ದೇಶದ ಸಮಗ್ರ ಅಭಿವೃದ್ಧಿಯೇ ಬಿಜೆಪಿಯ ಗುರಿ- ದೊಡ್ಡನಗೌಡ

Get real time updates directly on you device, subscribe now.

ಕುಷ್ಟಗಿ: ದೇಶದ ಸಮಗ್ರ ಅಭಿವೃದ್ಧಿಯೇ ಬಿಜೆಪಿಯ ಗುರಿಯಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್ ಹೇಳಿದರು.
ಯರಗೇರಾದಲ್ಲಿ ನಡೆದ ಲೋಕಸಭಾ ಚುನಾವಣೆ ಪ್ರಚಾರ ಪ್ರಯುಕ್ತ ಬಹಿರಂಗ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಸ್ತೆ, ಹೆದ್ದಾರಿ, ರೈಲ್ವೆ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿ ಮಾಡಲಾಗಿದೆ. ಬಡ ರಾಷ್ಟ್ರಗಳ ಪಟ್ಟಿಯಲ್ಲಿದ್ದ ಭಾರತವು ಕಳೆದ 10 ವರ್ಷದಲ್ಲಿ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ದೇಶಗಳ ಪಟ್ಟಿಯಲ್ಲಿ ಮುಂಚೂಣಿ ಸ್ಥಾನದಲ್ಲಿದೆ ಎಂದರು.
ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ. ಬಸವರಾಜ ಕೆ.ಶರಣಪ್ಪ ಮಾತನಾಡಿ, ಭಾರತದ ಭವ್ಯ ಕಲೆ, ಸಂಸ್ಕೃತಿ ಪರಂಪರೆಯನ್ನು ಪ್ರಧಾನಿ   ನರೇಂದ್ರ ಮೋದಿಜಿ ಸರ್ಕಾರ
ಜಗತ್ತಿಗೆ ಪರಿಚಯಿಸುತ್ತಿದೆ. ವಿಶ್ವ ಯೋಗ ದಿನವನ್ನು ಆಚರಿಸುವ ಮೂಲಕ ಯೋಗದ ಮಹತ್ವವನ್ನು ಪ್ರಧಾನಿ ಮೋದಿಯವರು ವಿಶ್ವಕ್ಕೆ ಸಾರಿದ್ದಾರೆ. ಗಲ್ಫ್ ರಾಷ್ಟ್ರಗಳು ಸೇರಿದಂತೆ ಅನೇಕ ದೇಶಗಳು ಸಹ ಇಂದು ಯೋಗ ದಿನದ ಪ್ರಾಮುಖ್ಯತೆ ಅರಿತು ವಿಶ್ವ ಯೋಗ ದಿನವು ವರ್ಷದ ಪ್ರಮುಖ ದಿನವೆಂದು ಅಳವಡಿಸಿಕೊಂಡಿವೆ ಎಂದರು.
ಈ ಸಂದರ್ಭದಲ್ಲಿ ಕುಷ್ಟಗಿ ಬಿಜೆಪಿ ಮಂಡಲದ ಅಧ್ಯಕ್ಷ ಮಹಾಂತೇಶ ಬದಾಮಿ, ಶಾಸಕ ಗಾಲಿ ಜನಾರ್ಧನ ರೆಡ್ಡಿ, ವಿಧಾನ ಪರಿಷತ್ ಸದಸ್ಯೆ  ಹೇಮಲತಾ ನಾಯಕ, ಸುಶೀಲ ನಮೋಷಿ, ಪ್ರಮುಖರಾದ ಪ್ರಭಾಕರ ಚಿಣಿ, ದೇವೆಂದ್ರಪ್ಪ ಬಳೂಟಗಿ, ಫಕೀರಪ್ಪ ಚಳ್ಳಿಗೇರಿ, ಗಣೇಶ ಪೂಜಾರಿ, ಶಂಕರ ಕರಪುಡಿ, ಜಗ್ಗನಗೌಡ, ಶಂಕರಗೌಡ್ರು, ಗಣೇಶ ಹೊರತಟ್ನಾಳ, ನಬಿಸಾಬ ಕುಷ್ಟಗಿ, ಮಲ್ಲಣ್ಣ ಪಲ್ಲೇದ ಸೇರಿದಂತೆ ಉಭಯ ಪಕ್ಷದ ಪ್ರಮುಖರು, ಪದಾಧಿಕಾರಿಗಳು, ಕಾರ್ಯಕರ್ತರು, ಸಾರ್ವಜನಿಕರು ಉಪಸ್ಥಿತರಿದ್ದರು.

Get real time updates directly on you device, subscribe now.

Comments are closed.

error: Content is protected !!