ಜೂನ್ ಮಾಹೆಯಲ್ಲಿ ಬಾಲಕಾರ್ಮಿಕ ನಿರ್ಮೂಲನಾ ಅಭಿಯಾನ ಹಮ್ಮಿಕೊಳ್ಳಲು ಜಿಲ್ಲಾಧಿಕಾರಿಗಳ ಆದೇಶ
: ಜೂನ್ 12 ರಂದು ವಿಶ್ವ ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ವಿರೋಧಿ ದಿನ ಆಚರಿಸುವ ಹಿನ್ನೆಲೆಯಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿಯನ್ನು ತೊಡೆದು ಹಾಕುವ ಉದ್ದೇಶದಿಂದ ಜಿಲ್ಲೆಯಾದ್ಯಂತ ಜೂನ್ 01 ರಿಂದ 30 ರವರೆಗೆ ಒಂದು ತಿಂಗಳುಗಳ ಕಾಲ ಬಾಲಕಾರ್ಮಿಕ ನಿರ್ಮೂಲನಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮವನ್ನು ತಾಲ್ಲೂಕು, ಹೋಬಳಿ, ಗ್ರಾಮ ಮಟ್ಟದಲ್ಲಿ ಆಯೋಜಿಸಿ ವರದಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಅಧ್ಯಕ್ಷರಾದ ನಲಿನ್ ಅತುಲ್ ಅವರು ಆದೇಶ ಹೊರಡಿಸಿದ್ದಾರೆ.
ಎಲ್ಲಾ ಪ್ರಕರಣಗಳಲ್ಲೂ ಪೊಲೀಸ್ ಠಾಣೆಯಲ್ಲಿ ಪ್ರಥಮ ವರ್ತಮಾನ ವರದಿಯನ್ನು ದಾಖಲಿಸಲು ಅವಕಾಶ ಕಲ್ಪಿಸಿದೆ, ಇದಕ್ಕೆ ಪೂರಕವೆಂಬAತೆ ನಿಯಮಾವಳಿ ಮತ್ತು ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಪದ್ದತಿಯನ್ನು ಪರಿಣಾಮಕಾರಿಯಾಗಿ ನಿರ್ಮೂಲನೆ ಮಾಡಲು ಕಾರ್ಯಸೂಚಿಯನ್ನು ಕೇಂದ್ರ ಕಾರ್ಮಿಕ ಸಚಿವಾಲಯ ಬಿಡುಗಡೆ ಮಾಡಿದೆ. ರಾಜ್ಯ ಕಾರ್ಮಿಕ ಇಲಾಖೆಯು ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆ ಕಾರ್ಮಿಕ ಮುಕ್ತ ವಲಯಗಳನ್ನಾಗಿಸುವ ಕಾರ್ಯಸೂಚಿಯನ್ನು ಹೊರತಂದಿದೆ. ಇವುಗಳ ಪರಿಣಾಮಕಾರಿ ಅನುಷ್ಠಾನ ಅವಶ್ಯಕವಾಗಿದ್ದು, ಈ ನಿಟ್ಟಿನಲ್ಲಿ ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆಗೊಳಿಸಲು ಶ್ರಮಿಸುತ್ತಿರುವ ಎಲ್ಲಾ ಇಲಾಖೆಗಳು ಮತ್ತು ಸ್ವಯಂ ಸೇವಾ ಸಂಸ್ಥೆಗಳ ಜವಾಬ್ದಾರಿ ಮಹತ್ವದ್ದಾಗಿದೆ. ಎಲ್ಲರೂ ಒಗ್ಗೂಡಿ ಸಹಭಾಗಿತ್ವದಿಂದ ವಿವಿಧ ಕಾರ್ಯತಂತ್ರಗಳನ್ನು ಅನುಷ್ಠಾನ ಮಾಡಿದರೆ ಮಾತ್ರ ಮಕ್ಕಳು ಬಾಲಕಾರ್ಮಿಕ ಪದ್ಧತಿಯತ್ತ ಹೋಗುವುದನ್ನು ತಡೆದು ಬಾಲಕಾರ್ಮಿಕ ಪದ್ಧತಿಯ ಸಂಪೂರ್ಣ ನಿರ್ಮೂಲನೆ ಸಾಧ್ಯ.
ಈ ನಿಟ್ಟಿನಲ್ಲಿ ಅಂತರಾಷ್ಟಿçÃಯ ಕಾರ್ಮಿಕ ಸಂಘಟನೆ, ವಿಶ್ವ ಸಂಸ್ಥೆ ಹಾಗೂ ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆಗಳು ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿಯನ್ನು ತೊಡೆದು ಹಾಕುವುದರೊಂದಿಗೆ ಕರ್ನಾಟಕವನ್ನು ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರ ಪದ್ಧತಿ ಮುಕ್ತ ಕರ್ನಾಟಕವನ್ನಾಗಿಸಲು ಶ್ರಮಿಸುತ್ತಿವೆ. ಹಾಗಾಗಿ ಈ ವರ್ಷ “ಐಇಖಿ’S ಂಅಖಿ ಔಓ ಔUಖ ಅಔಒಒIಖಿಒಇಓಖಿS: ಇಓಆ ಅಊIಐಆ ಐಂಃಔUಖ” ಎಂಬ ಧ್ಯೇಯ ವಾಕ್ಯದೊಂದಿಗೆ ಹಾಗೂ ವಿಶ್ವ ಸಂಸ್ಥೆಯ ಮಾರ್ಗಸೂಚಿಯಂತೆ ಈ ಪದ್ಧತಿಯನ್ನು ಕೊನೆಗಾಣಿಸಲು ಸಮಾರೋಪಾದಿಯಲ್ಲಿ ಕ್ರಮ ಜರುಗಿಸುವುದು ಅತ್ಯಂತ ಅಗತ್ಯ. ಕೊಪ್ಪಳ ಜಿಲ್ಲೆಯಲ್ಲಿ ಈ ಆಂದೋಲನದಲ್ಲಿ ತಾವೆಲ್ಲರೂ ಸಕ್ರೀಯವಾಗಿ ಪಾಲ್ಗೊಳ್ಳಬೇಕಾಗಿzಯೀ ಕುರಿತಂತೆ ರಾಷ್ಟಿçÃಯ ಮಕ್ಕಳ ರಕ್ಷಣಾ ಆಯೋಗದ ನಿರ್ದೇಶನದಂತೆ ಬಾಲಕಾರ್ಮಿಕ ನಿರ್ಮೂಲನಾ ಅಭಿಯಾನವನ್ನು ಜೂನ್ 01 ರಿಂದ 30 ರವರೆಗೆ 30 ದಿನಗಳ ಕಾಲ ಹಮ್ಮಿಕೊಂಡಿದ್ದು, ಈ ಮಾಹೆಯಲ್ಲಿ 30 ದಿನಗಳ ಅಭಿಯಾನ ಮತ್ತು ಜೂನ್ 12 ರಂದು ನಾವೆಲ್ಲರೂ ವಿಶ್ವ ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ವಿರೋಧಿ ದಿನವನ್ನು ಜಿಲ್ಲಾ ಮಟ್ಟದಿಂದ ಪ್ರತಿಯೊಂದು ಗ್ರಾಮ ಮಟ್ಟದಲ್ಲಿ ಹಮ್ಮಿಕೊಳ್ಳಬೇಕಾಗಿದೆ.
ಸರ್ಕಾರದ ಇತರೆ ಸಂಬAಧಿತ ಎಲ್ಲಾ ಇಲಾಖೆಗಳ ಸಹಕಾರದೊಂದಿಗೆ ಬಾಲ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ವಿರುದ್ಧ ಬಲವಾದ ಜನಾಭಿಪ್ರಾಯ ರೂಪುಗೊಳ್ಳುವಂತೆ, ಋಣಾತ್ಮಕ ಪರಿಣಾಮ ಬೀರುವ ಹಾಗೂ ಸಾಮಾಜಿಕ ಸಮಸ್ಯೆಯ ನಿವಾರಣೆಯಾಗುವಂತೆ ಚುನಾವಣಾ ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ಸರಳವಾಗಿ ಹಾಗೂ ಸಾಂಕೇತಿಕವಾಗಿ ಸರ್ಕಾರದ ಶಿಷ್ಠಾಚಾರದನ್ವಯ ಕಾರ್ಯಕ್ರಮವನ್ನು ಆಯೋಜಿಸಬೇಕು. ಜೂನ್ 12 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲೆ/ತಾಲ್ಲೂಕು/ಹೋಬಳಿ/ಗ್ರಾಮ ಮಟ್ಟದ ಎಲ್ಲಾ ಸರ್ಕಾರಿ ಇಲಾಖೆಗಳು/ಕಛೇರಿಗಳು ಮತ್ತು ಶಾಲಾ-ಕಾಲೇಜುಗಳಲ್ಲಿ ಕಡ್ಡಾಯವಾಗಿ ಬಾಲ ಹಾಗೂ ಕಿಶೋರ ಕಾರ್ಮಿಕರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲವೆಂಬ ಪ್ರಮಾಣ ವಚನ ಸ್ವೀಕರಿಸಲು ಕ್ರಮ ವಹಿಸಬೇಕು.
ಜಿಲ್ಲಾ ಮಟ್ಟದ ಕಾರ್ಯಕ್ರಮ:-
ಜಿಲ್ಲಾಡಳಿತ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಾಗೂ ವಿವಿಧ ಇಲಾಖೆಗಳ, ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಜಾಗೃತಿ ಜಾಥಾ ಕಾನೂನು ಅರಿವು-ನೆರವು ಕಾರ್ಯಕ್ರಮಗಳು ಹಾಗೂ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮವನ್ನು ಜಿಲ್ಲಾಡಳಿತ ಭವನದಲ್ಲಿ ಆಯೋಜಿಸಲಾಗುವುದು. ಎಲ್ಲಾ ಇಲಾಖೆಯ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಬೇಕು.
ತಾಲ್ಲೂಕು ಮಟ್ಟದ ಕಾರ್ಯಕ್ರಮಗಳು:-
ಕೊಪ್ಪಳ, ಗಂಗಾವತಿ, ಯಲಬುರ್ಗಾ, ಕುಷ್ಟಗಿ, ಕುಕನೂರು, ಕನಕಗಿರಿ ಹಾಗೂ ಕಾರಟಗಿ ತಾಲ್ಲೂಕು ಕೇಂದ್ರಗಳಲ್ಲಿ ತಾಲ್ಲೂಕು ಕಾನೂನು ಸೇವಾ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಆಯಾ ತಹಶೀಲ್ದಾರರು, ತಾಲ್ಲೂಕು ಪಂಚಾಯತ್, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ, ವಿವಿಧ ಇಲಾಖೆ ಮತ್ತು ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ತಾಲ್ಲೂಕು ಮಟ್ಟದಲ್ಲಿ ಜಾಗೃತಿ ಮತ್ತು ”ಪ್ರಮಾಣ ವಚನ” ಸ್ವೀಕಾರ ಕಾರ್ಯಕ್ರಮ ಆಯೋಜಿಸಬೇಕು.
ಗ್ರಾಮ ಪಂಚಾಯತ್ / ವಾರ್ಡ್ ಮಟ್ಟದ ಕಾರ್ಯಕ್ರಮಗಳು:-
ಕೊಪ್ಪಳ ಜಿಲ್ಲೆಯ ಪ್ರತಿಯೊಂದು ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ನೇತೃತ್ವದಲ್ಲಿ ಎಲ್ಲಾ ಶಾಲೆಯ ಮುಖ್ಯೋಪಾಧ್ಯಾಯರುಗಳು ಎಲ್ಲಾ ಮಕ್ಕಳಿಗೂ ಮತ್ತು ಅವರ ಪೋಷಕರಿಗೆ ಶಾಲೆಯಲ್ಲಿ ಸಮಾವೇಶ ಸೇರಿಸಿ ಪ್ರಮಾಣ ವಚನ ಸ್ವೀಕರಿಸಬೇಕು. ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿಯಿಂದಾಗುವ ದುಷ್ಪರಿಣಾಮದ ಬಗ್ಗೆ ಮಕ್ಕಳಲ್ಲಿ ಮತ್ತು ಪೋಷಕರಲ್ಲಿ ಅರಿವು ಮೂಡಿಸುವ ನಿಟ್ಟಿನಿಂದ ಮಕ್ಕಳಿಂದಲೇ ಕಿರುನಾಟಕ, ಜಾಗೃತಿ ಗೀತೆಗಳನ್ನು, ಮುಂತಾದ ಕಾರ್ಯಕ್ರಮಗಳನ್ನು ಆಯೋಜಿಸಬೇಕು.
ಪ್ರತಿ ಪಂಚಾಯತ್ ಮತ್ತು ವಾರ್ಡ್ಗಳಲ್ಲಿ ‘ಮಕ್ಕಳ ರಕ್ಷಣಾ ಸಮಿತಿ’ ಸಭೆಯನ್ನು ಆಯೋಜಿಸಿ, ಸಭೆಯಲ್ಲಿ ಮಕ್ಕಳ ಗ್ರಾಮ ಸಭೆಯಲ್ಲಿ ಮಕ್ಕಳು ಮುಂದಿಟ್ಟAತಹ ಸಮಸ್ಯೆಗಳ ಬಗ್ಗೆ ಚರ್ಚಿಸಿ ಸಮಸ್ಯೆಗಳನ್ನು ಪರಿಹರಿಸಬೇಕು. ಎಲ್ಲಾ ಶಾಲೆಗಳಲ್ಲಿ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಭೆಯನ್ನು ಆಯೋಜಿಸಿ 2023-2024 ರಲ್ಲಿ ನಡೆದ ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆಯಲ್ಲಿ ಶಾಲೆಯಿಂದ ಹೊರಗುಳಿದ ಎಲ್ಲಾ ಮಕ್ಕಳನ್ನು ಮರಳಿ ಶಾಲೆಗೆ ತರಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಿ, ನಿರ್ಧಾರಗಳನ್ನು ತೆಗೆದುಕೊಳ್ಳಬೇಕು. ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಬಾಲ ವಿಕಾಸ ಸಮಿತಿ ಸಭೆಯನ್ನು ಆಯೋಜಿಸಬೇಕು ಮತ್ತು ಬಾಲಿಕಾ ಸಂಘದ ಸಭೆಯನ್ನು ಆಯೋಜಿಸಿ ಬಾಲ ಮತ್ತು ಕಿಶೋರಾವಸ್ಥೆ ಕಾರ್ಮಿಕ ಪದ್ಧತಿಯ ದುಷ್ಪರಿಣಾಮದ ಬಗ್ಗೆ ಮಾಹಿತಿ ನೀಡಿ ಬಾಲಿಕೆಯರ ಹಾಗೂ ಗರ್ಭಿಣಿ ತಾಯಂದಿರು ಮತ್ತು ಬಾಣಂತಿಯರ ಮನೆಗಳಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಸ್ವತಃ ಶಾಲೆಗೆ ದಾಖಲಾತಿ ಮಾಡಿಸುವಂತೆ ಸಭೆಗಳಲ್ಲಿ ಹೇಳಬೇಕು.
ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯನ್ನು ಆಯೋಜಿಸಿ ಮಕ್ಕಳ ಹಕ್ಕುಗಳ ರಕ್ಷಣೆಯ ಬಗ್ಗೆ ಚರ್ಚಿಸಬೇಕು. ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ಎನ್.ಆರ್.ಇ.ಜಿ ಕುಟುಂಬ ಮತ್ತು ಸ್ವ- ಸಹಾಯ ಸಂಘಗಳನ್ನು ಬಾಲ ಕಾರ್ಮಿಕ ಮುಕ್ತ ಕುಟುಂಬಗಳಾಗಿ ಘೋಷಿಸಲು ಕ್ರಮ ಕೈಗೊಳ್ಳಲು ಹೇಳಬೇಕು. ಎಲ್ಲಾ ಕಾರ್ಮಿಕ ಸಂಘಟನೆಗಳು ಮತ್ತು ಮಾಲೀಕರ ಸಂಘಟನೆಗಳು ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನದಂದು ವಿವಿಧ ಅರಿವು ಕಾರ್ಯಕ್ರಮಗಳನ್ನು ಆಯೋಜಿಸಬೇಕು.
ಮೇಲೆ ಸೂಚಿಸಿದ ಕಾರ್ಯಕ್ರಮಗಳನ್ನು ಆಯೋಜಿಸಿ ವರದಿಯನ್ನು ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಸಲ್ಲಿಸಬೇಕು ಎಂದು ಸಂಬAಧಿಸಿದ ಇಲಾಖಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
Comments are closed.