ರಾಜ್ಯಕ್ಕೆ ಐದನೇ ರ್‍ಯಾಂಕ್ ಪಡೆದ ಮಹಾನ್ ಕಿಡ್ಸ್ ಶಾಲೆಯ ವಿದ್ಯಾರ್ಥಿ ಪಿ. ರೇವಂತ್‌ಕುಮಾರನಿಗೆ ಕ್ಷೇತ್ರಶಿಕ್ಷಣಾಧಿಕಾರಿಗಳಿಂದ ಸನ್ಮಾನ
ಗಂಗಾವತಿ: ಇಂದು ಮಹಾನ್ ಕಿಡ್ಸ್ ಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ವೆಂಕಟೇಶ್ ಹಾಗೂ ಶಿಕ್ಷಣ ಸಂಯೋಜಕರಾದ ರಾಘವೇಂದ್ರ, ಹತ್ತನೇ ತರಗತಿಯಲ್ಲಿ ರಾಜ್ಯಕ್ಕೆ ಐದನೇ ರ್‍ಯಾಂಕ್ ಪಡೆದ ಶಾಲೆಯ ವಿದ್ಯಾರ್ಥಿ ಪಿ. ರೇವಂತ್‌ಕುಮಾರ್‌ರವರಿಗೆ ಸನ್ಮಾನಿಸಲಾಯಿತು.
ಸನ್ಮಾನಿಸಿ ಮಾತನಾಡಿದ ಕ್ಷೇತ್ರಶಿಕ್ಷಣಾಧಿಕಾರಿಗಳು ಮಹಾನ್ ಕಿಡ್ಸ್ ಶಾಲೆಯ ಶಿಕ್ಷಣವನ್ನು ಪರಿಶೀಲಿಸಲಾಗಿ ಉತ್ತಮ ರೀತಿಯಲ್ಲಿ ಶಿಕ್ಷಣ ನೀಡಲಾಗುತ್ತಿದ್ದು, ಈ ಶಾಲೆಯ ವಿದ್ಯಾರ್ಥಿಗಳ ಪ್ರತಿಭೆಗೆ ಮೆಚ್ಚುಗೆ ನೀಡಿ ಹರ್ಷ ವ್ಯಕ್ತಪಡಿಸಿದರು.
ಈ ಸಮಯದಲ್ಲಿ ಸಂಸ್ಥೆಯ ಅಧ್ಯಕ್ಷರಾದ ನೇತ್ರಾಜ್ ಗುರುವಿನಮಠ, ಮುಖ್ಯೋಪಾಧ್ಯಾಯರಾದ ಶ್ರೀಮತಿ ಸವಿತಾ ಹಾಗೂ ಪೂರ್ಣಿಮಾ ರಾಘವೇಂದ್ರ ಕುಲಕರ್ಣಿ, ಪ್ರಸಾದ್, ಸಿದ್ದೇಶ್, ವೀರಯ್ಯ, ಶ್ರೀದೇವಿ ಇನ್ನಿತರರಿದ್ದರು.
Comments are closed.