ಕಾರಟಗಿ ತಾಲೂಕು ಸ್ವೀಪ್ ಸಮಿತಿಯಿಂದ ಬೈಕ್ ರ್ಯಾಲಿ
Kannadanet NEWS
ಕಾರಟಗಿ: ಲೋಕಸಭಾ ಚುನಾವಣೆ ಅಂಗವಾಗಿ ಮತದಾನ ಜಾಗೃತಿಗಾಗಿ ಶನಿವಾರ ಸಂಜೆ ತಾಲೂಕು ಸ್ವೀಪ್ ಸಮಿತಿ ವತಿಯಿಂದ ಆಯೋಜಿಸಿದ್ದ ಬೈಕ್ ರ್ಯಾಲಿಗೆ ಚಾಲನೆ ನೀಡಿದರು.
ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ತಾಲೂಕು ಸ್ವೀಪ್ ಸಮಿತಿ ಅಧ್ಯಕ್ಷರಾದ ಲಕ್ಷ್ಮೀದೇವಿ ಅವರು ಮಾತನಾಡಿ ಪ್ರತಿಯೊಬ್ಬರೂ ಚುನಾವಣೆ ಹಬ್ಬದಲ್ಲಿ ಖುಷಿಯಿಂದ ಪಾಲ್ಗೊಳ್ಳಬೇಕು. ಮತ ಚಲಾಯಿಸಲು ಯಾರೂ ಕೂಡ ನಿರ್ಲಕ್ಷ್ಯ ತೋರಬಾರದು. ಸದೃಢ ದೇಶ ಕಟ್ಟಲು ಶೇ.100 ರಷ್ಟು ಮತದಾನ ಆಗಬೇಕು. ಯಾರೊಬ್ಬರೂ ಮತದಾನ ಪ್ರಕ್ರಿಯೆಯಿಂದ ದೂರ ಉಳಿಯಬಾರದು ಎಂದರು.
ಪುರಸಭೆ ಮುಖ್ಯಾಧಿಕಾರಿ ಸುರೇಶ್ ಎಸ್. ಅವರು ಮಾತನಾಡಿ ಮತದಾನವು ಪ್ರತಿಯೊಬ್ಬರಿಗೂ ಸಂವಿಧಾನಬದ್ಧವಾಗಿ ಬಂದಿರುವ ಹಕ್ಕಾಗಿದೆ. ಹೀಗಾಗಿ ಪ್ರತಿಯೊಬ್ಬರು ಮತದಾನದಲ್ಲಿ ಭಾಗಿಯಾಗಬೇಕು, ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಯಾವುದೇ ಆಮಿಷಕ್ಕೆ ಒಳಗಾಗದೇ ವಿವೇಚನೆಯಿಂದ ಅರ್ಹರೆಲ್ಲರೂ ಮತ ಚಲಾಯಿಸಬೇಕು ಎಂದರು.
ಪಟ್ಟಣದ ತಾಲೂಕು ಪಂಚಾಯತ
ಕಚೇರಿಯಿಂದ ಆರಂಭಗೊಂಡ ಬೈಕ್ ರ್ಯಾಲಿ ನವಲಿ ಮುಖ್ಯ ರಸ್ತೆಯ ಮೂಲಕ ಹಳೇ ಬಸ್ ನಿಲ್ದಾಣ, ದಲಾಲಿ ಬಜಾರ್ , ರಾಯಚೂರು ಕೊಪ್ಪಳ ಮುಖ್ಯ ರಸ್ತೆಗಳಲ್ಲಿ ಸಂಚರಿಸುವ ಜೊತೆಗೆ ಪುರಸಭೆಯ ಕಸ ವಿಲೇವಾರಿ ವಾಹನದಲ್ಲಿ ಮತದಾನ ಜಾಗೃತಿ ಗೀತೆಗಳನ್ನು ಪ್ರಸಾರ ಮಾಡುವ ಮೂಲಕ ಮತದಾನ ಜಾಗೃತಿ ಫಲಕಗಳನ್ನು ಕೈಯಲ್ಲಿ ಹಿಡಿದು ಸಾರ್ವಜನಿಕರಿಗೆ ಪ್ರಚುರಪಡಿಸುತ್ತ ನಗರದ ಹೊಸ್ ಬಸ್ ನಿಲ್ದಾಣದ ಕನಕದಾಸ ವೃತ್ತದ ಬಳಿ ರ್ಯಾಲಿ ಸಮಾರೋಪಗೊಂಡಿತು. ತಾ.ಪಂ ಇಓ ಲಕ್ಷ್ಮೀದೇವಿ ಅವರು ಮತದಾನ ಪ್ರತಿಜ್ಞಾ ವಿಧಿ ಬೋಧಿಸಿದರು.
ಈ ವೇಳೆ ತಾಲೂಕು ಪಂಚಾಯತ ಸಹಾಯಕ ನಿರ್ದೇಶಕರಾದ ವೈ.ವನಜಾ, ಗ್ರಾ.ಪಂ ಅಭಿವೃದ್ಧಿ ಅಧಿಕಾರಿಗಳಾದ ರಾಮುನಾಯಕ, ಪ್ರಕಾಶ ಹೀರೆಮಠ, ಸಾಯಿನಾಥ, ವೆಂಕಟೇಶ ನಾಯಕ, ಭಾಗ್ಯೇಶ್ವರಿ, ಕನಕಪ್ಪ, ಸೈಯದ್ ಜಿಲಾನ್ ಪಾಷಾ, ಶಿವರಾಜ್, ಮೆಹಬೂಬ್, ಸೇರಿದಂತೆ ಪುರಸಭೆ, ತಾ.ಪಂ, ಗ್ರಾಪಂ, ನರೇಗಾ ಸಿಬ್ಬಂದಿಗಳು ಹಾಜರಿದ್ದರು.
Comments are closed.