ಲೋಕಸಭಾ ಸಾರ್ವತ್ರಿಕ ಚುನಾವಣೆ: ಮತದಾರರ ಸೌಲಭ್ಯ ಕೇಂದ್ರಗಳ ವ್ಯವಸ್ಥೆಯ ಪರಿಷ್ಕರಣೆ

Get real time updates directly on you device, subscribe now.

ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಮತ್ತು 36-ಶೋರಾಪುರ ವಿಧಾನಸಭೆಯ ಉಪ ಚುನಾವಣೆಗೆ ಕಾರ್ಯ ನಿರತ ಸಿಬ್ಬಂದಿ ಮತದಾರರಿಗೆ ವ್ಯವಸ್ಥೆಯನ್ನು ಕಲ್ಪಿಸಲು, ಮತದಾರರ ಸೌಲಭ್ಯ ಕೇಂದ್ರಗಳ ವ್ಯವಸ್ಥೆಯನ್ನು ಪರಿಷ್ಕರಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ನಲಿನ್ ಅತುಲ್ ಅವರು ತಿಳಿಸಿದ್ದಾರೆ.

ಭಾರತ ಚುನಾವಣಾ ಆಯೋಗವು ಚುನಾವಣೆಗಳಲ್ಲಿ ಅಂಚೆ ಮತಪತ್ರಗಳನ್ನು ವಿತರಿಸುವ ಬಗ್ಗೆ ನಿರ್ದೇಶನಗಳನ್ನು ನೀಡಿರುತ್ತದೆ. ಮುಖ್ಯ ಚುನಾವಣಾಧಿಕಾರಿಗಳು, ಕರ್ನಾಟಕ ಇವರು ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರೊಂದಿಗೆ 36-ಶೋರಾಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಸಹ ಇರುವುದರಿಂದ ಮತ್ತು ಈ ವಿಧಾನಸಭಾ ಕ್ಷೇತ್ರದ ಮತದಾರರನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿರುವುದರಿಂದ ಆಯಾ ಲೋಕಸಭಾ ಕ್ಷೇತ್ರದಲ್ಲಿ ನೊಂದಾಯಿತರಾದ 36-ಶೋರಾಪುರ ವಿಧಾನಸಭಾ ಕ್ಷೇತ್ರದ ಮತದಾರರಿಗೆ ಅಂಚೆ ಮತಪತ್ರಗಳನ್ನು ಹಾಕಲು ಮತದಾರರ ಸೌಲಭ್ಯ ಕೇಂದ್ರ (Voter Facilitation Centre)ಗಳಲ್ಲಿ ಪ್ರತ್ಯೇಕವಾಗಿ ಅಗತ್ಯ ವ್ಯವಸ್ಥೆಯನ್ನು ಮಾಡಿಕೊಳ್ಳುವಂತೆ ಮತ್ತು ಅಂತಹ ಅಂಚೆ ಮತಪತ್ರಗಳನ್ನು ಮತದಾನದ ನಂತರ ಪ್ರತ್ಯೇಕವಾಗಿ ಚುನಾವಣಾಧಿಕಾರಿಗಳು, 36-ಶೋರಾಪುರ ವಿಧಾನಸಭಾ ಕ್ಷೇತ್ರ ಇವರಿಗೆ ಕಳುಹಿಸಿಕೊಡಲು ಕೋರಿರುತ್ತಾರೆ.

ಈ ಆದೇಶಗಳ ಮೂಲಕ ಚುನಾವಣಾಧಿಕಾರಿಗಳ ಕಛೇರಿ, 08-ಕೊಪ್ಪಳ ಲೋಕಸಭಾ ಕ್ಷೇತ್ರ ಇಲ್ಲಿ ಮತದಾರರ ಸೌಲಭ್ಯ ಕೇಂದ್ರವನ್ನು ಸ್ಥಾಪಿಸಲಾಗಿದ್ದು, ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಚುನಾವಣಾ ಕರ್ತವ್ಯದಲ್ಲಿ ನಿರತರಾದ ಅಧಿಕಾರಿ/ಸಿಬ್ಬಂದಿ ಮತದಾರರಿಗೆ ಮೇ 4 ರಿಂದ ಮೇ 6ರವರೆಗೆ ಅಂಚೆ ಮತದಾನವನ್ನು ನಿಗದಿಪಡಿಸಲಾಗಿರುತ್ತದೆ. 36-ಶೋರಾಪುರ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಕರ್ತವ್ಯದಲ್ಲಿ ನಿರತರಾದ ಮತದಾರರಿಗೆ ಪ್ರತ್ಯೇಕ ವ್ಯವಸ್ಥೆಯನ್ನು ಮಾಡುವಂತೆ ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳು ನಿರ್ದೇಶಿಸಿರುವುದರಿಂದ, ಮತದಾರರ ಸೌಲಭ್ಯ ಕೇಂದ್ರದ ವ್ಯವಸ್ಥೆಯನ್ನು ಪರಿಷ್ಕರಿಸಲಾಗಿದೆ.

ಪರಿಷ್ಕತ ಮತದಾರರ ಸೌಲಭ್ಯ ಕೇಂದ್ರಗಳ ವಿವರ: 08-ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಕರ್ತವ್ಯ ನಿರತರಾದ 36-ಶೋರಾಪುರ ವಿಧಾನಸಭಾ ಕ್ಷೇತ್ರದ ಮತದಾರರು ಹಾಗೂ 08-ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಕರ್ತವ್ಯ ನಿರತ ಇತರೆ ಮತಕ್ಷೇತ್ರದ ಮತದಾರರ ಮತದಾರರ ಸೌಲಭ್ಯ ಕೇಂದ್ರವನ್ನು ಕೊಪ್ಪಳ ಜಿಲ್ಲಾಡಳಿತ ಭವನದ ಉದ್ಯೋಗ ವಿನಿಮಯ ಕಛೇರಿಯಲ್ಲಿ ಮತ್ತು 08-ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಕರ್ತವ್ಯ ನಿರತ ಇತರೆ ಮತಕ್ಷೇತ್ರದ ಮತದಾರರು ಸೌಲಭ್ಯ ಕೇಂದ್ರವನ್ನು ಜಿಲ್ಲಾ ಚುನಾವಣಾಧಿಕಾರಿಗಳ ಕಛೇರಿ (ಜಿಲ್ಲಾಧಿಕಾರಿಗಳ ಕಾರ್ಯಾಲಯ) ಕೆಎಸ್ವಾನ್ ಕೊಠಡಿ-2ರಲ್ಲಿ ಸ್ಥಾಪಿಸಲಾಗಿದ್ದು, ಈ ಮತದಾರರ ಸೌಲಭ್ಯ ಕೇಂದ್ರಗಳು ಮೇ 4 ರಿಂದ ಮೇ 6 ರವರೆಗೆ ಕಛೇರಿ ವೇಳೆಯಲ್ಲಿ ಕಾರ್ಯನಿರ್ವಹಿಸಲಿವೆ. ಈ ಮತದಾರರ ಸೌಲಭ್ಯ ಕೇಂದ್ರಗಳಿಗೆ ವಿವಿಧ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.

08-ಕೊಪ್ಪಳ ಲೋಕಸಭಾ ಕ್ಷೇತ್ರದ ಎಲ್ಲಾ ಸಹಾಯಕ ಚುನಾವಣಾಧಿಕಾರಿಗಳು ತಮ್ಮ ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣಾ ಕರ್ತವ್ಯದಲ್ಲಿ ನಿರತರಾಗಿರುವ ಎಲ್ಲಾ ಮತದಾರರಿಗೆ ಅಗತ್ಯ ಮಾಹಿತಿಯನ್ನು ನೀಡುವಂತೆ ಪ್ರಕಟಣೆ ತಿಳಿಸಿದೆ.

Get real time updates directly on you device, subscribe now.

Comments are closed.

error: Content is protected !!