ಗ್ಯಾರೆಂಟಿ ಯೋಜನೆಗಳೇ ಕಾಂಗ್ರೆಸ್ ಗೆಲುವಿಗೆ ಶ್ರೀರಕ್ಷೆ -ಕೆ.ಎಂ.ಸೈಯದ್
ಕೊಪ್ಪಳ : ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಿ ನುಡಿದಂತೆ ನಡೆದಿದ್ದಾರೆ ಗ್ಯಾರೆಂಟಿ ಯೋಜನೆಗಳೇ ಕಾಂಗ್ರೆಸ್ ಗೆಲುವಿಗೆ ಶ್ರೀರಕ್ಷೆ ಎಂದು ಕೆಪಿಸಿಸಿ ಸಂಯೋಜಕ ಹಾಗೂ ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಕೆ.ಎಂ.ಸೈಯದ್ ಹೇಳಿದರು.
ಅವರು ನಗರದ ಜೆಡಿಎಸ್ ಪಕ್ಷದ ವಕ್ತಾರ ಕರಾಟೆ ಮೌನೇಶ್ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಮಾಜಿ ಸಂಸದರಾದ ಸಂಗಣ್ಣ ಕರಡಿ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಳ್ಳುವ ಮುನ್ನ ಮಾತನಾಡಿ ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ರಾಜಶೇಖರ್ ಹಿಟ್ನಾಳ್ ಅವರು ಒಂದು ಲಕ್ಷ ಮತಗಳ ಲೀಡ್ ಗಳಿಸುವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದಲ್ಲಿ ಜನಪರ ಆಡಳಿತವನ್ನು ನೀಡಿ ಜನರ ಮನಸ್ಸಿನಲ್ಲಿ ಉಳಿದಿದ್ದಾರೆ,
ಕಾಂಗ್ರೆಸ್ ಎಲ್ಲಾ ವರ್ಗದ ಜನರ ಹಿತವನ್ನು ಕಾಯುವ ಪಕ್ಷವಾಗಿದ್ದು, ಕಾಂಗ್ರೆಸ್ ಪಕ್ಷದ ಜನಪದ ಕಾರ್ಯಕ್ರಮಗಳನ್ನು ಮೆಚ್ಚಿ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವರು, ಮಾಜಿ ಸಂಸದ ಸಂಗಣ್ಣ ಕರಡಿಯವರು ಕಾಂಗ್ರೆಸ್ ಪಕ್ಷಕ್ಕೆ ಆಗಮಿಸಿದ್ದು ಪಕ್ಷಕ್ಕೆ ಆನೆ ಬಲ ಬಂದಂತಾಗಿದೆ, ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ ಎಂದು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರಾದ ರಾಜಶೇಖರ್ ಆಡೂರು, ಶಿವರೆಡ್ಡಿ ಭೂಮಕ್ಕನವರ್ , ಫಕ್ರುಸಾಬ್ ನದಾಫ್ ಶಿವು ಕೋಣಂಗಿ, ಮುತ್ತುಸ್ವಾಮಿ ನರೇಗಲ್ ಮಠ,ದತ್ತಣ್ಣ ವೈದ್ಯ , ಅಜ್ಜಪ್ಪ ಸ್ವಾಮಿ ಚೆನ್ನವ ಡೆಯರ್ ಮಠ,ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
Comments are closed.