ವಿಧಾನ ಪರಿಷತ್ ಚುನಾವಣೆ ಪೂರ್ವಭಾವಿ ಸಭೆ
ಕೊಪ್ಪಳ:
ಈಶಾನ್ಯ ಪದವೀಧರ ವಿಧಾನ ಪರಿಷತ್ ಚುನಾವಣೆ ನಿಮಿತ್ತ ನಗರದ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯ ( ಎಸ್ಎಫ್ಎಸ್ ಶಾಲೆ ಮುಂಭಾಗ) ದಲ್ಲಿ ಶುಕ್ರವಾರ ಬೆಳಗ್ಗೆ 11 ಗಂಟೆಗೆ ಡಿಸಿಸಿ ಅಧ್ಯಕ್ಷ ಅಮರೇಗೌಡ ಪಾಟೀಲ್ ಬಯ್ಯಾಪುರ ಅಧ್ಯಕ್ಷತೆಯಲ್ಲಿ ಚುನಾವಣೆ ಪೂರ್ವಭಾವಿ ಸಭೆ ಆಯೋಜಿಸಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ಎಸ್. ತಂಗಡಗಿ, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ, ಶಾಸಕ ಬಸವರಾಜ ರಾಯರೆಡ್ಡಿ, ಶಾಸಕ ಕೆ. ರಾಘವೇಂದ್ರ ಹಿಟ್ನಾಳ, ಮಾಜಿ ಸಚಿವರಾದ ಇಕ್ಬಾಲ್ ಅನ್ಸಾರಿ, ಮಲ್ಲಿಕಾರ್ಜುನ ನಾಗಪ್ಪ , ಈಶಾನ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಚಂದ್ರಶೇಖರ ಪಾಟೀಲ್, ಕಾಡಾ ಅಧ್ಯಕ್ಷ ಹಸನಸಾಬ್ ದೋಟಿಹಾಳ, ವಿಪ ಸದಸ್ಯ ಶರಣೇಗೌಡ ಬಯ್ಯಾಪುರ, ಕೆ. ರಾಜಶೇಖರ ಹಿಟ್ನಾಳ, ವಿಪ ಮಾಜಿ ಸದಸ್ಯ ಎಚ್.ಆರ್. ಶ್ರೀನಾಥ್ ಸೇರಿದಂತೆ ಬ್ಲಾಕ್ ಕಾಂಗ್ರೆಸ್ ಸಮಿತಿ, ಮಹಿಳಾ ಕಾಂಗ್ರೆಸ್ ಸೇರಿದಂತೆ ಮುಂಚೂಣಿ ಘಟಕದ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡ ಸಭೆ ಯಶ್ವಸಿಗೊಳಿಸುವಂತೆ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಕೃಷ್ಣ ಎಂ. ಇಟ್ಟಂಗಿ ತಿಳಿಸಿದ್ದಾರೆ.
Comments are closed.