ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ : ಡಿಪ್ಲೋಮಾ ಕೋರ್ಸಿಗೆ ಅರ್ಜಿ ಆಹ್ವಾನ
2024-25 ನೇ ಸಾಲಿನ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಕೋರ್ಸ್ ಕಲಿಕೆಗಾಗಿ 44 ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಈ ಕೆಳಕಂಡ ಸಂಸ್ಥೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲೀಷ್ ಭಾಷೆಯನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ದಿನಾಂಕ: 01-07-2024 ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳು 15 ರಿಂದ 23 ರ ವಯೋಮಿತಿಯಲ್ಲಿರಬೇಕು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 15 ರಿಂದ 25 ರ ವಯೋಮಿತಿಯಲ್ಲಿರಬೇಕು. ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಕ್ರೋಢೀಕೃತ ಅಂಕಗಳು ಮೆರಿಟ್ ಲೆಕ್ಕಾಚಾರಕ್ಕೆ ಆಧಾರವಾಗಿರುತ್ತವೆ.
ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಗದಗ-ಬೆಟಗೇರಿ (ಕರ್ನಾಟಕ) ಸಂಸ್ಥೆಯಲ್ಲಿ 22 ಅಭ್ಯರ್ಥಿಗಳು, ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಸೇಲಂ (ತಮಿಳುನಾಡು) ಸಂಸ್ಥೆಯಲ್ಲಿ 17 ಅಭ್ಯರ್ಥಿಗಳು, ಎಸ್.ಪಿ.ಕೆ.ಎಂ. ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ವೆಂಕಟಗಿರಿ (ನೆಲ್ಲೂರು ಜಿಲ್ಲೆ, ಆಂಧ್ರಪ್ರದೇಶ) ಸಂಸ್ಥೆಯಲ್ಲಿ 03 ಅಭ್ಯರ್ಥಿಗಳು, ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಕಣ್ಣೂರು (ಕೇರಳ) ಸಂಸ್ಥೆಯಲ್ಲಿ 02 ಅಭ್ಯರ್ಥಿಗಳ ಸೀಟುಗಳು ಲಭ್ಯವಿದ್ದು, ಒಟ್ಟು 44 ಸೀಟುಗಳಿಗೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಮೆರಿಟ್ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯಾ ಡಿಪ್ಲೋಮಾ ಸಂಸ್ಥೆಗಳಲ್ಲಿ ಕೋರ್ಸ್ ಪ್ರವೇಶ ಕುರಿತಂತೆ ಕೌನ್ಸಲಿಂಗ್‌ಗಾಗಿ ಕರೆಯಲಾಗುವುದು. ಆಸಕ್ತಿ ಇರುವ ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗಾಗಿ ಮತ್ತು ಅರ್ಜಿ ಫಾರಂಗಳಿಗಾಗಿ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪೂರ, ಗದಗ-ಬೆಟಗೇರಿ ದೂರವಾಣಿ ಸಂ: 08372-297221, ಮೊಬೈಲ್ ಸಂಖ್ಯೆ: 9449162822 ಅಥವಾ ಆಯಾ ಜಿಲ್ಲೆಯ ಜಂಟಿ/ಉಪ/ಸಹಾಯಕ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್ ಇವರುಗಳನ್ನು ಸಂಪರ್ಕಿಸಿ ಪಡೆಯಬಹುದಾಗಿದೆ.
ಅರ್ಜಿಗಳನ್ನು ಆನ್‌ಲೈನ್‌ನಲ್ಲಿ ಡೌನ್‌ಲೋಡ್ ಮಾಡಿಕೊಳ್ಳಲು https://khtigadag.ac.in/
ಪೂರ್ಣವಾಗಿ ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪೂರ, ಗದಗ-ಬೆಟಗೇರಿ-582102 ಇವರಿಗೆ ಸಲ್ಲಿಸಲು ಮೇ 31 ಕೊನೆಯ ದಿನಾಂಕವಾಗಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.