ವಲಯಾಧಾರಿತ ಉದ್ಯಮಶೀಲತಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ

Get real time updates directly on you device, subscribe now.

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ, ಕಲಬುರಗಿ ಹಾಗೂ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ(ಸಿಡಾಕ್), ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ಸ್ವಯಂ ಉದ್ಯಮಗಳನ್ನು ಪ್ರಾರಂಭಿಸಲು ಆಸಕ್ತರಿಗೆ ವಿವಿಧ ವೃತ್ತಿಗಳಲ್ಲಿ 30 ದಿನಗಳ ನಿರ್ದಿಷ್ಟ ವಲಯಾಧಾರಿತ ಉದ್ಯಮಶೀಲತಾಭಿವೃದ್ಧಿ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಯ ಕೊಪ್ಪಳದಲ್ಲಿ ಕಂಪ್ಯೂಟರ್ ಹಾರ್ಡ್ವೇರ್ ಮತ್ತು ನೆಟ್‌ವರ್ಕಿಂಗ್ ತರಬೇತಿ, ಕುಷ್ಟಗಿಯಲ್ಲಿ ಬ್ಯೂಟಿ ಪಾರ್ಲರ್ ಮ್ಯಾನೇಜ್‌ಮೆಂಟ್ ಬಗ್ಗೆ ತರಬೇತಿ, ಯಲಬುರ್ಗಾದಲ್ಲಿ ಫ್ಯಾಷನ್ ಡಿಸೈನಿಂಗ್ ಬಗ್ಗೆ ತರಬೇತಿ, ಗಂಗಾವತಿಯಲ್ಲಿ ಎಲೆಕ್ಟಿçಕಲ್ ಹೋಮ್ ಅಪ್ಲೆöÊಯನ್ಸ್ಸ್ ಬಗ್ಗೆ ತರಬೇತಿ ಹಾಗೂ ಕುಕನೂರಿನಲ್ಲಿ ಮೋಬೈಲ್ ಫೋನ್ಸ್ ರಿಪೇರಿ ಮತ್ತು ಸರ್ವಿಸಿಂಗ್ ಬಗ್ಗೆ ತರಬೇತಿಗಳನ್ನು ಹಮ್ಮಿಕೊಳ್ಳಲು ಯೋಜಿಸಲಾಗಿದೆ.
ಕಾರ್ಯಕ್ರಮದಲ್ಲಿ ಆಯಾ ವೃತ್ತಿಗಳಲ್ಲಿ ಪ್ರಾಯೋಗಿಕ ಹಾಗೂ ಸಿದ್ಧಾಂತದೊAದಿಗೆ ಸ್ವಯಂ ಉದ್ಯಮಗಳ ಬಗ್ಗೆ ಮಾಹಿತಿ, ಉದ್ಯಮಶೀಲತೆ, ಯಶಸ್ವಿ ಉದ್ಯಮಶೀಲರ ಗುಣಲಕ್ಷಣಗಳು, ಉದ್ಯಮಗಳನ್ನು ಪ್ರಾರಂಭಿಸುವ ಹಂತಗಳು, ಸ್ವಯಂ ಉದ್ಯೋಗಕ್ಕೆ ಇರುವ ಸರ್ಕಾರದ ಯೋಜನೆಗಳು, ಬ್ಯಾಂಕ್ ವ್ಯವಹಾರ ಮಾಡುವ ಬಗ್ಗೆ, ಸಾಲ ಮತ್ತು ಹಣಕಾಸು ಮತ್ತು ಹಣಕಾಸೇತರ ಸೌಲಭ್ಯಗಳ ಬಗ್ಗೆ, ಲೆಕ್ಕ ಪತ್ರ ನಿರ್ವಹಣೆ, ಯೋಜನಾ ವರದಿ ತಯಾರಿಕೆ, ಸಾಲ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸುವಲ್ಲಿ ಸಹಾಯ ನೀಡುವುದು ಮತ್ತು ಸಂಬAಧಪಟ್ಟ ಇತ್ಯಾದಿ ವಿಷಯಗಳ ಬಗ್ಗೆ ಅನುಭವಿ ಅತಿಥಿ ಬೋಧಕರಿಂದ ಉಪನ್ಯಾಸ, ಮಾಹಿತಿ ನೀಡಲಾಗುವುದು.
ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಸಕ್ತರಿರುವ 18 ರಿಂದ 40 ವರ್ಷದೊಳಗಿನ, ಕನಿಷ್ಠ ಎಸ್.ಎಸ್.ಎಲ್.ಸಿ ಪಾಸ್ ಆದ ಎಲ್ಲಾ ವರ್ಗದ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಜಂಟಿ ನಿರ್ದೇಶಕರು, ಸಿಡಾಕ್, ಜಿಲ್ಲಾ ಕೈಗಾರಿಕಾ ಕೇಂದ್ರದ ಕಟ್ಟಡ, ಹೊಸಪೇಟೆ ರಸ್ತೆ, ನಗರ ಸಭೆ ಎದುರು, ಕೊಪ್ಪಳ–583231, ಇಲ್ಲಿಗೆ ಮೇ 29 ರೊಳಗಾಗಿ ಭೇಟಿ ನೀಡಿ ಅಥವಾ ಮೊಬೈಲ್ ಸಂಖ್ಯೆ: 6362557332, 6362681190 ಮತ್ತು 9986332736 ಗೆ ಕರೆ ಮಾಡಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳ್ಳಬಹುದಾಗಿದೆ. 30 ಅಭ್ಯರ್ಥಿಗಳ ತಂಡದಲ್ಲಿ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ಶೇ.35 ರಷ್ಟು ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಶೇ.15 ರಷ್ಟು ಅದ್ಯತೆ ನೀಡಲಾಗುವುದು ಎಂದು ಕೊಪ್ಪಳ ಸಿಡಾಕ್ ಜಂಟಿ ನಿರ್ದೇಶಕರು  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!
%d bloggers like this: