ಜಿಲ್ಲಾಸ್ಪತ್ರೆಗೆ ಡಿ.ಸಿ. ನಲಿನ್ ಅತುಲ್ ಭೇಟಿ : ಪರಿಶೀಲನೆ

Get real time updates directly on you device, subscribe now.

ಕೊಪ್ಪಳ ಜಿಲ್ಲಾಸ್ಪತ್ರೆಗೆ ಜಿಲ್ಲಾಧಿಕಾರಿಗಳಾದ  ನಲಿನ್ ಅತುಲ್ ಅವರು ಮೇ 20 ರಂದು ಭೇಟಿ ನೀಡಿ ಪರಿಶೀಲಿಸಿದರು.
ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಅವರು ಸ್ವತಃ ತಾವೇ ಖುದ್ದಾಗಿ  ರೋಗಿಗಳ ವಾರ್ಡ್ಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸುವುದರ ಜೊತೆಗೆ ಅಲ್ಲಿ ರೋಗಿಗಳಿಗೆ ನೀಡುತ್ತಿರುವ ಚಿಕಿತ್ಸಾ ಸೌಲಭ್ಯಗಳ ಕುರಿತು ಪರಿಶೀಲಿಸಿದರು. ಔಷಧ ಉಗ್ರಾಣವನ್ನು ಪರಿಶೀಲನೆ ನಡೆಸಿ, ಸಾರ್ವಜನಿಕರಿಗೆ ಉತ್ತಮವಾದ ಚಿಕಿತ್ಸೆ ಹಾಗೂ  ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಕಿಮ್ಸ್ ನಿರ್ದೇಶಕರಾದ ವೈಜನಾಥ ಇಟಗಿ, ಜಿಲ್ಲಾ ಆಸ್ಪತ್ರೆಯ ಮೆಡಿಕಲ್ ಸೂಪರಿಂಟೆಂಡೆಂಟ್ ವೇಣು ಗೋಪಾಲ್, ಜಿಲ್ಲಾಧಿಕಾರಿಗಳ ಆಪ್ತ ಸಹಾಯಕರಾದ ಜಯಲಕ್ಷ್ಮೀ, ಸೇರಿದಂತೆ ವೈದ್ಯಾಧಿಕಾರಿಗಳು ಇತರರು ಉಪಸ್ಥಿತರಿದ್ದರು.

Get real time updates directly on you device, subscribe now.

Comments are closed.

error: Content is protected !!