ಸಿಇಒ ಅವರಿಂದ ವೈದ್ಯಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫ್ರೆನ್ಸ್ ಮೂಲಕ ಪ್ರಗತಿ ಪರಿಶೀಲನಾ ಸಭೆ

Get real time updates directly on you device, subscribe now.

): ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ಗುರುವಾರದಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ರಾಷ್ಟಿçÃಯ ಕಾರ್ಯಕ್ರಮಗಳ ಬಗ್ಗೆ ವೈದ್ಯಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫ್ರೆನ್ಸ್ ಮೂಲಕ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳಲ್ಲಿ ಕಡಿಮೆ ಪ್ರಗತಿ ಸಾಧಿಸಿದ ಆರೋಗ್ಯ ಕೇಂದ್ರಗಳಲ್ಲಿ ಕಂಡುಬAದAತಹ ನ್ಯೂನ್ಯತೆಗಳನ್ನು ಸರಿಪಡಿಸಿಕೊಂಡು ಮುಂದಿನ ದಿನಗಳಲ್ಲಿ ಉತ್ತಮ ಪ್ರಗತಿ ಸಾಧಿಸಲು ಸೂಚಿಸಿದರು. ಸಮುದಾಯ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ಉಪಕೇಂದ್ರಗಳ ಕಾಮಗಾರಿಗಳಿಗೆ ಹಾಗೂ ಸಾರ್ವಜನಿಕರ ಆರೋಗ್ಯ ಸೇವೆ ನೀಡಲು ಚಿಕಿತ್ಸಾ ಉಪಕರಣಗಳಿಗೆ ಅನುದಾನ ಅವಶ್ಯಕತೆ ಇದ್ದಲ್ಲಿ, ಜಿಲ್ಲಾ ಪಂಚಾಯತ್ ಅನುದಾನವನ್ನು ಸದ್ಬಳಕೆ ಮಾಡಿಕೊಂಡು, ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆಯನ್ನು ನೀಡುವಂತೆ ಆರೋಗ್ಯ ಸಂಸ್ಥೆಯ ವೈದ್ಯಾಧಿಕಾರಿಗಳಿಗೆ ತಿಳಿಸಿದರು.
ಈ ಸಂದರ್ಭ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಲಿಂಗರಾಜು ಟಿ., ಜಿಲ್ಲಾ ಮಟ್ಟದ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು, ತಾಲ್ಲೂಕು ಆರೋಗ್ಯಾಧಿಕಾರಿಗಳು ಹಾಗೂ ಜಿಲ್ಲೆಯ ಎಲ್ಲ ಆರೋಗ್ಯ ಸಂಸ್ಥೆಗಳ ವೈದ್ಯಾಧಿಕಾರಿಗಳು ಭಾಗವಹಿಸಿದ್ದರು.

Get real time updates directly on you device, subscribe now.

Comments are closed.

error: Content is protected !!
%d bloggers like this: