ಕರ್ತವ್ಯದಲ್ಲಿ ನಿರ್ಲಕ್ಷö್ಯತನ ತೋರದೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ : ಡಿಸಿ ನಲಿನ್ ಅತುಲ್

Get real time updates directly on you device, subscribe now.

 : ಚುನಾವಣಾ ಮತದಾನ ದಿನದಂದು ನಿಯೋಜಿತ ಸಿಬ್ಬಂದಿ ಸರಿಯಾದ  ಸಮಯಕ್ಕೆ ಕರ್ತವ್ಯಕ್ಕೆ ಹಾಜರಾಗಿ ಜವಾಬ್ದಾರಿಯಿಂದ ಹಾಗೂ ಚುನಾವಣಾ ಆಯೋಗದ ಮಾರ್ಗಸೂಚಿಯನುಸಾರ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಚುನಾವಣಾ ನಿಯೋಜಿತ ಸಿಬ್ಬಂದಿಗಳಿಗೆ ಸೂಚಿಸಿದರು.
ಸೋಮವಾರದಂದು ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ-2024ರ ಸಂಬAಧ ಜಿಲ್ಲೆಯ ಎಲ್ಲಾ  ಪಿ.ಆರ್.ಒ ಹಾಗೂ ಎ.ಪಿ.ಆರ್.ಒ ಗಳಿಗೆ ಆಯೋಜಿಸಿದ್ದ 2ನೇ ಹಂತದ ತರಬೇತಿ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.
ಪಿ.ಆರ್.ಒ ಮತ್ತು ಎ.ಪಿ.ಆರ್.ಒ ಗಳು ಮತದಾನದ ದಿನದಂದು ನಿಗದಿತ ಸಮಯಕ್ಕೆ ನಿಯೋಜಿತ ಮತಗಟ್ಟೆಗೆ ಹಾಜರಾಗಬೇಕು. ಯಾವುದೇ ರೀತಿಯ ನಿರ್ಲಕ್ಷö್ಯತನ ತೋರದೆ ಚುನಾವಣಾ ಆಯೋಗ ನೀಡಿದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಒತ್ತಡಮುಕ್ತವಾಗಿ ಹಾಗೂ ಶಾಂತಿಯುತವಾಗಿ ಮತದಾನ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿಗಳು ಚುನಾವಣಾ ಸಿಬ್ಬಂದಿಗೆ ತಿಳಿಸಿದರು.
ಜಿಲ್ಲಾ ಮಟ್ಟದ ಮಾಸ್ಟರ್ ಟ್ರೆöÊನರ್ ವಿದ್ಯಾಧರ ಮೇಘರಾಜ  ಅವರು ಮಾತನಾಡಿ, ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಯು ಜೂನ್ 3ರಂದು ನಡೆಯಲಿದೆ. ಜಿಲ್ಲೆಯಲ್ಲಿ ಒಟ್ಟು  24 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಎಲ್ಲಾ ಮತಗಟ್ಟೆಗಳ ಪಿ.ಆರ್.ಒ ಮತ್ತು ಎ.ಪಿ.ಆರ್.ಒ ಗಳು ಹೇಗೆ ಕಾರ್ಯ ನಿರ್ವಹಿಸಬೇಕು ಎಂದು ತರಬೇತಿ ನೀಡಿದರು. ಮತಗಟ್ಟೆ ಅಧಿಕಾರಿಗಳು ಮುಕ್ತ, ನ್ಯಾಯಸಮ್ಮತ, ಶಾಂತಿಯುತ ಮತದಾನ ನಡೆಸಲು ಯಾವ ರೀತಿ ಕರ್ತವ್ಯ ನಿರ್ವಹಿಸಬೇಕು ಎಂಬುವುದರ ಬಗ್ಗೆ ಮಾಹಿತಿ ನೀಡಿದರು.
ಮಸ್ಟರಿಂಗ್ ಕಾರ್ಯಗಳಲ್ಲಿ ತಿಳಿಸಿದ ಸಮಯ ಮತ್ತು ಸ್ಥಳದಲ್ಲಿ ಸೇರಬೇಕು. ಮತಪೆಟ್ಟಿಗೆಗಳು, ಮತಪತ್ರಗಳನ್ನು ಪಡೆದುಕೊಳ್ಳಬೇಕು ಎಂದು ತಿಳಿಸುತ್ತಾ ಇನ್ನಿತರ ಮತದಾನಕ್ಕೆ ಬೇಕಾಗುವಂತ ಸಾಮಗ್ರಿಗಳ ಬಗ್ಗೆ ಪಿ.ಆರ್.ಒ ಮತ್ತು ಎ.ಪಿ.ಆರ್.ಒ ಗಳಿಗೆ ಮಾಹಿತಿ ನೀಡಿದರು. ಮತಗಟ್ಟೆ  ತಲುಪಿದ ನಂತರ ನಿರ್ವಹಿಸಬೇಕಾದ ಕಾರ್ಯದ ಬಗ್ಗೆ ತಿಳಿಸಿದರು. ಏಜೆಂಟ್ ಅಥವಾ ಪ್ರತಿನಿಧಿಗಳ ನೇಮಕ ಪ್ರಕ್ರಿಯೆ ಬಗ್ಗೆ ತಿಳಿಸಿದರು. ಮತಗಟ್ಟೆ ವ್ಯವಸ್ಥೆ, ಮತಪತ್ರ ನಿರ್ವಹಣೆ ಹಾಗೂ ಗ್ರೀನ್ ಪೇಪರ್ ಸೀಲ್ ಅಳವಡಿಕೆ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಕೊಪ್ಪಳ ತಹಶೀಲ್ದಾರರಾದ ವಿಠ್ಠಲ್ ಚೌಗಲಾ, ಜಿಲ್ಲಾ ತರಬೇತಿ ಸಂಸ್ಥೆ ಪ್ರಾಂಶುಪಾಲರಾದ ಕೃಷ್ಣಮೂರ್ತಿ ದೇಸಾಯಿ, ಚುನಾವಣಾ ತಹಶೀಲ್ದಾರ ರವಿ ವಸ್ತçದ್ ಸೇರಿದಂತೆ ಜಿಲ್ಲೆಯ ಎಲ್ಲಾ ಪಿ.ಆರ್.ಒ, ಎ.ಪಿ.ಆರ್.ಒ ಗಳು ಉಪಸ್ಥಿತರಿದ್ದರು.

Get real time updates directly on you device, subscribe now.

Comments are closed.

error: Content is protected !!
%d bloggers like this: