ಕಟ್ಟಡ ಕಾರ್ಮಿಕರ ವಿವಿಧ ಬೇಡಿಕೆಗಳಿಗಾಗಿ ಪ್ರತಿಭಟನೆ
ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ನೆಪದಲ್ಲಿ ತಡೆಹಿಡಿಯಲಾದ ಕಟ್ಟಡ ಕಾರ್ಮಿಕರ ಸೌಲಭ್ಯಗಳ ಅರ್ಜಿಗಳನ್ನು ಕೂಡಲೇ ಸ್ವೀಕರಿಸಲು ಕ್ರಮವಹಿಸಬೇಕು ಮತ್ತು ಶೈಕ್ಷಣಿಕ ಅರ್ಜಿಗಳನ್ನು ಸ್ವೀಕರಿಸುವ ಅವಧಿಯನ್ನು ಆಗಸ್ಟ್ ವರೆಗೆ ವಿಸ್ತರಿಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್ (ರಿ) (ಸಿಐಟಿಯು ) ನೇತೃತ್ವದಲ್ಲಿ ಜೂನ್ ೧ ರಾಜ್ಯಾದ್ಯಂತ ಕಟ್ಟಡ ಕಾರ್ಮಿಕರು ಪ್ರತಿಭಟನೆ ನಡೆಸಿ ಈ ಮನವಿ ಕರ್ನಾಟಕ ರಾಜ್ಯ ಕಟ್ಟಡ & ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್(ರಿ) ಸಲ್ಲಿಸದೆ.
ಕರ್ನಾಟಕದ ಸರ್ಕಾರ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳು ಚುನಾವಣೆ ಹೊತ್ತಿನಲ್ಲಿ ಯಾವುದೇ ತಡೆಯಿಲ್ಲದೆ ಜಾರಿಗೊಳ್ಳುತ್ತಿವೆ ಆದರೆ ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿಯ ಅಧಿಕಾರಿಗಳು ಚುನಾವಣಾನೀತಿ ಸಂಹಿತೆ ನೆಪ ಹಾಗೂ ತಂತ್ರಾಂಶದ ನೆಪವೂಡ್ಡಿ ಫಲಾನುಭವಿ ಕಾರ್ಮಿಕರಿಗೆ ಪಿಂಚಣಿ,ವೈದ್ಯಕೀಯ, ಹೆರಿಗೆ,ಮದುವೆ ಸಹಾಯಧನ ಅರ್ಜಿಗಳ ಸ್ವೀಕಾರವನ್ನು ತಡೆವೂಡ್ಡಿರುವುದು ಮತ್ತು ಬಡಕಾರ್ಮಿಕರಿಗೆ ನ್ಯಾಯಬದ್ದವಾಗಿ ಸಿಗಬೇಕಾದ ಸೌಲಭ್ಯಗಳನ್ನು ನಿರಾಕರಿಸುತ್ತಿರುವುದು ಸರಿಯಾದ ಕ್ರಮವಲ್ಲ. ಮಂಡಳಿ ಈ ಕ್ರಮವನ್ನು ವಿರೋಧಿಸಿ ರಾಜ್ಯದ ಕಾರ್ಮಿಕಾಧಿಕಾರಿಗಳು ಹಾಗೂ ತಾಲೂಕು ನಿರೀಕ್ಷಕರ ಕಚೇರಿ ಹಾಗೂ ಬೆಂಗಳೂರಿನಲ್ಲಿ ಕಲ್ಯಾಣ ಮಂಡಳಿ ಎದುರು ನಡೆಲಾಗುತ್ತಿದೆ. ಕೂಡಲೇ ಸೌಲಭ್ಯಗಳ ಅರ್ಜಿ ಸ್ವೀಕರಿಸಲು ಕ್ರಮವಹಿಸಬೇಕೆಂದು ಕರ್ನಾಟಕ ರಾಜ್ಯ ಕಟ್ಟಡ & ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್(ರಿ) ಮನವಿ ಸಲ್ಲಿಸದೆ.
Comments are closed.