ಡೆಂಗ್ಯೂ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿ: ಡಿಎಚ್‌ಒ ಡಾ.ಲಿಂಗರಾಜು ಟಿ.
ಆರೋಗ್ಯ ಸಚಿವಾಲಯದ ನಿರ್ದೇಶನದ ಮೇರೆಗೆ ಪ್ರತಿ ವರ್ಷದ ಮೇ-16 ಅನ್ನು ಜಿಲ್ಲೆಯಾದ್ಯಂತ ರಾಷ್ಟಿçÃಯ ಡೆಂಗ್ಯೂ ದಿನಾಚರಣೆಯನ್ನಾಗಿ ಆಚರಿಸಿ, ಡೆಂಗ್ಯೂ ರೋಗ ಪ್ರಸರಣ ಅವಧಿಯ ಮುನ್ನವೇ ಜನಸಮುದಾಯವನ್ನು ಜಾಗೃತಿಗೊಳಿಸಲು ವ್ಯಾಪಕ ಅಭಿಯಾನ, ಜಾಥಾಗಳು, ರ‍್ಯಾಲಿ, ಅಂತರ್ ಇಲಾಖಾ ಸಭೆ ಸಮಾರಂಭಗಳನ್ನು ನಡೆಸಲಾಗುತ್ತಿದೆ. ಜಿಲ್ಲೆಯಲ್ಲಿ ಡೆಂಗ್ಯೂ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು ಡೆಂಗ್ಯೂ ನಿಯಂತ್ರಣಕ್ಕೆ ಆರೋಗ್ಯ ಇಲಾಖೆಯಿಂದ ಎಲ್ಲಾ ಸೂಕ್ತ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗಿದೆ. ಡೆಂಗ್ಯೂ-ಚಿಕೂನ್‌ಗುನ್ಯಾ ಜ್ವರಗಳಿಗೆ ಯಾವುದೇ ನಿರ್ದಿಷ್ಟ ಚಿಕಿತ್ಸೆ ಅಥವಾ ಲಸಿಕೆಯಾಗಲಿ ಪ್ರಸ್ತುತ ಲಭ್ಯವಿಲ್ಲ. ಅದಾಗ್ಯೂ ಜನರು ಭಯಪಡುವ ಅವಶ್ಯಕತೆ ಇಲ್ಲ, ಡೆಂಗ್ಯೂ-ಚಿಕೂನ್‌ಗುನ್ಯಾ ಜ್ವರಗಳ ಲಕ್ಷಣಗಳನ್ನಾಧರಿಸಿ ಸೂಕ್ತ ಚಿಕಿತ್ಸೆ ನೀಡಲಾಗುವುದು. ಯಾವುದೇ ಜ್ವರ ಕಾಣಿಸಿಕೊಂಡರೆ ಜನಸಮುದಾಯ ಶೀಘ್ರವೇ ಹತ್ತಿರದ ಸರ್ಕಾರಿ ಆರೋಗ್ಯ ಕೇಂದ್ರಗಳಿಗೆ ತೆರಳಿ ಪರೀಕ್ಷೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯಬೇಕು ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಸೂಕ್ತ ಚಿಕಿತ್ಸೆ ಮತ್ತು ಉಚಿತ ಪ್ರಯೋಗಾಲಯ ಪರೀಕ್ಷೆಗಳನ್ನು ಮಾಡಲಾಗುತ್ತಿದ್ದು, ಜನರು ಅನಗತ್ಯ ಭಯಕ್ಕೆ ಒಳಗಾಗದೆ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬೇಕು ಎಂದು ತಿಳಿಸಿದರು.
ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ವೆಂಕಟೇಶ್ ಕೆ. ಮಾತನಾಡಿ, ಡೆಂಗ್ಯೂ ಜ್ವರವು ವೈರಸ್ ಕಾಯಿಲೆಯಾಗಿದ್ದು, ಇದು ಈಡಿಸ್ ಜಾತಿಯ ಸೊಳ್ಳೆಗಳ ಕಚ್ಚುವಿಕೆಯಿಂದ ಹರಡುತ್ತದೆ ಹಾಗೂ ಈ ಈಡೀಸ್ ಸೊಳ್ಳೆಗಳು ಬಹುತೇಕ ಹಗಲು ಹೊತ್ತಿನಲ್ಲಿಯೇ ಕಚ್ಚುತ್ತವೆ. ಈಡಿಸ್ ಸೊಳ್ಳೆಗಳು ನೀರು ಶೇಖರಣೆ ಸಲಕರಣೆಗಳಲ್ಲಿ ಶುದ್ದ ನೀರಿನಲ್ಲಿಯೇ ಸಂತಾನಾಭಿವೃದ್ದಿ ಮಾಡುತ್ತವೆ. ಆದ್ದರಿಂದ ನೀರು ಶೇಖರಣೆ ಸಲಕರಣೆಗಳನ್ನು ಸದಾಕಾಲ ಮುಚ್ಚಿಡಬೇಕು ಹಾಗೂ ಮನೆಯ ಒಳಾಂಗಣ ಮತ್ತು ಹೊರಾಂಗಣದಲ್ಲಿ ನೀರು ನಿಲ್ಲದಂತೆ ಎಚ್ಚರವಹಿಸಿ ಸೊಳ್ಳೆಗಳ ಉತ್ಪತ್ತಿಯನ್ನು ತಡೆಗಟ್ಟಲು ವಿನಂತಿಸಿದರು. ಈಡೀಸ್ ಲಾರ್ವಾ ಸಮೀಕ್ಷೆಗಾಗಿ ಮನೆಗೆ ಭೇಟಿ ನೀಡುವ ಆರೋಗ್ಯ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತರಿಗೆ ಜನರು ಸಹಕಾರ ನೀಡಿ ಅವರ ಸಲಹೆಗಳನ್ನು ಪಾಲಿಸಲು ಜನಸಮುದಾಯಕ್ಕೆ ಕರೆನೀಡಿದರು. ಈ ವರ್ಷದ ಧ್ಯೇಯವಾಕ್ಯ ‘ಸಮುದಾಯದೊಂದಿಗೆ ಸೇರಿ ಡೆಂಗಿ ಜ್ವರವನ್ನು ನಿಯಂತ್ರಿಸೋಣ’ ಎಂಬುದಾಗಿದ್ದು, ಸಾರ್ವಜನಿಕರ ಸಹಕಾರ ಅತ್ಯಗತ್ಯ ಎಂದು ಅವರು ಹೇಳಿದರು.
ಜಿಲ್ಲಾ ವಿ.ಬಿ.ಡಿ ಸಲಹೆಗಾರರಾದ ರಮೇಶ್ ಕೆ. ಅವರು ಮಾತನಾಡಿ, ಪ್ರಸ್ತುತ ಪೂರ್ವ ಮುಂಗಾರು ಮಳೆಗಾಲ ಪ್ರಾರಂಭವಾಗಿದ್ದು ಅಲ್ಲಲ್ಲಿ ನಿಂತ ನೀರಿನ ತಾಣಗಳು ಉತ್ಪತ್ತಿಯಾಗುತ್ತವೆ ಹಾಗೂ ನೀರಿನ ಶೇಖರಣಾ ಸಲಕರಣೆಗಳಲ್ಲಿ ನೀರು ಶೇಖರಣೆಯಾಗಿ ಸೊಳ್ಳೆ ಉತ್ಪತ್ತಿಯಾಗಿ ಸೊಳ್ಳೆಗಳ ಸಾಂದ್ರತೆ ಹೆಚ್ಚಾಗುತ್ತದೆ. ಕಾರಣ, ಸೊಳ್ಳೆಗಳಿಂದ ಹರಡುವ ರೋಗಗಳಾದ ಡೆಂಗ್ಯೂ, ಚಿಕೂನ್‌ಗುನ್ಯಾ ಹಾಗೂ ಮಲೇರಿಯಾದಂತಹ ಕಾಯಿಲೆಗಳು ಹೆಚ್ಚಾಗುವ ಸಂಭವವಿರುತ್ತದೆ. ಅದರಲ್ಲೂ ಡೆಂಗ್ಯೂ-ಚಿಕೂನ್‌ಗುನ್ಯಾ ಹರಡುವ ಈಡಿಸ್ ಸೊಳ್ಳೆಗಳು ಮನೆಯ ಒಳಗಡೆ ಕಚ್ಚುವುದರಿಂದ ಡೆಂಗ್ಯೂ-ಚಿಕೂನ್‌ಗುನ್ಯಾ ಜ್ವರಗಳು ಹರಡುವ ಸಾಧ್ಯತೆ ಇರುತ್ತದೆ. ಕಾರಣ ಯಾವುದೇ ಜ್ವರವಿರಲಿ ಶೀಘ್ರವೇ ಹತ್ತಿರದ ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ರಕ್ತ ಪರೀಕ್ಷೆ ಮಾಡಿಸಿ ಉಚಿತ ಚಿಕಿತ್ಸೆ ಪಡೆಯಬೇಕು. ಹಾಗೂ ಮಲಗುವಾಗ ಸೊಳ್ಳೆಪರದೆಗಳನ್ನು ಬಳಸಲು ಹಾಗೂ ವಾರಕ್ಕೊಮ್ಮೆ ನೀರು ಶೇಖರಣ ಸಲಕರಣೆಗಳನ್ನು ಖಾಲಿಮಾಡಿ ಸ್ವಚ್ಚಗೊಳಿಸಿ ನೀರು ತುಂಬಿ ಮುಚ್ಚಿಡಲು ಹಾಗೂ ಸೊಳ್ಳೆ ಕಡಿತದಿಂದ ದೂರವಿರಲು ಸಾಧ್ಯವಾದ ಎಲ್ಲಾ ಸ್ವಯಂ ರಕ್ಷಣಾ ವಿಧಾನಗಳನ್ನು ಅನುಸರಿಸಲು ಜನಸಮುದಾಯಕ್ಕೆ ಮನವಿ ಮಾಡಿದರು. ಮತ್ತು ಡೆಂಗ್ಯೂ ಜ್ವರ ನಿಯಂತ್ರಣಕ್ಕೆ ಜನಸಮುದಾಯದ ಸಹಕಾರ, ಸೊಳ್ಳೆ ಉತ್ಪತ್ತಿ ತಾಣಗಳ ನಿರ್ಮೂಲನೆ ಹಾಗೂ ಜನಜಾಗೃತಿಯೊಂದೇ ಪರಿಹಾರ ಮಾರ್ಗ ಎಂದರು.
ಜಿಲ್ಲಾ ಆರೋಗ್ಯ ಶಿಕ್ಣಣಾಧಿಕಾರಿಗಳಾದ ಶಿವಾನಂದ ಪೂಜಾರ ರವರು ಮಾತನಾಡಿ, ರಾಷ್ಟಿçÃಯ ಡೆಂಗ್ಯೂ ದಿನಾಚರಣೆಯ ಮಹತ್ವ, ಜನಸಮುದಾಯ ಅನುಸರಿಸಬೇಕಾದ ನಿಯಂತ್ರಣ ಕ್ರಮಗಳನ್ನು ವಿವರಿಸಿದರು. ಹಾಗೂ ಕೇಂದ್ರೀಯ ಬಸ್ ನಿಲ್ದಾಣ ಹಾಗೂ ಡಿಪೋದಲ್ಲಿ ಮಾನವ ಸರಪಳಿ ನಿರ್ಮಿಸಿ ಜನಸಮುದಾಯ ಹಾಗೂ ಸಿಬ್ಬಂದಿಗೆ ಸೊಳ್ಳೆಗಳಿಂದ ಹರಡುವ ರೋಗಗಳ ಬಗ್ಗೆ ಅರಿವು ಮೂಡಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಎಚ್. ಅಧಿಕಾರಿಗಳಾದ ಡಾ.ಪ್ರಕಾಶ್ ವಿ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳಾದ ಡಾ. ನಂದಕುಮಾರ್, ಜಿಲ್ಲಾ ಕುಷ್ಟರೋಗ ನಿಯತ್ರಣಾಧಿಕಾರಿಗಳಾದ ಡಾ|| ಪ್ರಕಾಶ್ ಎಚ್.ಎಸ್., ಕೊಪ್ಪಳ ತಾಲೂಕ ಆರೋಗ್ಯಾಧಿಕಾರಿಗಳಾದ ಡಾ. ರಾಮಾಂಜನೇಯಾ, ಕೊಪ್ಪಳ ಜಿಲ್ಲಾ ಅರೋಗ್ಯ ಇಲಾಖೆಯ ಸರ್ವಸಿಬ್ಬಂದಿ, ಕೊಪ್ಪಳ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಕಚೇರಿಯ ಎಲ್ಲಾ ಸಿಬ್ಬಂದಿ ಮತ್ತು ತಾಲೂಕ ಆರೋಗ್ಯಾಧಿಕಾರಿಗಳ ಕಚೇರಿಯ ಕ್ಷೇತ್ರ ಆರೋಗ್ಯ ಶಿಕ್ಣಣಾಧಿಕಾರಿಗಳಾದ ಗಂಗಮ್ಮ, ಹಾಗೂ ಸಿಬ್ಬಂದಿ ಮತ್ತು ಆರೋಗ್ಯ ಇಲಾಖೆಯ ಎಲ್ಲಾ ಸಿಬ್ಬಂದಿಗಳು ಸಕ್ರಿಯವಾಗಿ ಭಾಗವಹಿಸಿದ್ದರು.
ಕೊಪ್ಪಳ ನಗರದಾದ್ಯಂತ ಸಂಚರಿಸಿದ “ಡೆಂಗ್ಯೂ ಜಾಗೃತಿ ಜಾಥಾ” ದಲ್ಲಿ ಸಂದೇಶ ಹಾಗೂ ಜಾನಪದ ಗೀತೆಗಳನ್ನು ಬಿತ್ತರಿಸಲಾಯಿತು ಹಾಗೂ ಡೆಂಗ್ಯೂ ಜಾಗೃತಿ ಗೀತೆಗಳನ್ನು ಹಾಡುವುದರ ಮೂಲಕ ಹಾಗೂ ಡೆಂಗ್ಯೂ ಜಾಗೃತಿ ಕರಪತ್ರಗಳನ್ನು ಹಂಚುವುದರ ಮೂಲಕ ಹಾಗೂ ಭಿತ್ತಿಪತ್ರಗಳನ್ನು ಪ್ರದರ್ಶಿಸುವುದರ ಮೂಲಕ ನಗರದಲ್ಲಿ ಡೆಂಗ್ಯೂ ಜನ ಜಾಗೃತಿ ಹಮ್ಮಿಕೊಳ್ಳಲಾಯಿತು. ಕೆ.ಎಸ್.ಆರ್.ಟಿ.ಸಿ ಕೊಪ್ಪಳ ಕೇಂದ್ರ ಬಸ್ ನಿಲ್ದಾಣದಲ್ಲಿ “ಮಾನವ ಸರಪಳಿ ನಿರ್ಮಿಸಿ” ಜಾಗೃತಿ ಮೂಡಿಸಲಾಯಿತು. ಕೊಪ್ಪಳ ಬಸ್ ಡಿಪೋ ಹಾಗೂ ಕಾರ್ಯಗಾರಗಳಲ್ಲಿ ವಿಶೇಷ ಲಾರ್ವಾ ಸಮೀಕ್ಷೆ ನಡೆಸಿ ಸರ್ವಸಿಬ್ಬಂದಿಗೆ ಡೆಂಗ್ಯೂ-ಚಿಕೂನ್‌ಗುನ್ಯಾ ಕುರಿತು ಅರಿವು ಮೂಡಿಸಲಾಯಿತು.
Comments are closed.