ಕೊಪ್ಪಳ ಲೋಕಸಭಾ ಕ್ಷೇತ್ರ ಕೈ ವಶ ನಿಶ್ಚಿತ: ವೀಣಾ ಕಾಶಪ್ಪನವರ್

Get real time updates directly on you device, subscribe now.

ಕೊಪ್ಪಳ: ಕೊಪ್ಪಳ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ವಶಕ್ಕೆ ಪಡೆಯುವುದು ನಿಶ್ಚಿತ ಎಂದು ಕೊಪ್ಪಳ ಲೋಕಸಭಾ ಕ್ಷೇತ್ರದ ಪ್ರಚಾರ ಉಸ್ತುವಾರಿ ವೀಣಾ ಕಾಶಪ್ಪನವರ್ ವಿಶ್ವಾಸ ವ್ಯಕ್ತಪಡಿಸಿದರು.
ಬಿ.ಟಿ.ಪಾಟೀಲ್ ನಗರದ ಶಾಸಕರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಎರಡು ಬಾರಿ ಕಡಿಮೆ ಅಂತರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗಳು ಪರಾಭವ ಗೊಂಡಿದ್ದಾರೆ. ಎರಡು ಬಾರಿ ಗೆಲುವು ಸಾಧಿಸಿದ್ದ ಮಾಜಿ ಸಂಸದ ಸಂಗಣ್ಣ ಕರಡಿ ಅವರು ಕಾಂಗ್ರೆಸ್ ಸೇರ್ಪಡೆ ಗೊಂಡಿದ್ದು ಪಕ್ಷಕ್ಕೆ ಮತ್ತಷ್ಟು ಬಲ ಬಂದಿದೆ. ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಲಾಗುತ್ತಿದ್ದು, ಈ ಬಾರಿ ಬಾರೀ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಕೆ.ರಾಜಶೇಖರ ಹಿಟ್ನಾಳ್ ಗೆಲುವು ಸಾಧಿಸಲಿದ್ದಾರೆ ಎಂದರು.
ಇನ್ನು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಹತ್ತು ತಿಂಗಳಲ್ಲೇ ಘೋಷಿಸಿದ್ದ ಐದು ಗ್ಯಾರೆಂಟಿ ಅನುಷ್ಠಾನ ಗೊಳಿಸಲಾಗಿದೆ. ಮಹಿಳೆಯರ ಸಬಲೀಕರಣಕ್ಕೆ ಪಣ ತೊಟ್ಟಿರುವ ಕಾಂಗ್ರೆಸ್ ಪರಿಣಾಮಕಾರಿಯಾಗಿ ಯೋಜನೆ ಅನುಷ್ಠಾನಗೊಳಿಸಲಾಗಿದೆ. ಬಡವರ, ದಲಿತರ, ಅಲ್ಪಸಂಖ್ಯಾತರು ಸೇರಿ ಎಲ್ಲ ಜನಾಂಗದ ಶ್ರೆಯೋಭಿವೃದ್ಧಿಗೆ ಕಾಂಗ್ರೆಸ್ ಹಲವಾರು ಯೋಜನೆ ಜಾರಿ ತಂದಿದೆ ಎಂದು ತಿಳಿಸಿದರು.
ಶಾಸಕ ಕೆ.ರಾಘವೇಂದ್ರ ಹಿಟ್ನಾಳ್ ಮಾತನಾಡಿ, ಕೊಪ್ಪಳ ಲೋಕಸಭಾ ಕ್ಷೇತ್ರದ ಮತದಾರರು ಕಾಂಗ್ರೆಸ್ ಪರ ಒಲವು ಹೊಂದಿದ್ದಾರೆ. ಹೋದ ಕಡೆಯಲ್ಲ ಅತ್ಯುತ್ತಮ ಪ್ರೋತ್ಸಾಹ ಸಿಗುತ್ತಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಗ್ಯಾರೆಂಟಿ ಯೋಜನೆ ಮನೆ ಮನೆಗೆ ಮುಟ್ಟಿಸುವ ಮೂಲಕ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ರಾಘವೇಂದ್ರ ಹಿಟ್ನಾಳ್ ಅವರು 2 ಲಕ್ಷ ಮತಗಳ ಅಂತರದಲ್ಲಿ ಗೆಲುವು ಸಾಧಿಸಲಿದ್ದಾರೆ. ಕೊಪ್ಪಳ ವಿಧಾನಸಭಾ ಕ್ಷೇತ್ರದಲ್ಲಿ 25 ಸಾವಿರ ಲೀಡ್ ಬರಲಿದೆ.
-ಅಮರೇಶ್ ಕರಡಿ, ಕಾಂಗ್ರೆಸ್ ಯುವ ಮುಖಂಡರು.

Get real time updates directly on you device, subscribe now.

Comments are closed.

error: Content is protected !!