ಹುಲಿಗೆಮ್ಮ ದೇವಿ ಜಾತ್ರೆ: ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿಗಳ ಆದೇಶ

Get real time updates directly on you device, subscribe now.

Kannadanet NEWS

ಕೊಪ್ಪಳ ತಾಲ್ಲೂಕಿನ ಹುಲಿಗಿ ಗ್ರಾಮದಲ್ಲಿ ಮೇ 30 ರಿಂದ ಜೂನ್ 03 ರವರೆಗೆ ನಡೆಯಲಿರುವ ಶ್ರೀ ಹುಲಿಗೆಮ್ಮ ದೇವಿ ಜಾತ್ರಾ ಮಹೋತ್ಸವದ ನಿಮಿತ್ಯ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಕಾನೂನು ಸುವ್ಯವಸ್ಥೆ, ಶಾಂತಿ ಪಾಲನೆಗಾಗಿ ಮತ್ತು ಸಾರ್ವಜನಿಕರ ಹಿತಾಸಕ್ತಿ ಕಾಪಾಡುವ ಹಿತದೃಷ್ಟಿಯಿಂದ ಶ್ರೀ ಹುಲಿಗೆಮ್ಮ ದೇವಾಲಯದಿಂದ 5 ಕಿ.ಮೀ ವ್ಯಾಪ್ತಿಯವರೆಗೆ ಮೇ 30 ರ ಬೆಳಿಗ್ಗೆ 06 ಗಂಟೆಯಿAದ ಜೂನ್ 03 ರ ರಾತ್ರಿ 11 ಗಂಟೆಯವರೆಗೆ ಕರ್ನಾಟಕ ಅಬಕಾರಿ ಕಾಯ್ದೆ-1965 ರ ಕಲಂ 21 ರನ್ವಯ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ನಲಿನ್ ಅತುಲ್ ಅವರು ಆದೇಶ ಹೊರಡಿಸಿದ್ದಾರೆ.

ಆದೇಶದನ್ವಯ ಅಬಕಾರಿ ಉಪ ಆಯುಕ್ತರ ನೇತೃತ್ವದಲ್ಲಿ ತನಿಖಾ ತಂಡ ರಚಿಸಿ, ಅದರಲ್ಲಿ ಆರಕ್ಷಕ ವೃತ್ತ ನಿರೀಕ್ಷಕರು ಹಾಗೂ ಅಬಕಾರಿ ವೃತ್ತ ನಿರೀಕ್ಷಕರು ಕಾರ್ಯನಿರ್ವಹಿಸಬೇಕು. ಆದೇಶವನ್ನು ಅನುಷ್ಠಾನಗೊಳಿಸುವಲ್ಲಿ ನಿರ್ಲಕ್ಷತನ ತೋರಿದವರ ವಿರುದ್ಧ ಕಾನೂನು ರೀತಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!