ಮೇ.20 ರಿಂದ 29 ರವರೆಗೆ ಕರ್ನಾಟಕ ಮುಕ್ತ ಶಾಲೆ-ಕೆ.ಓ.ಎಸ್ ಪರೀಕ್ಷೆ: ನಿಷೇಧಾಜ್ಞೆ ಜಾರಿ

Get real time updates directly on you device, subscribe now.

: ಜಿಲ್ಲೆಯಲ್ಲಿ ಮೇ 20 ರಿಂದ 29 ರವರೆಗೆ  ನಡೆಯಲಿರುವ ಕರ್ನಾಟಕ ಮುಕ್ತ ಶಾಲೆ – ಕೆ. ಓ.ಎಸ್  ಪರೀಕ್ಷೆಗಳು ಸುಗಮ ಹಾಗೂ ಶಾಂತಿಯುತವಾಗಿ ನಡೆಯುವ ಉದ್ದೇಶದಿಂದ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಬೆಳಿಗ್ಗೆ 10 ಗಂಟೆಯಿAದ ಮಧ್ಯಾಹ್ನ 1:15 ರವರೆಗೆ ಸಿಆರ್‌ಪಿಸಿ 1973 ರ ಕಲಂ 144 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ನಲಿನ್ ಅತುಲ್ ಅವರು ಆದೇಶ ಹೊರಡಿಸಿದ್ದಾರೆ.

ಕೊಪ್ಪಳದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲೆ ವಿಭಾಗ) ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರದಲ್ಲಿ ಯಾವುದೇ ರೀತಿಯ ಅಕ್ರಮ, ಅವ್ಯವಹಾರ ನಡೆಯದಂತೆ ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ 200 ಮೀಟರ್ ಅಂತರದ ಪ್ರದೇಶದಲ್ಲಿ ವಿವಿಧ ಷರತ್ತಿಗೆ ಒಳಪಟ್ಟು ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ.
ಆದೇಶದನ್ವಯ ನಿಷೇಧಿತ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ, ಮೊಬೈಲ್ ಪೇಜರ್, ಜೆರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರದ ಹಾಗೂ ನಿಯೋಜಿತ ಶಿಕ್ಷಕರನ್ನು, ಜಾಗೃತ ದಳದವರನ್ನು ಹೊರತುಪಡಿಸಿ ಇನ್ನುಳಿದವರಿಗೆ ಪರವಾನಿಗೆ ಇಲ್ಲದೇ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಮಾಡುವುದನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್  ಅಂತರದಲ್ಲಿ ಜನರು ಮಾರಕಾಸ್ತçಗಳನ್ನು ಹಿಡಿದು ತಿರುಗಾಡುವುದನ್ನು ನಿಷೇಧಿಸಿದೆ. ಈ ಆದೇಶವು ಮದುವೆ, ಶವ ಸಂಸ್ಕಾರಗಳು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯವಾಗುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!
%d bloggers like this: