕೊಪ್ಪಳ ಉಪವಿಭಾಗಾಧಿಕಾರಿಗಳಾದ ಕ್ಯಾಪ್ಟನ್ ಮಹೇಶ ಮಾಲಗಿತ್ತಿ ಅವರು ಮಹಾವೀರರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಶ್ರೀಶೈಲ ಬಿರದಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಕೊಟ್ರೇಶ ಮರಬನಳ್ಳಿ, ಸಮಾಜದ ಮುಖಂಡರಾದ ರಾಜೇಂದ್ರ ಜೈನ್, ದೀಪಚಂದ್ ಜೈನ್, ಪ್ರವೀಣ ಜೈನ್, ಗೌತಮ್ ಜೈನ್, ಮಹಾವೀರ ಜೈನ್, ಭರತ್ ಜೈನ್, ಪಾರಸಮಲ್ ಜೈನ್, ಮನೋಜ್ ಜೈನ್ ಮತ್ತು ಮುಂತಾದವರು, ಜಿಲ್ಲಾಧಿಕಾರಿ ಕಚೇರಿಯ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
Comments are closed.