ಮಾವು ಮಾರಾಟ ಮೇಳ : 2 ದಿನ ಅವಧಿ ವಿಸ್ತರಣೆ

Get real time updates directly on you device, subscribe now.

: ತೋಟಗಾರಿಕೆ ಇಲಾಖೆಯಿಂದ ನಗರದ ತೋಟಗಾರಿಕೆ ಉಪನಿರ್ದೇಶಕರ ಕಚೇರಿ ಆವರಣದಲ್ಲಿ ಆಯೋಜಿಸಲಾಗಿರುವ 2024-25ನೇ ಸಾಲಿನ ಮಾವು ಪ್ರದರ್ಶನ ಮತ್ತು ಮಾರಾಟ ಮೇಳವನ್ನು ರೈತರು ಹಾಗೂ ಗ್ರಾಹಕರ ಒತ್ತಾಯ ಹಾಗೂ ಬೇಡಿಕೆ ಮೇರೆಗೆ 2 ದಿನಗಳ ಕಾಲ ಅವಧಿ ವಿಸ್ತರಿಸಲಾಗಿದೆ.
ರೈತರಿಂದ ನೇರವಾಗಿ ಗ್ರಾಹಕರಿಗೆ ಹಾಗೂ ಜಿಲ್ಲೆಯಲ್ಲಿ ಬೆಳೆಯಲಾಗುತ್ತಿರುವ ಮಾವು ಬೆಳೆಗೆ ಉತ್ತಮ ಮಾರುಕಟ್ಟೆ ಒದಗಿಸುವ ಉದ್ದೇಶದಿಂದ ಮೇ 13 ರಿಂದ 21 ರವರೆಗೆ ಮಾವು ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಆಯೋಜಿಸಲಾಗಿತ್ತು. ಪ್ರಸ್ತುತ ರೈತರು ಹಾಗೂ ಗ್ರಾಹಕರ ಬೇಡಿಕೆ ಅನುಸಾರ ಮೇ 23 ರವರೆಗೆ ಅವಧಿ ವಿಸ್ತರಿಸಲಾಗಿದ್ದು, ರೈತರು ಹಾಗೂ ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತೋಟಗಾರಿಕೆ ಉಪನಿರ್ದೇಶಕರಾದ ಕೃಷ್ಣ ಉಕ್ಕುಂದ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!
%d bloggers like this: