ಬಿಸರಳ್ಳಿ ಗ್ರಾಮ ಪಂಚಾಯತ : ನರೇಗಾ ಕಾಮಗಾರಿ ಪರಿಶೀಲನೆ
ಬಿಸರಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಅಳವಂಡಿ ಹೋಬಳಿಯ ಕೃಷಿ ಇಲಾಖೆಯಿಂದ ಅನುಷ್ಠಾನಿಸುತ್ತಿರುವ ಕಂದಕ ಬದು ನಿರ್ಮಾಣ ಕಾಮಗಾರಿ ಹಾಗೂ ಗ್ರಾಮ ಪಂಚಾಯತಿಯ ನಾಲಾ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ರವಿವಾರದಂದು ಕೊಪ್ಪಳ ತಾಲೂಕ ಪಂಚಾಯತಿಯ ನರೇಗಾ ಸಹಾಯಕ ನಿರ್ದಶೇಕರಾದ ಯಂಕಪ್ಪ ಭೇಟಿ, ಕಾಮಗಾರಿ ಪರಿಶೀಲಿಸಿದರು.
ಪ್ರತಿ ಬದುವಿನ ಮೇಲೆ ವಿವಿಧ ಜಾತಿಯ ಸಸಿಗಳನ್ನು ನೆಡುವುದರಿಂದ ಭೂಮಿಯ ತೇವಾಂಶ ಹೆಚ್ಚಳದ ಜೊತೆಗೆ ಬೆಳೆಗಳಿಗೆ ಅನುಕೂಲವಾಗುತ್ತದೆ. ಒಂದು ಆರ್ಥಿಕ ವರ್ಷದಲ್ಲಿ ಒಂದು ಕುಟುಂಬಕ್ಕೆ 100 ದಿನಗಳ ಅಕುಶಲ ಕೆಲಸವನ್ನು ಬದು ನಿರ್ಮಾಣ ಕಾಮಗಾರಿಯಲ್ಲಿ ಕೆಲಸ ನೀಡಲು ಸೂಚಿಸಿದರು.
ಈ ಸಂದರ್ಭದಲ್ಲಿ ಅಳವಂಡಿ ಕೃಷಿ ಅಧಿಕಾರಿ ಪ್ರತಾಪಗೌಡ, ತಾಲೂಕ ಐಇಸಿ ಸಂಯೋಜಕ ದೇವರಾಜ ಪತ್ತಾರ, ಅನುಷ್ಠಾನ ಇಲಾಖೆಯ ತಾಂತ್ರಿಕ ಸಂಯೋಜಕಿ ಕವಿತಾ, ಕೃಷಿ ತಾಂತ್ರಿಕ ಸಹಾಯಕಿ ಶಶಿರೇಖಾ, ಕಾಯಕ ಬಂಧುಗಳು ಹಾಗು 335 ಕೂಲಿಕಾರರು ಹಾಜರಿದ್ದರು.
Comments are closed.