ಮತ ಎಣಿಕೆ ಕಾರ್ಯದಲ್ಲಿ ಚುನಾವಣಾ ಆಯೋಗದ  ಮಾರ್ಗಸೂಚಿಗಳನ್ನು ಪಾಲಿಸಿ: ನಲಿನ್ ಅತುಲ್

Get real time updates directly on you device, subscribe now.

: ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ನಿಮಿತ್ತ ಜೂನ್ 4ರಂದು ಮತ ಎಣಿಕೆ ಕಾರ್ಯ ನಡೆಯಲಿದ್ದು, ಮತ ಎಣಿಕೆಗಾಗಿ ನಿಯೋಜಿಸಲಾದ ಅಧಿಕಾರಿಗಳು, ಯಾವುದೇ ಗೊಂದಲಕ್ಕೆ ಅವಕಾಶ ಕೊಡದಂತೆ ಮತ ಎಣಿಕೆ ಕಾರ್ಯದಲ್ಲಿ ಎಚ್ಚರಿಕೆ ವಹಿಸಿ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಪಾಲಿಸಿ ಮತಎಣಿಕೆ ಮಾಡಬೇಕು ಎಂದು ಕೊಪ್ಪಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ನಲಿನ್ ಅತುಲ್ ಅವರು ಹೇಳಿದರು.
ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಹಿನ್ನೆಲೆಯಲ್ಲಿ ಸೆಕ್ಟರ್ ಅಧಿಕಾರಿಗಳು, ಮತ ಎಣಿಕೆ ಮೇಲ್ವಿಚಾರಕರು ಹಾಗೂ ಮತ ಎಣಿಕೆ ಸಹಾಯಕ ಅಧಿಕಾರಿಗಳಿಗೆ ಮತ ಎಣಿಕೆ ಕಾರ್ಯದ ಕುರಿತು ಕೊಪ್ಪಳ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಮಂಗಳವಾರದAದು ಹಮ್ಮಿಕೊಳ್ಳಲಾಗಿದ್ದ ಮತ ಎಣಿಕೆ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ನಡೆದ ಚುನಾವಣೆಯ ಫಲಿತಾಂಶವು ಜೂನ್ 4ಕ್ಕೆ ಹೊರ ಬರಲಿದ್ದು, ಅಂದು ಮತ ಏಣಿಕಾ ಕಾರ್ಯವನ್ನು ನಗರದ ಗವಿಸಿದ್ದೇಶ್ವರ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ನಡೆಸಲಾಗುವುದು. ಮತ ಎಣಿಕೆ ಕಾರ್ಯದಲ್ಲಿ ಆಯೋಗವು ನೀಡಿರುವ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಮತ ಎಣಿಕೆ ಕಾರ್ಯವು ಸುಗಮವಾಗಿ ನಡೆಯಬೇಕಾಗಿದ್ದು, ಮತ ಎಣಿಕಾ ಕಾರ್ಯಕ್ಕಾಗಿ ನಿಯೋಜಿಸಲಾದ ಅಧಿಕಾರಿಗಳು ಮತ ಎಣಿಕೆ ದಿನದಂದು ಬೆಳಿಗ್ಗೆ 6 ಗಂಟೆಗೆ ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗಿ, ಬೆಳಿಗ್ಗೆ 6-30ಕ್ಕೆ ವರದಿ ಮಾಡಿಕೊಳ್ಳಬೇಕು. ತಮಗೆ ಹಂಚಿಕೆಯಾದ ವಿಧಾನಸಭಾ ಕ್ಷೇತ್ರದ ಮಾಹಿತಿ ಹಾಗೂ ಟೇಬಲ್ ಸಂಖ್ಯೆಯನ್ನು ತಿಳಿದುಕೊಳ್ಳಬೇಕು. ಮತಯಂತ್ರಗಳ ಪ್ರಕಾರ ದಾಖಲಾದ ಮತಗಳ ಸಂಖ್ಯೆ, ಚಲಾವಣೆಯಾದ ಮತಗಳು ಇತ್ಯಾದಿಗಳ ವಿವರವನ್ನು ಪಡೆಯಬೇಕು ಎಂದು ಸೂಚನೆ ನೀಡಿದರು.
ಮತ ಎಣಿಕೆ ದಿನ ಮೊದಲಿಗೆ ಬೆಳಿಗ್ಗೆ 08 ಗಂಟೆಗೆ ಸರಿಯಾಗಿ ಪೋಸ್ಟಲ್ ಮತಗಳ ಎಣಿಕೆ ಪ್ರಾರಂಭಗೊAಡು, ಉಳಿದಂತೆ ಮತಗಟ್ಟೆಗಳಲ್ಲಿ ಇವಿಎಂ ಮೂಲಕ ದಾಖಲಾದ ಮತಗಳ ಎಣಿಕೆ ಕಾರ್ಯ ಪ್ರಾರಂಭವಾಗುತ್ತದೆ. ಮತ ಎಣಿಕೆ ಕಾರ್ಯದಲ್ಲಿ ಚುನಾವಣಾ ಆಯೋಗ ನೀಡಿರುವ ಮಾರ್ಗಸೂಚಿಯನ್ನ ಕಟ್ಟುನಿಟ್ಟಾಗಿ ಪಾಲಿಸಬೇಕು. ಯಾವುದೇ ತೊಂದರೆ ಉಂಟಾದಲ್ಲಿ ಕೂಡಲೇ ಅಧಿಕಾರಿಗಳ ಗಮನಕ್ಕೆ ತರಬೇಕು ಎಂದು ಕೊಪ್ಪಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ನಲಿನ್ ಅತುಲ್ ಅವರು ಹೇಳಿದರು.
ತರಬೇತಿ: ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಮತ ಎಣಿಕೆ ನಿಮಿತ್ತ ಸೆಕ್ಟರ್ ಅಧಿಕಾರಿಗಳು, ಮತ ಎಣಿಕೆ ಮೇಲ್ವಿಚಾರಕರು ಹಾಗೂ ಮತ ಎಣಿಕೆ ಸಹಾಯಕ ಅಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮದ ನೋಡಲ್ ಅಧಿಕಾರಿಗಳು ಹಾಗೂ ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಚಾರ್ಯರಾದ ಕೃಷ್ಣಮೂರ್ತಿ ದೇಸಾಯಿ ಅವರು ಮತ ಎಣಿಕೆ ಕಾರ್ಯದ ಕುರಿತು ಸಂಪೂರ್ಣ ವಿವರವನ್ನು ನೀಡಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ ಕಡಿ ಸೇರಿದಂತೆ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಸಹಾಯಕ ಚುನಾವಣಾಧಿಕಾರಿಗಳು, ತಹಶಿಲ್ದಾರರು, ಜಿಲ್ಲಾ ಚುನಾವಣಾ ಶಾಖೆಯ ತಹಶೀಲ್ದಾರರು, ವಿವಿಧ ಇಲಾಖೆಗಳ ಅಧಿಕಾರಿಗಳು, ಎಲ್ಲಾ ಸೆಕ್ಟರ್ ಅಧಿಕಾರಿಗಳು, ಮತ ಎಣಿಕೆ ಮೇಲ್ವಿಚಾರಕರು ಹಾಗೂ ಮತ ಎಣಿಕೆ ಸಹಾಯಕ ಅಧಿಕಾರಿಗಳು ಉಪಸ್ಥಿತರಿದ್ದರು.
 ಅಂಚೆ ಮತಪತ್ರ-ಎಣಿಕೆ ತರಬೇತಿ: ಬಳಿಕ ನಡೆದ ಅಂಚೆ ಮತಪತ್ರ-ಎಣಿಕೆ ತರಬೇತಿ ಕಾರ್ಯಕ್ರಮದಲ್ಲಿ ಕೊಪ್ಪಳ ಉಪವಿಭಾಗಾಧಿಕಾರಿಗಳಾದ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ ಅವರು ಮಾತನಾಡಿ, ಅಂಚೆ ಮತಪತ್ರ-ಎಣಿಕೆ ಸಿಬ್ಬಂದಿಯು ಮುಕ್ತವಾಗಿ ಮತ್ತು ನ್ಯಾಯಸಮ್ಮತವಾಗಿ ಕಾರ್ಯನಿರ್ವಹಿಸಬೇಕು. ಇವಿಎಂನಿAದ ಮತ ಎಣಿಕೆ ಮಾಡುವ ಮೊದಲು ಅಂಚೆ ಮತಗಳ ಎಣಿಕೆಯನ್ನು ಕೈಗೊಳ್ಳಬೇಕು. ಅಂಚೆ ಮತಗಳ ಎಣಿಕೆಗೆ ಪ್ರತಿ ಟೇಬಲ್‌ನಲ್ಲಿ ಒಬ್ಬರು ಎ.ಆರ್.ಓ., ಒಬ್ಬರು ಎಣಿಕೆ ಮೇಲ್ವಿಚಾರಕರು (ಸಿಎಸ್) ಮತ್ತು ಇಬ್ಬರು ಎಣಿಕೆ ಸಹಾಯಕರು(ಸಿಎ) ಇರುತ್ತಾರೆ. ಸಂಪೂರ್ಣ ಎಣಿಕೆ ಪ್ರಕ್ರಿಯೆಯನ್ನು ವೀಡಿಯೊಗ್ರಾಫ್ ಮಾಡಲಾಗುತ್ತದೆ. ಫಾರ್ಮ್ 13ಎ ಮತ್ತು 13ಬಿ ಅನ್ನು ಸೂಕ್ಷ್ಮವಾಗಿ ಪರಿಶೀಲಿಸಿದ ನಂತರ ಒಳ ಕವರ್ ಅನ್ನು ತೆರೆಯಬೇಕು. ಯಾವ ಯಾವ ಸಂದರ್ಭದಲ್ಲಿ ಅಂಚೆ ಮತ ಪತ್ರವನ್ನು ತಿರಸ್ಕರಿಸಬೇಕು ಹಾಗೂ ತಿರಸ್ಕರಿಸಬಾರದು ಎಂಬುದರ ಬಗ್ಗೆ ಮಾಹಿತಿ ನೀಡಿದರು.
ನಿರ್ಧಿಷ್ಟ ಅಭ್ಯರ್ಥಿವಾರು ಅಂಚೆ ಮತಗಳನ್ನು ವಿತರಣೆ ಮಾಡಬೇಕು. ಪ್ರತಿ ಅಭ್ಯರ್ಥಿಯು ಪಡೆದ 25 ಮತಗಳ ಒಂದು ಬಂಡಲ್ ಅನ್ನು ಮಾಡುವುದು, ಅಭ್ಯರ್ಥಿಯು ಪಡೆದ ಒಟ್ಟು ಅಂಚೆ ಮತಗಳ ಸಂಖ್ಯೆಯನ್ನು ಲೆಕ್ಕಾಚಾರ ಮಾಡಿ ನಮೂನೆ 20 ರಲ್ಲಿ ಫಲಿತಾಂಶವನ್ನು ನಮೂದಿಸಬೇಕು ಎಂದು ವಿವರವಾದ ಮಾಹಿತಿ ನೀಡಿದರು.

Get real time updates directly on you device, subscribe now.

Comments are closed.

error: Content is protected !!
%d bloggers like this: