ಮೇ 19 ರಂದು 6ನೇ ತರಗತಿ ಪ್ರವೇಶ ಪರೀಕ್ಷೆ

Get real time updates directly on you device, subscribe now.

 : 2024-25 ನೇ ಸಾಲಿಗೆ ಕೊಪ್ಪಳ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ/ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ ಶಾಲೆಗಳ 6ನೇ ತರಗತಿ ಪ್ರವೇಶ ಪರಿಕ್ಷೆಗಾಗಿ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆಯನ್ನು ಮೇ 19 ರ ಭಾನುವಾರದಂದು ಬೆಳಿಗ್ಗೆ 11 ಗಂಟೆಯಿAದ ಮಧ್ಯಾಹ್ನ 01 ಗಂಟೆಯವರೆಗೆ ನಡೆಸಲಾಗುವುದು.

ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ/ ಎ.ಪಿ.ಜೆ.ಅಬ್ದುಲ್ ಕಲಾಂ ಶಾಲೆಗಳಿಗೆ ಭೇಟಿ ನೀಡಿ ಪ್ರವೇಶ ಪತ್ರವನ್ನು ಪಡೆದುಕೊಳ್ಳಬಹುದು. ಹಾಗೂ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರುಗಳಾದ ಮೂಕಪ್ಪ,  ಕುಕನೂರು-9844040035, ನಾಗರಾಜ, ತಳಕಲ್-8310846415, ಮುತ್ತಣ್ಣ, ಕುದರಿಮೋತಿ-9740702035, ಮಂಜುನಾಥ, ಟಣಕನಕಲ್-9902690349, ದ್ಯಾಮಣ್ಣ ಗದ್ದಿ, ಹಿರೇಬೆಣಕಲ್-1: 9019755641, ರಾಮಲಿಂಗಪ್ಪ, ಹಿರೇಬೆಣಕಲ್-2: 8150924173, ಗೌಸ್‌ಪೀರ್, ಹಿರೇಬನ್ನಿಗೋಳ(ಕುಷ್ಟಗಿ)- 9591439223, ಅಲ್ಪಸಂಖ್ಯಾತರ ನವೋದಯ ಮಾದರಿಯ ವಸತಿ ಶಾಲೆ ಕೊಪ್ಪಳ, ದೊಡ್ಡಪ್ಪ-8747092789 ಇವರನ್ನು ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳ ಕಛೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ ಹೊಸಪೇಟೆ ರಸ್ತೆ ಕೊಪ್ಪಳ-583231 ದೂರವಾಣಿ ಸಂಖ್ಯೆ:-08539-225070 ಈ ವಿಳಾಸಕ್ಕೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!