ಬಿಜೆಪಿ ಟಿಕೆಟ್ ಮಾರಾಟ: ಅಮರೇಶ್ ಕರಡಿ

Get real time updates directly on you device, subscribe now.

ಕೊಪ್ಪಳ: ಬಿಜೆಪಿಯವರು ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಮಾರಾಟ ಮಾಡಿಕೊಂಡಿದ್ದಾರೆ ಎಂದು ಕಾಂಗ್ರೆಸ್ ಯುವ ನಾಯಕ ಅಮರೇಶ್ ಕರಡಿ ಆರೋಪಿಸಿದರು.
ಲೋಕಸಭಾ ಚುನಾವಣೆಯ ಪ್ರಯುಕ್ತ ಕೊಪ್ಪಳ ನಗರದ 21,22,23, ಮತ್ತು24 ನೇ ವಾರ್ಡ್ ನಲ್ಲಿ ಚುನಾವಣೆ ಪ್ರಚಾರವನ್ನು ಹಮ್ಮಿಕೊಂಡು ನಮ್ಮ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಆಗಿರುವ ಕೆ. ರಾಜಶೇಖರ್ ಹಿಟ್ನಾಳ ಅವರ ಪರವಾಗಿ ಮತಯಾಚನೆ ಮಾಡಿದರು.
ಬಿಜೆಪಿ ಪಕ್ಷ ಸಂಘಟಿಸಿ ಕ್ಷೇತ್ರದಲ್ಲಿ ಅಭಿವೃದ್ಧಿ ಮಾಡಿದ ಮಾಜಿ ಸಂಸದ ಸಂಗಣ್ಣ ಕರಡಿ ಅವರಿಗೆ ಟಿಕೆಟ್ ತಪ್ಪಿಸಿ ಜನರು ಮುಖ ನೋಡದ ಡಾ. ಬಸವರಾಜ ಕ್ಯಾವಟರ್ ಗೆ ಟಿಕೆಟ್ ನೀಡುವ ಮೂಲಕ ಟಿಕೆಟ್ ಮಾರಿಕೊಂಡಿದೆ ಎಂದರು.
ಕಾಂಗ್ರೆಸ್ ಪಕ್ಷ ನುಡಿದಂತೆ ನಡೆಯುವ ಪಕ್ಷ ರಾಜ್ಯದಲ್ಲಿ ಘೋಷಣೆ ಮಾಡಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ಕೊಟ್ಟ ಮಾತಿನಂತೆ ನಡೆದಿದ್ದೇವೆ. ಕಾಂಗ್ರೆಸ್ ಅಭ್ಯರ್ಥಿ ಕೆ. ರಾಜಶೇಖರ ಹಿಟ್ನಾಳ್ ಅವರು ಭಾರೀ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಚುನಾವಣೆ ಪ್ರಚಾರ ಕಾರ್ಯಕ್ರಮದಲ್ಲಿ ಶಾಸಕ ಕೆ.ರಾಘವೇಂದ್ರ ಹಿಟ್ನಾಳ, ಸ್ಥಳೀಯ ನಾಯಕರು ಉಪಸ್ಥಿತರಿದ್ದರು.

Get real time updates directly on you device, subscribe now.

Comments are closed.

error: Content is protected !!