ಮತ ಎಣಿಕಾ ಕೇಂದ್ರಕ್ಕೆ ಜಿಲ್ಲಾ ಚುನಾವಣಾಧಿಕಾರಿಗಳ ಭೇಟಿ: ಪರಿಶೀಲನೆ
ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ನಿಮಿತ್ತ ಜೂನ್ 4ರಂದು ಮತ ಎಣಿಕೆ ಕಾರ್ಯ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ನಗರದ ಶ್ರೀ ಗವಿಸಿದ್ದೇಶ್ವರ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿರುವ ಮತ ಎಣಿಕೆ ಕೇಂದ್ರಕ್ಕೆ ಕೊಪ್ಪಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ನಲಿನ್ ಅತುಲ್ ಅವರು ಶನಿವಾರ ಭೇಟಿ ನೀಡಿ ಪರಿಶೀಲಿಸಿದರು.
ಮತ ಎಣಿಕೆ ಕೇಂದ್ರದಲ್ಲಿ ಕೈಗೊಳ್ಳಲಾದ ಮೂಲಭೂತ ಸೌಕರ್ಯಗಳ ವ್ಯವಸ್ಥೆ, ಮಾಧ್ಯಮ ಕೇಂದ್ರ, ಭದ್ರತಾ ಕೊಠಡಿಗಳು, ಸಿ.ಸಿ.ಟಿ.ವಿ ವ್ಯವಸ್ಥೆ, ಬ್ಯಾರಿಕೇಡಿಂಗ್ ವ್ಯವಸ್ಥೆ, ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳ ನೇಮಕ, ಮತ ಎಣಿಕೆ ದಿನದಂದು ವಾಹನ ದಟ್ಟಣೆ ತಡೆಯಲು ವಿವಿಧ ಕಡೆಗಳಲ್ಲಿ ಕೈಗೊಳ್ಳುತ್ತಿರುವ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮತ್ತು ಮತ ಎಣಿಕೆ ಸಿಬ್ಬಂದಿಗಳ, ಎಣಿಕೆ ಏಜೆಂಟರುಗಳ ತಪಾಸಣೆಗಾಗಿ ವ್ಯವಸ್ಥೆಗಳ ಬಗ್ಗೆ ಪರಿಶೀಲಿಸಿ ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಯಶೋಧಾ ವಂಟಗೋಡಿ, ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ ಕಡಿ, ಸಹಾಯಕ ಚುನಾವಣಾಧಿಕಾರಿಗಳಾದ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ, ರುದ್ರೇಶಪ್ಪ ಟಿ.ಎಸ್., ರೇಷ್ಮಾ ಹಾನಗಲ್, ಅನ್ನಪೂರ್ಣ ಮುದಕ್ಕಮ್ಮನವರ, ಕೊಪ್ಪಳ ತಹಶಿಲ್ದಾರ ವೀಠ್ಠಲ ಚೌಗಲಾ, ಜಿಲ್ಲಾ ಚುನಾವಣಾ ಶಾಖೆಯ ತಹಶೀಲ್ದಾರ ರವಿ ವಸ್ತ್ರದ್, ಜಿಲ್ಲಾ ವಾರ್ತಾಧಿಕಾರಿ ಕೆ.ಎನ್.ರಮೇಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
Comments are closed.