ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

Get real time updates directly on you device, subscribe now.

: ಸಮಾಜ ಕಲ್ಯಾಣ ಇಲಾಖೆಯಿಂದ 2024-25ನೇ ಸಾಲಿಗೆ ಕೊಪ್ಪಳ ಜಿಲ್ಲೆಯ ವಿವಿಧ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶ ಪರೀಕ್ಷೆಯ ಮೂಲಕ ಪರಿಶಿಷ್ಟ ಜಾತಿ ಹಾಗೂ ಪಂಗಡದ ವಿದಾರ್ಥಿಗಳನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಾದ ಕುಕನೂರಿನ ವಿದ್ಯಾಶ್ರೀ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಕೊಪ್ಪಳ ನಗರದ ಹೊಸಪೇಟೆ ರಸ್ತೆಯ ಎಸ್.ಎಫ್.ಎಸ್ ಪ್ರೌಢಶಾಲೆ ಹಾಗೂ ಲಯನ್ಸ್ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆ, ಗಂಗಾವತಿಯ ಬೇಥಲ್ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಭಾಗ್ಯನಗರದ ಜ್ಞಾನಬಂಧು ಪ್ರಾಥಮಿಕ ಹಾಗೂ ಪ್ರೌಢಶಾಲೆ ಮತ್ತು ಕುಷ್ಟಗಿಯ ವಿಜಯ ಚಂದ್ರಶೇಖರ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶಕ್ಕೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯು ಅವಕಾಶ ಕಲ್ಪಿಸಿದೆ.
ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ್ದು, ತಹಶೀಲ್ದಾರರವರಿಂದ ಪಡೆದ ಆರ್.ಡಿ ಸಂಖ್ಯೆ ಹೊಂದಿರುವ ಚಾಲ್ತಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಲಗತ್ತಿಸಬೇಕು. ವಿದ್ಯಾರ್ಥಿ ಕುಟುಂಬದ ವಾರ್ಷಿಕ ಆದಾಯ ರೂ.2.50 ಲಕ್ಷದೊಳಗಿರಬೇಕು. ವಿದ್ಯಾರ್ಥಿಯು 2023-24ನೇ ಸಾಲಿನಲ್ಲಿ 5ನೇ ತರಗತಿಯಲ್ಲಿ ಶೇ. 60 ಅಂಕ ಪಡೆದಿರಬೇಕು. ಆಯ್ಕೆಯಾಗುವ ವಿದ್ಯಾರ್ಥಿಗಳಲ್ಲಿ ಬಾಲಕಿಯರಿಗೆ ಶೇ.50 ರಷ್ಟು ಮೀಸಲಾತಿಯನ್ನು ನೀಡಲಾಗುವುದು. ಅರ್ಜಿ ನಮೂನೆಯಲ್ಲಿ ನಮೂದಿಸಿದ 15 ವಿಧದ ವಿಶೇಷ ವರ್ಗಕ್ಕೆ ಸೇರಿದ ಮಕ್ಕಳಿಗೆ ಮೊದಲನೇ ಆದ್ಯತೆ ನೀಡಲಾಗುವುದು. ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ವಸತಿ ಸೌಲಭ್ಯ ಇರುವುದಿಲ್ಲ.
ಅರ್ಜಿ ಸಲ್ಲಿಸಲು ಮೇ 21 ಕೊನೆಯ ದಿನವಾಗಿದ್ದು, ಅಗತ್ಯ ದಾಖಲೆಗಳೊಂದಿಗೆ ಉಪನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಕೊಪ್ಪಳ ಕಛೇರಿಗೆ ಅರ್ಜಿ ಸಲ್ಲಿಸಿ ಆನ್‌ಲೈನ್‌ನಲ್ಲಿ ನೋಂದಾಯಿಸಿಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಕೊಪ್ಪಳ ಹಾಗೂ ಆಯಾ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳವರನ್ನು ಸಂಪರ್ಕಿಸಬಹುದಾಗಿದೆ ಎಂದು ಕೊಪ್ಪಳ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!