ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ: ಮೈಕ್ರೋ ಅಬ್ಸರ್ವರ್ ತರಬೇತಿ ಕಾರ್ಯಗಾರ
Kannadanet 24×7 News
ಜಿಲ್ಲಾ ತರಬೇತಿ ಸಂಸ್ಥೆ ಪ್ರಾಂಶುಪಾಲರಾದ ಕೃಷ್ಣಮೂರ್ತಿ ದೇಸಾಯಿ ಅವರು ಜಿಲ್ಲೆಯ ಎಲ್ಲಾ ಮೈಕ್ರೋ ಅಬ್ಸರ್ವರ್ ಗಳಿಗೆ ತರಬೇತಿಯನ್ನು ನೀಡಿದರು.
ಮೈಕ್ರೋ ಅಬ್ಸರ್ವರ್ ಗಳಿಗೆ ಟೆಂಡರ್ ಮತಗಳ ಬಗ್ಗೆ ಮಾಹಿತಿ ನೀಡಿದರು. ಮೈಕ್ರೋ ಅಬ್ಸರ್ವರ್ ಅವರ ಕೆಲಸ ಚುನಾವಣೆ ಸರಿಯಾದ ಸಮಯಕ್ಕೆ ನಡೆಯುವಂತೆ ಗಮನಹರಿಸುವದರ ಜೊತೆಗೆ ಪ್ರತಿಯೊಂದು ಚುನಾವಣಾ ಮತಗಟ್ಟೆಯಲ್ಲಿ ವಿಡಿಯೋಗ್ರಫಿ ಮತ್ತು ಮತಗಟ್ಟೆ ಅಧಿಕಾರಿಗಳ ಕರ್ತವ್ಯದ ಮೇಲೆ ತಮ್ಮ ಗಮನವಿರಬೇಕು. ಸರಿಯಾದ ಸಮಯಕ್ಕೆ ಅಧಿಕಾರಿಗಳ ಹಾಜರಾಗಬೇಕು ಎಂದು ಹೇಳಿದರು.
ಮತಗಟ್ಟೆಗಳಲ್ಲಿ ಅಧಿಕಾರಿಗಳು ಯಾವುದೇ ರಾಜಕೀಯ ವ್ಯಕ್ತಿಗಳ ಬಗ್ಗೆ ಚರ್ಚೆ ಮಾಡುವಂತಿಲ್ಲ. ಮೈಕ್ರೋ ಅಬ್ಸರ್ವರ್ ತಮಗೆ ನಿಗದಿಪಡಿಸಿದ ಆಯಾ ತಾಲ್ಲೂಕಿನ ಮತಗಟ್ಟೆ ವ್ಯಾಪ್ತಿಯಲ್ಲಿ ಕರ್ತವ್ಯವನ್ನು ನಿರ್ವಹಿಸುವುದರ ಜೊತೆಗೆ ಮತದಾನ ಕೇಂದ್ರದ ಒಳಗಡೆ ಯಾವುದೇ ಅನವಶ್ಯಕ ವ್ಯಕ್ತಿಗಳನ್ನು ಪ್ರವೇಶಿಸದಂತೆ ನೋಡಿಕೊಳ್ಳಬೇಕು. ಅಲ್ಲಿ ಕೇವಲ ಮತಗಟ್ಟೆ ಅಧಿಕಾರಿಗಳು ಮತ್ತು ಮತದಾನ ಮಾಡುವವರು ಮಾತ್ರ ಇದ್ದು, ಅವರು ಸರತಿ ಸಾಲಿನಲ್ಲಿ ನಿಂತು ಮುಕ್ತ ಮತ್ತು ನ್ಯಾಯ ಸಮ್ಮತ ಮತ ಚಲಾವಣೆಯಾಗುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.
ಈ ಕಾರ್ಯಾಗಾರದಲ್ಲಿ ಮೈಕ್ರೋ ಅಬ್ಸರ್ವರ್ ಗಳ ನೋಡಲ್ ಅಧಿಕಾರಿ ವೀರೇಂದ್ರ ಕುಮಾರ್, ಜಿಲ್ಲಾ ಮಟ್ಟದ ಮಾಸ್ಟರ್ ಟ್ರೈನರ್ ವಿದ್ಯಾಧರ ಮೇಘರಾಜ ಸೇರಿದಂತೆ ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ ಆಗಮಿಸಿದ ಚುನಾವಣಾ ಸಿಬ್ಬಂದಿ ಭಾಗವಹಿಸಿದ್ದರು.
Comments are closed.