ಲೋಕಸಭಾ ಚುನಾವಣೆ: ಪೊಲೀಸ್ ವೀಕ್ಷಕರ ಆಗಮನ: ಸಾರ್ವಜನಿಕರ ಭೇಟಿಗೆ ಅವಕಾಶ
: ಭಾರತ ಚುನಾವಣಾ ಆಯೋಗವು ಮಾರ್ಚ್ 16 ರಂದು ಲೋಕಸಭಾ ಚುನಾವಣೆ-2024 ರ ಅಧಿಸೂಚನೆ ಹೊರಡಿಸಿದ್ದು, 08-ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ಪೊಲೀಸ್ ವೀಕ್ಷಕರನ್ನಾಗಿ ಡಾ. ಸತೀಶ್ ಕುಮಾರ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.
ಪೊಲೀಸ್ ವೀಕ್ಷಕರಾದ ಡಾ. ಸತೀಶ್ ಕುಮಾರ್ ಅವರು ಜಿಲ್ಲೆಗೆ ಆಗಮಿಸಿದ್ದು, ಜಿಲ್ಲಾ ಕೇಂದ್ರ ಸ್ಥಾನದಲ್ಲಿದ್ದು, ಸಾರ್ವಜನಿಕರಿಗೆ ಲಭ್ಯವಿರುತ್ತಾರೆ. ಇವರನ್ನು ಜಿಲ್ಲಾಡಳಿತ ಭವನದಲ್ಲಿ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 02 ಗಂಟೆಯವರೆಗೆ ಸಾರ್ವಜನಿಕರು ಭೇಟಿ ಮಾಡಿ ಲೋಕಸಭಾ ಚುನಾವಣೆಗೆ ಸಂಬಂಧಿಸಿದ ಅಹವಾಲು, ಮಾಹಿತಿಯನ್ನು ಸಲ್ಲಿಸಬಹುದಾಗಿದೆ. ಅಥವಾ ಪೊಲೀಸ್ ವೀಕ್ಷಕರ ಮೊ.ಸಂ: 9019710952 ಗೆ ಕರೆ ಮಾಡಿಯೂ ಅಹವಾಲು ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
Comments are closed.