ಮತದಾರರ ತೀರ್ಪಿಗೆ ತಲೆ ಬಾಗುವೆ ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷ ಸಂಘಟಿಸುವೆ-ಡಾ.ಬಸವರಾಜ ಕೆ.ಶರಣಪ್ಪ
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸೋಲು ಗೆಲುವು ಸಹಜ. ಮತದಾರರ ತೀರ್ಪಿಗೆ ತಲೆ ಬಾಗುವೆ. ಬಿಜೆಪಿಯ ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷ ಸಂಘಟಿಸುವೆ ಎಂದು ಬಿಜೆಪಿ ಪರಾಜಿತ ಅಭ್ಯರ್ಥಿ ಡಾ.ಬಸವರಾಜ ಕೆ.ಶರಣಪ್ಪ ಹೇಳಿದರು.
ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ನೀಡಿದ ಬಿಜೆಪಿ ಕೇಂದ್ರ, ರಾಜ್ಯ ನಾಯಕರಿಗೆ, ನನ್ನ ಪರ ಪ್ರಚಾರ ಮಾಡಿದ ಕಾರ್ಯಕರ್ತರು ಹಾಗೂ ಮತದಾರರಿಗೆ ಧನ್ಯವಾದಗಳು. ಮತದಾರರು ತೋರಿಸಿದ ಪ್ರೀತಿಗೆ ನಾನು ಚಿರ ಋಣಿಯಾಗಿದ್ದೇನೆ. ಕಾರ್ಯಕರ್ತರ ಜತೆ ನಿಂತು ಪಕ್ಷ ಸಂಘಟಿಸುವೆ ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ ಬಸವರಾಜ ಎಸ್ ಕ್ಯಾವಟರ ಹೇಳಿದ್ದಾರೆ
ಚುನಾವಣೆ ವೇಳೆ ಕುಷ್ಟಗಿ, ಕೊಪ್ಪಳ, ಗಂಗಾವತಿ, ಯಲಬುರ್ಗಾ, ಕನಕಗಿರಿ, ಮಸ್ಕಿ, ಸಿಂಧನೂರು, ಸಿರುಗುಪ್ಪ ವಿಧಾನಸಭಾ ಕ್ಷೇತ್ರ ಬಿಜೆಪಿ ನಾಯಕರು, ಮುಖಂಡರು ಹಾಗೂ ಕಾರ್ಯಕರ್ತರು ಪ್ರಚಾರ ಮಾಡಿದ್ದಾರೆ. ಪ್ರಚಾರದ ವೇಳೆ ಮನೆಯ ಮಗನಂತೆ ಪ್ರೀತಿ ತೋರಿದ್ದಾರೆ. ಅವರಿಗೆ ನಾನು ಅಭಾರಿಯಾಗಿದ್ದೇನೆ. ಪರಾಜಿತಗೊಂಡರೂ, ಜನರ ಮಧ್ಯೆ ಇದ್ದು, ಸಮಸ್ಯೆಗಳಿಗೆ ಪರಿಹಾರ ಕೊಡಿಸಲು ಹೋರಾಡುವೆ ಎಂದ ಹೇಳಿದ್ದಾರೆ.
Comments are closed.