ಮೇ 30ರಿಂದ ಜೂನ್ 3ರವರೆಗೆ ಶ್ರೀ ಹುಲಿಗೆಮ್ಮ ದೇವಿ ಜಾತ್ರಾ ಮಹೋತ್ಸವ
): ಕೊಪ್ಪಳ ಜಿಲ್ಲೆಯ ಹುಲಿಗಿ ಗ್ರಾಮದ ಶ್ರೀ ಹುಲಗೆಮ್ಮ ದೇವಿ ದೇವಸ್ಥಾನದ 2024ನೇ ಸಾಲಿನ ವಾರ್ಷಿಕ ಜಾತ್ರಾ ಮಹೋತ್ಸವವು ಮೇ 30ರಿಂದ ಜೂನ್ 3ರವರೆಗೆ ನಡೆಯಲಿದ್ದು, ಜಾತ್ರಾ ಮಹೋತ್ಸವಕ್ಕೆ ಹಲವು ಜಿಲ್ಲೆ ಹಾಗೂ ರಾಜ್ಯಗಳಿಂದ 5 ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಬರುವುದರಿಂದ ಭಕ್ತಾದಿಗಳ ಅನುಕೂಲಕ್ಕಾಗಿ ಜಾತ್ರೆಯ ಕಾರ್ಯಕ್ರಮಗಳಿಗೆ ಅಗತ್ಯ ಸಿದ್ದತೆ ಮಾಡಿಕೊಳ್ಳಲಾಗಿದೆ.
ಶ್ರೀ ಹುಲಿಗೆಮ್ಮ ದೇವಿಯ ಜಾತ್ರೆಯು ಮೇ 30 ರಿಂದ ಜೂನ್ 3 ರವರೆಗೆ ಜರುಗಲಿದ್ದು, ಕಾರ್ಯಕ್ರಮದ ವಿವರ ಇಂತಿದೆ.
ಮೇ 30 ರಂದು ಸಂಜೆ 7 ಗಂಟೆಗೆ ಉತ್ಸವ, ಮೇ 31 ರಂದು ಅಕ್ಕಿಪಡಿ, ಸಂಜೆ 5-30 ಗಂಟೆಗೆ ಮಹಾರಥೋತ್ಸವ ಜರುಗಲಿದೆ. ಜೂನ್ 01 ರಂದು ಬಾಳಿದಂಡಿಗೆ, ರಾತ್ರಿ 8 ಗಂಟೆಗೆ ಕೊಂಡದ ಪೂಜಾ, ರಾತ್ರಿ 3-30 ಗಂಟೆಗೆ (ಬ್ರಾಹ್ಮೀ ಮುಹೂರ್ತದಲ್ಲಿ) ಗಂಗಾದೇವಿ ಪೂಜಾ, ಬೆಳಗಿನ ಜಾವ 4 ಗಂಟೆಗೆ ಶ್ರೀದೇವಿಗೆ ಪ್ರಸಾದ ಕೇಳುವುದು, ಬೆಳಗಿನ ಜಾವ 4-30 ಕ್ಕೆ ಬಾಳಿದಂಡಿಗೆ ಆರೋಹಣ ನಡೆಯಲಿದೆ.
ಜೂನ್ 02 ರಂದು ಪಾಯಸ ಅಗ್ನಿಕೊಂಡ ನಡೆಯಲಿದ್ದು, ಸಂಜೆ 8 ಗಂಟೆಗೆ ಕೊಂಡದ ಪೂಜಾ, ರಾತ್ರಿ 9 ಕ್ಕೆ ಹಿಡಿದಕ್ಷಿಣೆ ವಿತರಣೆ, 9-30 ಕ್ಕೆ ಪಡಗದ ಪೂಜಾ, ಬೆಳಗಿನಜಾವ 4 ಗಂಟೆಗೆ (ಬ್ರಾಹ್ಮೀ ಮುಹೂರ್ತದಲ್ಲಿ) ಗಂಗಾದೇವಿ ಪೂಜಾ, ಬೆಳಗಿನ ಜಾವ 4-30ಕ್ಕೆ ಗಂಟೆಗೆ ಶ್ರೀದೇವಿಗೆ ಪ್ರಸಾದ ಕೇಳುವುದು, ಬೆಳಗಿನ ಜಾವ 5-30 ಗಂಟೆಗೆ ಶ್ರೀದೇವಿಗೆ ಪಾಯಸ ಪ್ರಸಾದ ನಿವೇದನೆ ಹಾಗೂ ಜೂನ್ 03 ರಂದು ಬೆಳಿಗ್ಗೆ 6-30 ಗಂಟೆಗೆ (ದ್ವಾದಶಿ ನಸುಕಿನಲ್ಲಿ) ಅಗ್ನಿಕುಂಡ ನಡೆಯಲಿದೆ. ಜೂನ್ 25 ರಂದು ರಾತ್ರಿ 8 ಗಂಟೆಗೆ ಶ್ರೀದೇವಿಯವರ ಕಂಕಣ ವಿಸರ್ಜನೆ ಮಾಡಲಾಗುವುದು ಎಂದು ಹುಲಿಗೆಮ್ಮ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.