ವಿಶೇಷ ಡಿ.ಎಡ್ ಕೋರ್ಸಿಗೆ ಅರ್ಜಿ ಆಹ್ವಾನ

Get real time updates directly on you device, subscribe now.

ಕೊಪ್ಪಳ, ): ಮೈಸೂರಿನ ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಕರ ತರಬೇತಿ ಕೇಂದ್ರದಲ್ಲಿ 2 ವರ್ಷಗಳ ವಿಶೇಷ ಡಿ.ಎಡ್ ಕಾರ್ಯಕ್ರಮಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಈ ವಿಶೇಷ ಡಿ.ಎಡ್ ಕಾರ್ಯಕ್ರಮಗಳು ಸಾಮಾನ್ಯ ಡಿ.ಎಡ್‌ಗೆ ಸಮಾನಾಂತರವಾಗಿದೆ. ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಶೇ.50 (ಎಸ್.ಸಿ ಎಸ್.ಟಿ ಮತ್ತು ವಿಕಲಚೇತನ ವಿದ್ಯಾರ್ಥಿಗಳಿಗೆ ಶೇ.45) ಅಂಕಗಳೊAದಿಗೆ ತೇರ್ಗಡೆಯಾದ ವಿದ್ಯಾರ್ಥಿಗಳು ಜೂನ್ 10 ರ ಮಧ್ಯಾಹ್ನ 2 ಗಂಟೆ ಒಳಗೆ ಅರ್ಜಿ ಸಲ್ಲಿಸಬಹುದು.
ಅರ್ಜಿಗಳು  https://mysore.nic.in/en/     ವೆಬ್‌ಸೈಟ್‌ನಲ್ಲಿ ಪಡೆಯಬಹುದು. ಈ ಅವಕಾಶವನ್ನು ಜಿಲ್ಲೆಯ ವಿಕಲಚೇತನರು ಸದುಪಯೋಗಪಡಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಛೇರಿ, ಪುಲಿಕೇಶಿ ರಸ್ತೆ, ತಿಲಕ್‌ನಗರ, ಮೈಸೂರು ರವರ ದೂರವಾಣಿ ಸಂಖ್ಯೆ:0821-2491600/2959600 ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಶ್ರೀದೇವಿ ಎಸ್.ಎನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!
%d bloggers like this: