ಲೋಕಸಭಾ ಚುನಾವಣೆ: ಜಿಲ್ಲಾಧಿಕಾರಿಗಳಿಂದ ಶುಷ್ಕ ದಿನ ಘೋಷಣೆ

Get real time updates directly on you device, subscribe now.

 ): ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ರ ಪ್ರಯುಕ್ತ ಕರ್ನಾಟಕ ಅಬಕಾರಿ ಪರವಾನಿಗೆಗಳ (ಸಾಮಾನ್ಯ ಷರತ್ತುಗಳು) ನಿಯಮಗಳು 1967 ರ ನಿಯಮ 10 ಬಿ ಹಾಗೂ ಪ್ರಜಾಪ್ರಾತಿನಿಧ್ಯ ಕಾಯ್ದೆ 1951 ರ ಕಲಂ 135 (ಸಿ) ಅನ್ವಯ ಮೇ 07 ರಂದು ಮತದಾನ ನಡೆಯುವುದರಿಂದ  ಕೊಪ್ಪಳ ಜಿಲ್ಲೆಯಾದ್ಯಂತ ಮೇ 05 ರ ಸಂಜೆ 06 ಗಂಟೆಯಿAದ ಮೇ 07 ರ ರಾತ್ರಿ 12 ಗಂಟೆಯವರೆಗೆ  ಹಾಗೂ ಜೂನ್ 04 ರಂದು ಮತ ಏಣಿಕೆ ನಡೆಯುವುದರಿಂದ ಜೂನ್ 4 ರ ಬೆಳಿಗ್ಗೆ 06  ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ಶುಷ್ಕ ದಿನಗಳೆಂದು  ಘೋಷಿಸಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ನಲಿನ್ ಅತುಲ್ ಅವರು ಆದೇಶ ಹೊರಡಿಸಿದ್ದಾರೆ.


ಆದೇಶದನ್ವಯ ಶುಷ್ಕ ದಿನಗಳಂದು ಜಿಲ್ಲೆಯಾದ್ಯಂತ ಎಲ್ಲಾ ರೀತಿಯ ಮದ್ಯ ತಯಾರಿಕೆ, ಮದ್ಯ ಮಾರಾಟ, ಮದ್ಯ ಸಂಗ್ರಹಣೆ ಹಾಗೂ ಮದ್ಯ ಸಾಗಾಟವನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಈ ದಿನಗಳಂದು ಜಿಲ್ಲೆಯಾದ್ಯಂತ ಎಲ್ಲ ರೀತಿಯ ಮದ್ಯ ಮಾರಾಟ ಅಂಗಡಿಗಳು ಮತ್ತು ಬಾರ್‌ಗಳನ್ನು ಸಂಪೂರ್ಣವಾಗಿ ಮುಚ್ಚಬೇಕು ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!