ಚುನಾವಣಾ ಖರ್ಚು-ವೆಚ್ಚಗಳ ಲೆಕ್ಕ ಪತ್ರಗಳ ಪರಿಶೀಲನಾ ಸಭೆ ನಿಗದಿ

Get real time updates directly on you device, subscribe now.

ಲೋಕಸಭಾ ಚುನಾವಣೆ-2024ರ ಹಿನ್ನೆಲೆಯಲ್ಲಿ ಚುನಾವಣಾ ಖರ್ಚು-ವೆಚ್ಚಗಳ ಲೆಕ್ಕ ಪತ್ರಗಳ ಪರಿಶೀಲನಾ ಸಭೆಯನ್ನು ಏಪ್ರಿಲ್ 26 ಮತ್ತು 30 ಹಾಗೂ ಮೇ 4 ಕ್ಕೆ ನಿಗದಿಪಡಿಸಲಾಗಿದೆ.

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಚುನಾವಣಾ ಸಮಯದಲ್ಲಿ ಅಭ್ಯರ್ಥಿಗಳ ಚುನಾವಣಾ ಖರ್ಚು-ವೆಚ್ಚಗಳ ಲೆಕ್ಕ ಪತ್ರಗಳನ್ನು ಚುನಾವಣಾ ವೆಚ್ಚ ವೀಕ್ಷಕರು ಪರಿಶೀಲಿಸುವ ಸಲುವಾಗಿ ಮೂರು ಬಾರಿ ದಿನಾಂಕಗಳನ್ನು ನಿಗದಿಪಡಿಸಿ ಸಭೆಗಳನ್ನು ನಡೆಸಿ ಪರಿಶೀಲನೆ ಮಾಡಬೇಕಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಸಂಬಂಧಿಸಿದ ಚುನಾವಣಾ ಅಭ್ಯರ್ಥಿಗಳು, ಅಭ್ಯರ್ಥಿಗಳ ಏಜೆಂಟರುಗಳು ನಾಮಪತ್ರ ಸಲ್ಲಿಸಿದ ದಿನಾಂಕದಿಂದ ಮಾಡುವ ವೆಚ್ಚಗಳಿಗೆ ಸಂಬಂಧಿಸಿದಂತೆ ಭರಿಸಲಾದ ಚುನಾವಣಾ ವೆಚ್ಚಕ್ಕೆ ಸಂಬಂಧಿಸಿದಂತೆ ವಿವರಗಳನ್ನು ಪಾರ್ಟ್-ಎ (ಡೇ ಟು ಡೇ ರಿಜಿಸ್ಟರ್), ಪಾರ್ಟ್-ಬಿ (ಕ್ಯಾಶ್ ರಿಜಿಸ್ಟರ್), ಪಾರ್ಟ್-ಸಿ (ಬ್ಯಾಂಕ್ ರಿಜಿಸ್ಟರ್)ನಲ್ಲಿ ನಮೂದಿಸಿ ಸಂಬಂಧಿಸಿದ ವೋಚರ್ ಅಥವಾ ರಶೀದಿಗಳೊಂದಿಗೆ ಬ್ಯಾಂಕ್ ಪಾಸ್ ಪುಸ್ತಕದ ಪ್ರತಿಯೊಂದಿಗೆ ಹಾಗೂ ಚುನಾವಣೆಗೆ ಸಂಬಂಧಿಸಿದ ಅನುಮತಿ ಪಡೆದ ಆದೇಶ ಪ್ರತಿಗಳೊಂದಿಗೆ ಏ.26 ಮತ್ತು 30 ಹಾಗೂ ಮೇ 4 ರ ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಆಡಿಟೋರಿಯಂ ಸಭಾಂಗಣದಲ್ಲಿ ಕಡ್ಡಾಯವಾಗಿ ಹಾಜರಾಗುವಂತೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ನಲಿನ್ ಅತುಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!