ರಾಮಭಂಟ ಆಂಜನೇಯನ ಅಂಜನಾದ್ರಿಯ ಅಭಿವೃದ್ಧಿಗೊಳಿಸಲು ಬಿಜೆಪಿ ಸರ್ಕಾರ ಬದ್ಧ: ಡಾ.ಬಸವರಾಜ
ಗಂಗಾವತಿ: ದಶಕಗಳ ಕಾಲದ ಕನಸಾಗಿದ್ದ ಭವ್ಯ ರಾಮಮಂದಿರವನ್ನು ಈಗಾಗಲೇ ಮೋದಿ ಸರ್ಕಾರ ಈಡೇರಿಸಿದೆ. ಅದೇ ರೀತಿ ರಾಮಭಂಟ ಆಂಜನೇಯನ ಅಂಜನಾದ್ರಿಯ ಅಭಿವೃದ್ಧಿಗೊಳಿಸಲು ಬಿಜೆಪಿ ಸರ್ಕಾರ ಬದ್ಧವಾಗಿದೆ ಎಂದು ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಬಸವರಾಜ ಕೆ. ಶರಣಪ್ಪ ಹೇಳಿದರು.
ನಗರದಲ್ಲಿ ನಡೆದ ಚುನಾವಣಾ ಬಹಿರಂಗ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಿಮ್ಮ ಮತ ಬಿಜೆಪಿ ಪಕ್ಷಕ್ಕೆ ಹಾಕಿ ಆಶೀರ್ವದಿಸಿ ಎಂದು ವಿನಂತಿಸಿಕೊಂಡರು.
ಹಿಂದಿನ ಬಿಜೆಪಿ ಸರ್ಕಾರದಲ್ಲಿ ಶಾಸಕರಾಗಿದ್ದ ಪರಣ್ಣ ಮುನವಳ್ಳಿ ಅವರು ಅಂಜನಾದ್ರಿ ಅಭಿವೃದ್ಧಿ ಗೆ 100 ಕೋಟಿ ರೂ. ತಂದಿದ್ದರು. ಬೊಮ್ಮಾಯಿ ಅವರು ಶಂಕುಸ್ಥಾಪನೆ ನೆರವೇರಿಸಿದರು. ಈಗೀನ ಕಾಂಗ್ರೆಸ್ ಸರ್ಕಾರ ಇನ್ನೂ ಕಾಮಗಾರಿ ಪೂರ್ಣಗೊಳಿಸಿಲ್ಲ. ಜನರ ಆಶೀರ್ವಾದ ದಿಂದ ಮತ್ತೊಮ್ಮೆ ಮೋದಿ ಅವರು ಪ್ರಧಾನಿಯಾದರೆ ಕೇಂದ್ರ ಸರ್ಕಾರದಿಂದ ಅನುದಾನ ತರಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕೊಪ್ಪಳ ಬಿಜೆಪಿ ಜಿಲ್ಲಾಧ್ಯಕ್ಷ ನವೀನ ಗುಳಗಣ್ಣನವರ, ಗಂಗಾವತಿ ಶಾಸಕ ಗಾಲಿ ಜನಾರ್ಧನ ರೆಡ್ಡಿ, ಮಾಜಿ ಸಚಿವ ಸಿ.ಟಿ.ರವಿ, ಮಾಜಿ ಶಾಸಕ ಪರಣ್ಣ ಮುನವಳ್ಳಿ, ನಗರ ಮಂಡಲ ಅಧ್ಯಕ್ಷರಾದ ಕಾಶಿನಾಥ ಚಿತ್ರಗಾರ, ಪ್ರಮುಖರಾದ ವಿರುಪಾಕ್ಷಪ್ಪ ಸಿಂಗನಾಳ, ತಿಪ್ಪೇರುದ್ರಸ್ವಾಮಿ, ಜಿ.ವೀರಪ್ಪ, ಸಿದ್ದರಾಮಯ್ಯ ಸ್ವಾಮಿ, ಅಮರ ಜ್ಯೋತಿ ನರಸಪ್ಪ, ಕೆ.ಅಂಬಣ್ಣ, ರುದ್ರೇಶ ಡಗ್ಗಿ, ರಾಘವೇಂದ್ರ ಶೆಟ್ಟಿ ಸೇರಿದಂತೆ ಎಲ್ಲಾ ನಗರಸಭೆ ಸದಸ್ಯರು, ಉಭಯ ಪಕ್ಷದ ಪ್ರಮುಖರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು
Comments are closed.