ಲೋಕಸಭಾ ಚುನಾವಣೆ ಮತ ಎಣಿಕೆ : ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳ ಆದೇಶ

Get real time updates directly on you device, subscribe now.

ಲೋಕಸಭಾ ಚುನಾವಣೆ-2024 ರ ಮತ ಎಣಿಕೆ ಕಾರ್ಯ ಜೂನ್ 04ರಂದು ನಡೆಯಲಿರುವ ಪ್ರಯುಕ್ತ ಶಾಂತಿ ಹಾಗೂ ನ್ಯಾಯಸಮ್ಮತವಾಗಿ ನಡೆಯುವ  ಹಿತದೃಷ್ಟಿಯಿಂದ ಕಾನೂನು ಸುವ್ಯವಸ್ಥೆ ಕಾಪಾಡಲು ಅಪರಾಧ ದಂಡ ಪ್ರಕ್ರಿಯಾ ಸಂಹಿತೆ  1973ರ ಕಲಂ 144 ರನ್ವಯ ಕೊಪ್ಪಳ ಜಿಲ್ಲೆಯಾದ್ಯಂತ ಜೂನ್ 03ರ ಸಂಜೆ 6 ಗಂಟೆಯಿAದ ಜೂನ್ 4ರ ಮಧ್ಯರಾತ್ರಿ 12 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಆದೇಶ ಹೊರಡಿಸಿದ್ದಾರೆ.
ಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿಗಳು ಹಾಗೂ ಅವರ ಬೆಂಬಲಿಗರು ಧ್ವನಿವರ್ಧಕಗಳನ್ನು ಹಾಕುವುದು, ಮೆರವಣಿಗೆ, ಸಭೆ, ಪಟಾಕಿಗಳನ್ನು ಸಿಡಿಸುವುದು ಹಾಗೂ ವಿಜಯೋತ್ಸವ ಆಚರಿಸುವ ಸಾಧ್ಯತೆಗಳಿದ್ದು, ಚುನಾವಣೆಯ ಫಲಿತಾಂಶದಿAದಾಗಿ ಯಾವುದೇ ಘರ್ಷಣೆಗಳು ಉಂಟಾಗದAತೆ ಹಾಗೂ ಸಾರ್ವಜನಿಕ ಶಾಂತಿಗೆ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗದAತೆ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಆದೇಶದನ್ವಯ ಮತ ಎಣಿಕಾ ಕೇಂದ್ರವಾದ ಕೊಪ್ಪಳ ನಗರದ ಶ್ರೀ ಗವಿಸಿದ್ದೇಶ್ವರ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಪದವಿ ಕಾಲೇಜು ಆವರಣವು ಸಂಪೂರ್ಣ ನಿರ್ಬಂಧಿತ ಪ್ರದೇಶವಾಗಿರುತ್ತದೆ. ಚುನಾವಣಾ ಕರ್ತವ್ಯದಲ್ಲಿ ನಿರತರಾದ ಎಲ್ಲಾ ಅಧಿಕಾರಿಗಳು, ಸಿಬ್ಬಂದಿಗಳು, ಚುನಾವಣಾ ಅಭ್ಯರ್ಥಿಗಳು, ಎಣಿಕಾ ಏಜೆಂಟರು ಹಾಗೂ ಪಾಸ್ ಹೊಂದಿರುವ ಮಾಧ್ಯಮದವರಿಗೆ ಮಾತ್ರ ಮತ ಎಣಿಕಾ ಕೇಂದ್ರದಲ್ಲಿ ಪ್ರವೇಶಕ್ಕೆ ಅವಕಾಶವಿರುತ್ತದೆ. ಈ ಸಮಯದಲ್ಲಿ ಜಿಲ್ಲೆಯಾದ್ಯಂತ ವಿಜಯೋತ್ಸವ ಆಚರಣೆ, ದ್ವನಿವರ್ಧಕಗಳನ್ನು ಬಳಸುವುದು, ಮೆರವಣಿಗೆ ಮಾಡುವುದು, ಪಟಾಕಿ ಗಳನ್ನು ಸಿಡಿಸುವುದನ್ನು ನಿರ್ಬಂಧಿಸಲಾಗಿದೆ.
ಆದೇಶವು ಮದುವೆ, ಶವ ಸಂಸ್ಕಾರ  ಮತ್ತು ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯವಾಗುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!
%d bloggers like this: