ಎಸ್.ಎಸ್.ಎಲ್.ಸಿ ಪರೀಕ್ಷೆ-1 ರಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ವಿಶೇಷ ತರಗತಿ ಆರಂಭ

SSLC EXAMS

Get real time updates directly on you device, subscribe now.

ಮಾರ್ಚ್/ಏಪ್ರಿಲ್-2024 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ-1 ರಲ್ಲಿ ಅನುತ್ತೀರ್ಣಗೊಂಡ ಹಾಗೂ ಶೇ.60 ಕ್ಕಿಂತ ಕಡಿಮೆ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಗಳು ಆರಂಭಗೊAಡಿವೆ.
ಜೂನ್ 07 ರಿಂದ 14 ರವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆ-2 ನಡೆಯಲಿದ್ದು, ವಿದ್ಯಾರ್ಥಿಗಳಿಗೆ ಮೇ 16 ರಿಂದ ಆಯಾ ಶಾಲೆಗಳಲ್ಲಿ ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಜಿಲ್ಲೆಯ ಎಲ್ಲ ಪ್ರೌಢಶಾಲೆಗಳಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ಮೇ 15 ರಿಂದ ವಿಶೇಷ ತರಗತಿಗಳು ಆರಂಭಗೊAಡಿದ್ದು, ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗಿ ಇದರ ಸದುಪಯೋಗ ಮಾಡಿಕೊಳ್ಳಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕರಾದ ಶ್ರೀಶೈಲ ಬಿರಾದಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!
%d bloggers like this: