ಕಾಂಗ್ರೆಸ್ ಅಲೆ ಅಲ್ಲ ಸುನಾಮಿ ಸೃಷ್ಟಿ: ಅಮರೇಶ್ ಕರಡಿ

0

Get real time updates directly on you device, subscribe now.

ಕೊಪ್ಪಳ: ಮಾಜಿ ಸಂಸದ ಸಂಗಣ್ಣ ಕರಡಿ, ಮಾಜಿ ಶಾಸಕ ಬಸವರಾಜ ಹಿಟ್ನಾಳ್ ನೇತೃತ್ವದಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಲೆ ಅಲ್ಲ ಸುನಾಮಿ ಸೃಷ್ಟಿಯಾಗಿದೆ ಎಂದು ಕಾಂಗ್ರೆಸ್ ಯುವ ಮುಖಂಡರಾದ ಅಮರೇಶ್ ಕರಡಿ ಹೇಳಿದರು.
ಗಬ್ಬೂರು ಗ್ರಾಮದಲ್ಲಿ ಮಾಜಿ ಸಂಸದ ಸಂಗಣ್ಣ ಕರಡಿ ಅವರ 100ಕ್ಕೂ ಅಧಿಕ ಬೆಂಬಲಿಗರು ಯುವ ನಾಯಕ ಅಮರೇಶ್ ಕರಡಿ ನೇತೃತ್ವದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡರು.
ಬಳಿಕ ಮಾತನಾಡಿದ ಅವರು, ಲೋಕಸಭಾ ಚುನಾವಣೆ ಹಿನ್ನೆಲೆ ಕೊಪ್ಪಳ ಲೋಕಸಭಾ ವ್ಯಾಪ್ತಿಯ ಎಲ್ಲ ಗ್ರಾಮಗಳಲ್ಲಿರುವ ಮಾಜಿ ಸಂಸದ ಸಂಸಣ್ಣ ಕರಡಿ ಅಭಿಮಾನಿಗಳು ಕಾಂಗ್ರೆಸ್ ಸೇರುತ್ತಿದ್ದಾರೆ. ಹೋದ ಕಡೆಯಲ್ಲ ಕಾಂಗ್ರೆಸ್ ಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ ಎಂದರು.
ಪ್ರತಿಯೊಬ್ಬ ಕಾರ್ಯಕರ್ತರು ಮನೆ ಮನೆಗೆ ತೆರಳಿ ಕಾಂಗ್ರೆಸ್ ಗ್ಯಾರೆಂಟಿ ಯೋಜನೆ ಬಗ್ಗೆ ಪ್ರಚಾರ ಪಡಿಸಿ ಕಾಂಗ್ರೆಸ್ ಗೆ ಮತ ಹಾಕುವಂತೆ ನೋಡಿಕೊಳ್ಳಬೇಕು. ಕಾಂಗ್ರೆಸ್ ಅಭ್ಯರ್ಥಿ ಕೆ.ರಾಜಶೇಖರ ಹಿಟ್ನಾಳ್ ಅವರು 2 ಲಕ್ಷ ಮತಗಳ ಅಂತರದಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಗಬ್ಬೂರಿನ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರಿದ್ದು, ಎಲ್ಲ ಮತಗಳು ಕಾಂಗ್ರೆಸ್ ಗೆ ಬೀಳಲಿವೆ. ಕೊಪ್ಪಳ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 1800 ಗ್ರಾಮಗಳು ಬರಲಿದ್ದು, ಗಬ್ಬೂರು ಗ್ರಾಮದಲ್ಲಿ ಶೇ.100 ರಷ್ಟು ಮತ ಕಾಂಗ್ರೆಸ್ ಗೆ ಹಾಕಿ ದಾಖಲೆ ನಿರ್ಮಿಸಬೇಕು ಎಂದು ಮತದಾರರಲ್ಲಿ ಮನವಿ ಮಾಡಿಕೊಂಡರು.
ಶಾಸಕ ಕೆ.ರಾಘವೇಂದ್ರ ಹಿಟ್ನಾಳ್ ಮಾತನಾಡಿ, ದೇಶದ ಆಡಳಿತ ಬದಲಾವಣೆ ಮಾಡುವ ಚುನಾವಣೆ ಇದಾಗಿದೆ. ಕಾಯಕ ಹಾಗೂ ದಾಸೋಹ ಪರಿಕಲ್ಪನೆಯಲ್ಲಿ ಸಿದ್ದರಾಮಯ್ಯ ಸರ್ಕಾರ ಆಡಳಿತ ನಡೆಸುತ್ತಿದೆ. ಮಧ್ಯವರ್ತಿ ಇಲ್ಲದೇ ನೇರವಾಗಿ ಜನರ ಖಾತೆಗೆ ಹಾಕಲಾಗುತ್ತಿದೆ. ಉದ್ಯೋಗ ಸೃಷ್ಟಿಸುವಲ್ಲಿ ಪ್ರಧಾನಮಂತ್ರಿ ನರೇಂದ್ರ ವಿಫಲಾಗಿದ್ದಾರೆ. ಆದ್ದರಿಂದ ನಿರುದ್ಯೋಗದಲ್ಲಿ ಭಾರತ ಎರಡನೇ ಸ್ಥಾನದಲ್ಲಿದೆ ಎಂದು ವಾಗ್ದಾಳಿ ನಡೆಸಿದರು.
ಈ ಸಂದರ್ಭದಲ್ಲಿ ಮಂಜುನಾಥ ಪಾಟೀಲ್ ಹಂದ್ರಾಳ್, ಬಸವರಾಜ ಭೋವಿ, ರವಿಕುಮಾರ್ ಬಸಾಪಟ್ಟಣ, ಆನಂದ್ ಕಿನ್ನಾಳ ಹಾಲವರ್ತಿ ಸೇರಿ ಗಬ್ಬೂರು ಗ್ರಾಮದ ಯುವಕರು, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಮಾಜಿ ಸಂಸದ ಸಂಗಣ್ಣ ಕರಡಿ ಅಭಿಮಾನಿಗಳು, ಬೆಂಬಲಿಗರು ಬೃಹತ್ ಪ್ರಮಾಣದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ. ಬಹುತೇಕ ಗ್ರಾಮಗಳಲ್ಲಿ ಕಾಂಗ್ರೆಸ್ ಕ್ಲೀನ್‌ಸ್ವೀಪ್ ಆಗಲಿದೆ. ನಮ್ಮ ಅಭ್ಯರ್ಥಿ ರಾಜಶೇಖರ ಹಿಟ್ನಾಳ್ ಅವರು 2 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ.
ಅಮರೇಶ್ ಕರಡಿ, ಕಾಂಗ್ರೆಸ್ ಯುವ ಮುಖಂಡರು.

Get real time updates directly on you device, subscribe now.

Leave A Reply

Your email address will not be published.

error: Content is protected !!
%d bloggers like this: