ಟ್ರಾಕ್ಟರ್ ಬಸ್ ನಡುವೆ ಬೀಕರ್ ಅಪಘಾತ : ಮೃತರ ಸಂಖ್ಯೆ ೪ಕ್ಕೆ ಏರಿಕೆ
ನಿನ್ನೆ ರಾತ್ರಿ ಕೊಪ್ಪಳ ತಾಲೂಕಿನ ಹೊಸಲಿಂಗಾಪುರ ಬಳಿಕ ರಾಷ್ಟ್ರೀಯ ಹೆದ್ದಾರಿ ೫೦ ರ ಚತುಷ್ಪತ ರಸ್ತೆಯಲ್ಲಿ ರಾತ್ರಿ ಭೀಕರ ಅಪಘಾತ ಸಂಭವಿಸಿದ್ದು ನಾಲ್ವರು ದುರ್ಮರಣಕ್ಕೀಡಾಗಿದ್ದಾರೆ. ಟ್ರಾಕ್ಟರ್‌ಗೆ ಹಿಂದಿನಿಂದ ಬಂದ ಖಾಸಗಿ ಬಸ್‌ಡಿಕ್ಕಿ ಹೊಡೆದ ಪರಿಣಾಮ ಟ್ರಾಕ್ಟರ್‌ನಲ್ಲಿದ್ದ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದರೆ ಓರ್ವ ಮಹಿಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಸುಮಾರು ೧೮ ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗೊಂಡಿದ್ದಾರೆ. ಮೃತರನ್ನು ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಕರಮುಡಿ ಗ್ರಾಮದ ಬಸವರಾಜ (೨೨), ತೇಜಸ್ಸ್(೨೨), ದುರುಗಮ್ಮ (೬೫) ಹಾಗೂ ಗದಗ ಜಿಲ್ಲೆ ತಿಮ್ಮಾಪುರ ಗ್ರಾಮದ ಕೊಂಡಪ್ಪ (೬೦) ಎಂದು ಗುರುತಿಸಲಾಗಿದೆ. ಕರಮುಡಿ ಗ್ರಾಮದಿಂದ ಶಿವಪ್ಪ ಎಂಬುವವರು ಸಂಬಂಧಿಕರೊಡಗೂಡಿ ಗುರುವಾರ ಕೊಪ್ಪಳ ತಾಲೂಕಿನ ಹುಲಿಗೆಮ್ಮದೇವಿ ದೇವಸ್ಥಾನಕ್ಕೆ ಟ್ರಾಕ್ಟರ್‌ನಲ್ಲಿ ಬಂದಿದ್ದರು. ಹರಕೆ ಇದ್ದ ಕಾರಣ ಸಂಬಂಧಿಕರನ್ನು ಕರೆದುಕೊಂಡು ದೇವಸ್ಥಾನಕ್ಕೆ ಬಂದು ಶುಕ್ರವಾರ ಹರಕೆ ತೀರಿಸಿಕೊಂಡು ವಾಪಾಸ್‌ಟ್ರಾಕ್ಟರ್‌ನಲ್ಲಿ ಊರಿಗೆ ಮರಳುತ್ತಿದ್ದರು. ಈ ಸಂದರ್ಭದಲ್ಲಿ ಹೊಸಲಿಂಗಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿ ೫೦ ರಲ್ಲಿ ಹಿಂಬದಿಯಿಂದ ಬಂದ ಖಾಸಗಿ ಬಸ್‌ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇನ್ನುಳಿದಂತೆ ಗಾಯಗೊಂಡಿದ್ದ ೧೮ ಜನರನ್ನು ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಫಲಕಾರಿಯಾಗದೆ ೬೫ ವರ್ಷದ ದುರುಗಮ್ಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾಳೆ. ಇಬ್ಬರ ಸ್ಥಿತಿ ಗಂಭೀರವಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಕಳಿಸಲಾಗಿದೆ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು. ಸ್ಥಳಕ್ಕೆ ಜಿಲ್ಲಾ ಪೊಲೀಸ್‌ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ, ಸಿಪಿಐ ಸುರೇಶ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮುನಿರಾಬಾದ್‌ಪೊಲೀಸ್‌ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Comments are closed.