ರೈತರ ಸಮಸ್ಯೆಗೆ ಸ್ಪಂದಿಸದ ರೈತ ವಿರೋಧಿ ಬಿಜೆಪಿ ಸರ್ಕಾರ-  ಕೆ. ರಾಘವೇಂದ್ರ ಹಿಟ್ನಾಳ

Get real time updates directly on you device, subscribe now.


— ವಿವಿಧ ಗ್ರಾಮದ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

ಕೊಪ್ಪಳ: ರೈತರ ಸಮಸ್ಯೆಗೆ ಸ್ಪಂದಿಸದ ರೈತ ವಿರೋಧಿ ಬಿಜೆಪಿ ಸರ್ಕಾರವನ್ನು ಕೇಂದ್ರದಲ್ಲಿ ಮುಂದುವರಿಯಲು ಅವಕಾಶ ನೀಡಬೇಡಿ ಎಂದು ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಹೇಳಿದರು.

ಇಲ್ಲಿನ ಬಿ.ಟಿ. ಪಾಟೀಲ್ ನಗರದಲ್ಲಿನ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಗುರುವಾರ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ರೈತರಿಗೆ ಆಶ್ವಾಸನೆ ನೀಡಿ ಅಧಿಕಾರಕ್ಕೆ ಬಂದ ಪ್ರಧಾನಿ‌ ಮೋದಿಯವರು ಹತ್ತು ವರ್ಷ ಕಳೆದರು ರೈತರ ಯಾವುದೇ ಬೇಡಿಕೆ ಈಡೇರಿಸದೇ ವಂಚಿಸಿದ್ದಾರೆ. ರೈತರ ಹಿತಕ್ಕಿಂತ ಕಾರ್ಪೋರೆಟ್ ಕಂಪನಿ ಮಾಲೀಕರ ಹಿತವೇ ಮುಖ್ಯವಾಗಿದೆ. ದೇಶಾದ್ಯಂತ ರೈತರು ಆರ್ಥಿಕ ಸಂಕಷ್ಟಕ್ಕೆ ತುತ್ತಾದರು ಸಾಲ ಮನ್ನಾ ಮಾಡದೇ, ಶ್ರೀಮಂತರ ಸಾಲ ಮನ್ನಾ ಮಾಡಿದ್ದಾರೆ. ಬಿಜೆಪಿಯವರಿಗೆ ಮಾನ ಮರ್ಯಾದೆ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೊಪ್ಪಳ ಲೋಕಸಭಾ ವ್ಯಾಪ್ತಿಯ ಎಂಟು ಕ್ಷೇತ್ರದಲ್ಲೂ ಕಾಂಗ್ರೆಸ್ ಅಭ್ಯರ್ಥಿಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ. ಜನರು ತೋರುವ ಪ್ರೀತಿ, ಅಭಿಮಾನ‌ ನೋಡಿದರೇ ನಮ್ಮ ಅಭ್ಯರ್ಥಿ ಒಂದೂವರೆ ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸುತ್ತಾರೆ ಎಂಬ ವಿಶ್ವಾಸವಿದೆ. ಎಲ್ಲ ಸಮುದಾಯದ ಮುಖಂಡರು, ಬೀದಿ ಬದಿ ವ್ಯಾಪಾರಸ್ಥರು ಕಾಂಗ್ರೆಸ್ ಬೆಂಬಲಿಸುತ್ತಿದ್ದಾರೆ. ಕಾಂಗ್ರೆಸ್ ನ ಜನಪರ ಕಾರ್ಯಕ್ರಮ ಮೆಚ್ಚಿ ನಿತ್ಯ ನೂರಾರು ಕಾರ್ಯಕರ್ತರು ಪಕ್ಷ ಸೇರ್ಪಡೆಗೊಳ್ಳುವ ಮೂಲಕ ನಮ್ಮ ಕೈ ಬಲಪಡಿಸುತ್ತಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಬಸವರಾಜ ಹಿಟ್ನಾಳ, ಜಿಪಂ ಮಾಜಿ ಅಧ್ಯಕ್ಷ ಎಸ್.ಬಿ. ನಾಗರಳ್ಳಿ, ಕಾಂಗ್ರೆಸ್ ಮುಖಂಡರಾದ ಅಂಜಪ್ಪ ಕುರುಬರ, ಗವಿಸಿದ್ದಪ್ಪ ಹಿಡಗಲ್, ಗಾಳೆಪ್ಪ ಸುಣಗಾರ, ಬಸವರಾಜ ಕೊಪ್ಪಳ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.


ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ:
ಬೇಳೂರಿನ ದೊಡ್ಡನಿಂಗಜ್ಜ ತಳವಾರ, ಫಕೀರಗೌಡ ನಂದಿನಗೌಡ್ರ, ಕೊಟ್ರಪ್ಪ ಹಕಾರಿ, ಬಸವರಾಜ ಗೊಂದಿಹೊಸಳ್ಳಿ, ದೇವಪ್ಪ ವೆಂಕಟಾಪುರ, ಸಣ್ಣನಿಂಗಪ್ಪ ತಳವಾರ, ರಾಮಣ್ಣ ಚಲ್ಲಾ, ಗವಿಸಿದ್ದಪ್ಪ ತಳವಾರ, ಸಣ್ಣಮಲ್ಲಪ್ಪ ಗುಡ್ಲಾನೂರ, ಬೀರಪ್ಪ ಗುಡ್ಲಾನೂರ ಸೇರಿದಂತೆ ವಿವಿಧ ಗ್ರಾಮದ ಕಾರ್ಯಕರ್ತರು ಶಾಸಕ ಕೆ. ರಾಘವೇಂದ್ರ ಹಿಟ್ನಾಳ ನೇತೃತ್ವದಲ್ಲಿ ಕಾಂಗ್ರೆಸ್ ಸೇರಿದರು.

Get real time updates directly on you device, subscribe now.

Comments are closed.

error: Content is protected !!
%d bloggers like this: