ಡಾ.ಬಸವರಾಜರನ್ನು ಗೆಲ್ಲಿಸಿ ಮೋದಿ ಕೈ ಬಲಪಡಿಸಿ-ಗಾಲಿ ಜನಾರ್ದನ ರೆಡ್ಡಿ

Get real time updates directly on you device, subscribe now.

ಕೊಪ್ಪಳ: ದೇಶದ ಪ್ರಗತಿ, ಭದ್ರತೆ, ಅಭಿವೃದ್ಧಿಗಾಗಿ ಬಿಜೆಪಿಗೆ ಮತ ನೀಡಿ. ಡಾ.ಬಸವರಾಜ ಕೆ.ಶರಣಪ್ಪ ಅವರನ್ನು ಗೆಲ್ಲಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಕೈ ಬಲ ಪಡಿಸಿ ಎಂದು ಶಾಸಕ ಗಾಲಿ ಜನಾರ್ದನ ರೆಡ್ಡಿ ಹೇಳಿದರು.
ಗೊಂಡಬಾಳ ಮಹಾಶಕ್ತಿ ಕೇಂದ್ರದಲ್ಲಿ ಲೋಕಸಭಾ ಚುನಾವಣೆಯ ಪ್ರಯುಕ್ತ ನಡೆದ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಳೆದ 10 ವರ್ಷದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಒಂದೂ ದಿನ ರಜೆ ಪಡೆಯದೇ ದೇಶಕ್ಕಾಗಿ ಕೆಲಸ ಮಾಡಿದ್ದಾರೆ. ಅವರು ಅಭಿವೃದ್ಧಿ ಕೆಲಸದಿಂದ ಭಾರತ ಎಲ್ಲ ರಂಗದಲ್ಲಿ ಮುಂಚೂಣಿಯಲ್ಲಿದೆ ಎಂದರು.
ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಬಸವರಾಜ ಕೆ. ಶರಣಪ್ಪ ಮಾತನಾಡಿ, ಕಳೆದ ಹತ್ತು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿಜೀಯವರು ಜನಹಿತಕಾರ ಯೋಜನೆಗಳನ್ನು ಜಾರಿ ಮಾಡಿದ್ದಾರೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಒದಗಿಸುವ ಮೂಲಕ ಸ್ವಾವಲಂಬಿ ಬದುಕಿಗೆ ಕೇಂದ್ರ ಸರ್ಕಾರದ  ಸಾಧನೆಗಳು ಸಹಕಾರಿಯಾಗಿವೆ ಎಂದರು.
ಜಿಲ್ಲಾಧ್ಯಕ್ಷ ನವೀನ್ ಕುಮಾರ್ ಗುಳಗಣ್ಣನವರ್ ಮಾತನಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದ ಹಿತಕ್ಕೆ ತೆಗೆದುಕೊಂಡ ನಿರ್ಣಯಗಳಿಂದಲೇ ಭಾರತ ಇಂದು ವಿಶ್ವಗುರು ಆಗಿದೆ. ವಿಶ್ವಕ್ಕೆ ಮೋದಿಯವರ ಆಡಳಿತ ಮಾದರಿಯಾಗಿದೆ. ದೇಶದ ಪ್ರತಿಯೊಬ್ಬ ವ್ಯಕ್ತಿಗೂ ಮೋದಿಯವರ ಸಾಧನೆ ತಿಳಿದಿದೆ. ಅವರ ಆಡಳಿತ ಮುಂದುವರಿಯಲಿ ಎಂಬ ಆಪೇಕ್ಷೆ ಇದೆ. ಆದ್ದರಿಂದ ಬಿಜೆಪಿಗೆ ಮತ ನೀಡಿ ಕೊಪ್ಪಳ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಾ.ಬಸವರಾಜ ಕೆ.ಶರಣಪ್ಪ ಅವರನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರದ ಸಂಚಾಲಕ ಪ್ರದೀಪ್ ಹಿಟ್ನಾಳ್,  ಕೊಪ್ಪಳ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಸುರೇಶ್ ಭೂಮರೆಡ್ಡಿ,  ಕರಿಯಪ್ಪ ಮೇಟಿ,  ಯುವ ಮುಖಂಡರಾದ  ಶರಣಪ್ಪ,  ಯಮನೂರಪ್ಪ ಚೌಡ್ಕಿ, ಮುಖಂಡರಾದ  ಚಂದ್ರು ಕವಲೂರು,  ಈಶಪ್ಪ ಮಾದಿನೂರು, ಜೆಡಿಎಸ್ ತಾಲೂಕು ಅಧ್ಯಕ್ಷ ಯಮನೂರಪ್ಪ ಕಟಗಿ, ಮಂಜುನಾಥ ಹಳ್ಳಿಕೇರಿ, ವೆಂಕಟೇಶ್ ಹಾವರ್ತಿ, ಸುರೇಶ್ ದೊಣ್ಣೆ, ಶಿವಶಾಂತವೀರ  ಸೊಪ್ಪಿಮಠ, ಗಣೇಶ್ ಸೇರಿದಂತೆ ಉಭಯ ಪಕ್ಷಗಳ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು
ಬಿಜೆಪಿ ಕಾರ್ಯಕರ್ತರ ಪಕ್ಷ. ಸಾಮಾನ್ಯ ಕಾರ್ಯಕರ್ತರನ್ನು ಗುರುತಿಸಿ ಸ್ಥಾನ ಮಾನ ನೀಡುವ ಏಕೈಕ ಪಕ್ಷವಾಗಿದೆ. ನಮ್ಮಂತ ಸಾಮಾನ್ಯ ಕಾರ್ಯಕರ್ತರಿಗೆ ವಿಧಾನ ಪರಿಷತ್ ಸದಸ್ಯೆಯನ್ನಾಗಿ ಮಾಡಿದ ಬಿಜೆಪಿಗೆ ಮತ ನೀಡಿ ದೇಶದ ಪ್ರಗತಿಗೆ ಭಾಗಿಯಾಗಬೇಕು.
ಹೇಮಲತಾ ನಾಯಕ, ವಿಧಾನ ಪರಿಷತ್ ಸದಸ್ಯರು
ಎನ್‌ಡಿಎ ಅಭ್ಯರ್ಥಿ ಡಾ.ಬಸವರಾಜ ಕೆ.ಶರಣಪ್ಪ ಅವರು ದೂರದೃಷ್ಟಿ ನಾಯಕರು. ಅಭಿವೃದ್ಧಿ ಚಿಂತನೆ ಇಟ್ಟುಕೊಂಡು ಚುನಾವಣೆ ಕಣಕ್ಕೆ ಇಳಿದಿದ್ದಾರೆ. ಜೆಡಿಎಸ್- ಬಿಜೆಪಿ ಕಾರ್ಯಕರ್ತರು ಪ್ರತಿ ಮನೆ ಮನೆಗೆ ತೆರಳಿ ಬಿಜೆಪಿಗೆ ಮತ ಹಾಕಿಸಿ.
ಸಿ.ವಿ.ಚಂದ್ರಶೇಖರ್,
ಜೆಡಿಎಸ್ ಕೋರ್ ಕಮಿಟಿ ಸದಸ್ಯರು

Get real time updates directly on you device, subscribe now.

Comments are closed.

error: Content is protected !!