ಕೊಪ್ಪಳ ಜಿಲ್ಲೆ ಸರ್ಕಾರಿ ನ್ಯಾಯಬೆಲೆ ಅಂಗಡಿ ಪಡಿತರ ವಿತರಕರ ಸಂಘ : ಜಿಲ್ಲಾಧ್ಯಕ್ಷರಾಗಿ ಹಾಲಯ್ಯ ಹುಡೇಜಾಲಿ ಆಯ್ಕೆ
ಕೊಪ್ಪಳ: ಜಿಲ್ಲೆಯ ಸರ್ಕಾರಿ ನ್ಯಾಯಬೆಲೆ ಅಂಗಡಿ ಪಡಿತರ ವಿತರಕರ ಸಂಘದ ನೂತನ ಜಿಲ್ಲಾಧ್ಯಕ್ಷರಾಗಿ ಹಾಲಯ್ಯ ವೀರಭದ್ರಯ್ಯ ಹುಡೇಜಾಲಿ ಅವರನ್ನು ಆಯ್ಕೆ ಮಾಡಿ ರಾಷ್ಟ್ರೀಯ ಕಾರ್ಯಧ್ಯಕ್ಷರು ಹಾಗೂ ರಾಜ್ಯಾಧ್ಯಕ್ಷ ಟಿ. ಕೃ?ಪ್ಪ, ಕಾರ್ಯಾಧ್ಯಕ್ಷ ಟಿ.ತಾಯಣ್ಣ, ಪ್ರಧಾನ ಕಾರ್ಯದರ್ಶಿ ಚನ್ನಕೇಶವೇಗೌಡ ಅವರು ಆಯ್ಕೆ ಮಾಡಿ ಆದೇಶ ಹೊರಡಿಸಿದ್ದಾರೆ.
ನೂತನ ಜಿಲ್ಲಾಧ್ಯಕ್ಷರು ಕೂಡಲೇ ಜಿಲ್ಲೆಯಾದ್ಯಂತ ಪ್ರವಾಸ ಮಾಡಿ ಎಲ್ಲಾ ತಾಲೂಕುಗಳ ವಿಶ್ವಾಸಕ್ಕೆ ತೆಗೆದುಕೊಂಡುಉತ್ತಮವಾಗಿ ಕಾರ್ಯನಿರ್ವಹಿಸುವಂತೆ ತಿಳಿಸಿದ್ದು ಜಿಲ್ಲೆ ಕಮಿಟಿ ರಚನೆ ಮಾಡಿ ಮಾಲೀಕರ ಸಮಸ್ಯೆಗಳಿಗೆ ಸ್ಪಂದಿಸಿ ರಾಜ್ಯ ಕಮೀಟಿಗೆ ವರದಿ ನೀಡಿ ನಿಮಗೆ ನೀಡಿರುವ ಈ ಜವಾಬ್ದಾರಿಯನ್ನು ನಿ?ಯಿಂದ ಶ್ರದ್ದೆಯಿಂದ ಪ್ರಾಮಾಣಿಕವಾಗಿ ಜಿಲ್ಲೆಯಾದ್ಯಂತ ನಿಭಾಯಿಸುತ್ತೀರಿ ಎಂದು ನಮ್ಮಗೆ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.
ಸರ್ಕಾರಿ ನ್ಯಾಯಬೆಲೆ ಅಂಗಡಿ ಪಡಿತರ ವಿತರಕರ ಸಂಘದ ನೂತನ ಜಿಲ್ಲಾಧ್ಯಕ್ಷರಾಗಿ ಹಾಲಯ್ಯ ಹುಡೇಜಾಲಿ ಮಾತನಾಡಿ ಜಿಲ್ಲೆಯ ಎಲ್ಲಾ ನ್ಯಾಯಬೆಲೆ ಅಂಗಡಿ ಪಡಿತರ ವಿತರಕರ ಸಮಸ್ಯೆಗಳಿಗೆ ಸ್ಪಂದಿಸುವೆ, ಎಲ್ಲಾರ ಸಲಹೆ-ಸೂಚನೆ ಮೇರೆಗೆ ಸಂಘದ ಘನತೆ ಗೌರವ ಹೆಚ್ಚಿಸುವೆ, ಶೀಘ್ರ ಸರ್ಕಾರಿ ನ್ಯಾಯಬೆಲೆ ಅಂಗಡಿ ಪಡಿತರ ವಿತರಕರ ಸಂಘದ ಕಚೇರಿ ಪ್ರಾರಂಬಿಸುವೆ, ಆಯ್ಕೆ ಮಾಡಿದ ಸರ್ಕಾರಿ ನ್ಯಾಯಬೆಲೆ ಅಂಗಡಿ ಪಡಿತರ ವಿತರಕರ ಸಂಘದ ರಾಷ್ಟ್ರೀಯ ಕಾರ್ಯಾಧ್ಯಕ್ಷರು ಹಾಗೂ ರಾಜ್ಯಾಧ್ಯಕ್ಷ ಟಿ. ಕೃ?ಪ್ಪ, ಕಾರ್ಯಾಧ್ಯಕ್ಷ ಟಿ.ತಾಯಣ್ಣ, ಪ್ರಧಾನ ಕಾರ್ಯದರ್ಶಿ ಚನ್ನಕೇಶವೇಗೌಡ ಅವರನ್ನು ಅಭಿನಂದಿಸುವೆ ಎಂದರು.
ಹ? : ಕೊಪ್ಪಳ: ಜಿಲ್ಲೆಯ ಸರ್ಕಾರಿ ನ್ಯಾಯಬೆಲೆ ಅಂಗಡಿ ಪಡಿತರ ವಿತರಕರ ಸಂಘದ ನೂತನ ಜಿಲ್ಲಾಧ್ಯಕ್ಷರಾಗಿ ಹಾಲಯ್ಯ ವೀರಭದ್ರಯ್ಯ ಹುಡೇಜಾಲಿ ಅವರನ್ನು ಆಯ್ಕೆ ಮಾಡಿದ್ದಕ್ಕೆ ಎಲ್ಲಾ ಜಿಲ್ಲೆಯ ಸರಕಾರಿ ನ್ಯಾಯಬೆಲೆ ಅಂಗಡಿ ಪಡಿತರ ವಿತರಕರು, ಕೊಪ್ಪಳ ಜಿಲ್ಲೆಯ ಸರ್ಕಾರಿ ನ್ಯಾಯಬೆಲೆ ಅಂಗಡಿ ಪಡಿತರ ವಿತರಕರ ಸಂಘದವರು ಹ? ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.
Comments are closed.