ಎಲ್ಲ ಇಲಾಖೆಗಳ ಅಧಿಕಾರಿಗಳು ತಮ್ಮ ಸಿಬ್ಬಂದಿಯೊoದಿಗೆ ಬೈಕ್ ರ್ಯಾ ಲಿಯಲ್ಲಿ ಭಾಗವಹಿಸಿ: ಸಿಇಒ

Get real time updates directly on you device, subscribe now.

: ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ರ ಅಂಗವಾಗಿ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಸ್ವೀಪ್ ಕಾರ್ಯಕ್ರಮದಡಿ ಮೇ 04 ರಂದು ಬೈಕ್ ರ್ಯಾ ಲಿಯನ್ನು ಆಯೋಜಿಸಿದ್ದು, ಈ ಕಾರ್ಯಕ್ರಮಕ್ಕೆ ಎಲ್ಲ ಇಲಾಖೆಗಳ ಅಧಿಕಾರಿಗಳು ತಮ್ಮ ಸಿಬ್ಬಂದಿಯೊoದಿಗೆ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾ ಸ್ವೀಪ್ ಸಮತಿ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ಹೇಳಿದರು.

ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಸ್ವೀಪ್ ಕಾರ್ಯಕ್ರಮದಡಿ ಆಯೋಜಿಸಿರುವ ಬೈಕ್ ರ್ಯಾ ಲಿ ಕಾರ್ಯಕ್ರಮದ ಕುರಿತು ಚರ್ಚಿಸಲು ಶುಕ್ರವಾರದಂದು ಜಿಲ್ಲಾ ಪಂಚಾಯತಿಯ ಸ್ಥಾಯಿ ಸಮಿತಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಮೇ 07 ರಂದು ಲೋಕಸಭಾ ಚುನಾವಣೆಗೆ ಮತದಾನ ನಡೆಯಲಿದ್ದು, ಇದರ ಅಂಗವಾಗಿ ಮತದಾರರಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸಲು ಮೇ 04 ರಂದು ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಬೈಕ್ ರ್ಯಾ ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಅಂದು ಬೆಳಿಗ್ಗೆ 09 ಗಂಟೆಗೆ ಬೈಕ್ ರ್ಯಾ ಲಿಯು ನಗರದ ತಾಲ್ಲೂಕು ಕ್ರೀಡಾಂಗಣದಿoದ ಆರಂಭಗೊoಡು ಅಶೋಕ ಸರ್ಕಲ್ ಮೂಲಕ ಬಸ್ಸ್ಟ್ಯಾಂಡ್ ಮಾರ್ಗವಾಗಿ ಭಾಗ್ಯನಗರ ಫ್ಲೆಓವರ್  ಮುಖಾಂತರ ಭಾಗ್ಯನಗರದ ಪ್ರಮುಖ ವಾರ್ಡ್ಗಳಲ್ಲಿ ಬೈಕ್ ರ್ಯಾ ಲಿ ಸಂಚರಿಸಿ, ಇದೇ ಮಾರ್ಗವಾಗಿ ಭಾಗ್ಯನಗರದ ಮುಖ್ಯ ಬೀದಿಯಿಂದ ಓಜನಹಳ್ಳಿ ಗ್ರಾಮಕ್ಕೆ ಸಂಚರಿಸಿ ನಂತರ ಓಜನಹಳ್ಳಿ ಮುಖ್ಯ ರಸ್ತೆಯಿಂದ ಕೊಪ್ಪಳ ರಸ್ತೆ ಮಾರ್ಗವಾಗಿ ಭಾಗ್ಯನಗರ ಕ್ರಾಸ್ ಮೂಲಕ  ಕಿನ್ನಾಳ ರಸ್ತೆ ಮುಖಾಂತರ ಅಶೋಕ್ ಸರ್ಕಲ್ ಮಾರ್ಗವಾಗಿ ಸಂಚರಿಸಿ ತಾಲ್ಲೂಕು ಕ್ರೀಡಾಂಗಣದಲ್ಲಿ ಮುಕ್ತಾಯಗೊಳ್ಳುತ್ತದೆ. ಈ ಬೈಕ್ ರ್ಯಾ ಲಿ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕಿನ ಎಲ್ಲ ಇಲಾಖೆಗಳ ಅಧಿಕಾರಿಗಳು ತಮ್ಮ ಇಲಾಖೆಯ ಸಿಬ್ಬಂದಿಯೊoದಿಗೆ ನಿಗದಿತ ಸಮಯಕ್ಕೆ ಕಡ್ಡಾಯವಾಗಿ ಬೈಕ್‌ಗಳೊಂದಿಗೆ ಹೆಲ್ಮೆಟ್ ಧರಿಸಿ ಹಾಜರಿದ್ದು, ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಅವರು ಅಧಿಕಾರಿಗಳಿಗೆ ತಿಳಿಸಿದರು.

ಬೈಕ್ ರ್ಯಾ ಲಿಯಲ್ಲಿ ಪಾಲ್ಗೊಳ್ಳುವ ಎಲ್ಲರಿಗೂ ಶುದ್ಧ ಕುಡಿಯುವ ನೀರು ಹಾಗೂ ಮಜ್ಜಿಗೆ ವ್ಯವಸ್ಥೆ, ಹಿಂಬದಿ ಸವಾರರಿಗೆ ಕ್ಯಾಪ್ ವ್ಯವಸ್ಥೆ ಮಾಡಬೇಕು. ಮತದಾನದ ಘೋಷ ವಾಕ್ಯಗಳ ಬಟಿಂಗ್ಸ್, ವಾಹನಗಳಲ್ಲಿ ಜಿಂಗಲ್ಸ್ಗಳನ್ನು ಪ್ರಸಾರ ಮಾಡಬೇಕು. ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಬೇಕು. ಆರೋಗ್ಯ ಇಲಾಖೆಯಿಂದ ಒಂದು ಅಂಬ್ಯುಲೆನ್ಸ್ ಒದಗಿಸಬೇಕು. ಪ್ರಥಮ ಚಿಕಿತ್ಸಾ ಪೆಟ್ಟಿಗೆ, ಅಗತ್ಯ ಚಿಕಿತ್ಸಾ ಸಾಮಗ್ರಿ, ಔಷಧಿಗಳೊಂದಿಗೆ ವೈದ್ಯರ ತಂಡವನ್ನು ಒದಗಿಸಬೇಕು. ಬೈಕ್ ರ್ಯಾ ಲಿಯಲ್ಲಿ ಆಯಾ ಇಲಾಖಾ ಅಧಿಕಾರಿಗಳು ತಮ್ಮ ಸಿಬ್ಬಂದಿಗಳ ಜವಾಬ್ದಾರಿಯನ್ನು ವಹಿಸಿಕೊಂಡು, ಶಿಸ್ತುಬದ್ಧ ಹಾಗೂ ಅರ್ಥಪೂರ್ಣ ರ್ಯಾ ಲಿ ನಡೆಯಲು ಸಹಕರಿಸಬೇಕು ಎಂದು ಅವರು ಅಧಿಕಾರಿಗಳಿಗೆ ಹೇಳಿದರು.

ಸಭೆಯಲ್ಲಿ ಡಿಡಿಪಿಐ ಶ್ರೀಶೈಲ ಬಿರಾದಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ತಿಪ್ಪಣ್ಣ ಸಿರಸಗಿ, ಜಿ.ಪಂ. ಸಹಾಯಕ ಕಾರ್ಯದರ್ಶಿಗಳಾದ ಶಿವಪ್ಪ ಸುಬೇದಾರ, ತಹಶೀಲ್ದಾರ ವಿಠ್ಠಲ್ ಚೌಗಲಾ, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ದುಂಡಪ್ಪ ತುರಾದಿ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ನಾಗರಾಜ ಜುಮ್ಮನ್ನವರ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Get real time updates directly on you device, subscribe now.

Comments are closed.

error: Content is protected !!
%d bloggers like this: