ವಕೀಲ ರಕ್ಷಣಾ ಕಾಯ್ದೆ ಜಾರಿಗೆ ಕ್ರಮ ವಹಿಸಲು ಸಿದ್ದ-ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

Get real time updates directly on you device, subscribe now.

ವಕೀಲರ ವಿಮೆ ಜಾರಿಗೂ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು

ಬೆಂಗಳೂರು : ವಕೀಲರ ರಕ್ಷಣಾ ಕಾಯ್ದೆಯನ್ನು ಜಾರಿಗೆ ತರಲು ನಾವು ಬದ್ದವಾಗಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು.

ಬೆಂಗಳೂರು ವಕೀಲರ ಸಂಘ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ನ್ಯಾಯಮೂರ್ತಿ ಬಿ.ವೀರಪ್ಪ ಅವರ ಬೀಳ್ಕೊಡುಗೆ ಸಮಾರಂಭದಲ್ಲಿ ಈ ಭರವಸೆ ನೀಡಿದರು.

ನಾನು ವಿರೋಧ ಪಕ್ಷದ ನಾಯಕನಾಗಿದ್ದಾಗ ವಕೀಲ ಸಮೂಹ ಈ ಕಾಯ್ದೆ ಜಾರಿಗೆ ಆಗ್ರಹಿಸಿ ಪ್ರತಿಭಟಿಸಿದ್ದರು. ಈ ಪ್ರತಿಭಟನೆಗೆ ನಾನೂ ಬೆಂಬಲ ಸೂಚಿಸಿ ವಿಧಾನಸಭೆಯಲ್ಲಿ ವಕೀಲ ಸಮೂಹದ ಪರವಾಗಿ ಧ್ವನಿ ಎತ್ತಿದ್ದೆ. ಈಗ ನಾವೇ ಅಧಿಕಾರಕ್ಕೆ ಬಂದಿದ್ದೇವೆ. ಈಗ ಈ ಕಾಯ್ದೆಯನ್ನು ಜಾರಿಗೆ ತರುವ ನಿಟ್ಟಿನಲ್ಲಿ ಬದ್ದವಾಗಿದ್ದೇವೆ ಎಂದರು.

ಇದೇ ಸಂದರ್ಭದಲ್ಲಿ ವಕೀಲರ ಸಂಘ “ವಕೀಲರ ವಿಮೆ ಯೋಜನೆಯನ್ನೂ ಜಾರಿಗೆ ತರುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು. ಈ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಈ ಬಗ್ಗೆಯೂ ಸಮಗ್ರವಾಗಿ ಚರ್ಚಿಸಿ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.

Get real time updates directly on you device, subscribe now.

Comments are closed.

error: Content is protected !!