ಸಂಗಣ್ಣ ಮನೆಯಲ್ಲಿ ಕಾಂಗ್ರೆಸ್ ವಿಜಯೋತ್ಸವ

Get real time updates directly on you device, subscribe now.

ಕೊಪ್ಪಳ: ಕಾಂಗ್ರೆಸ್ ಅಭ್ಯರ್ಥಿ ಕೆ.ರಾಜಶೇಖರ ಹಿಟ್ನಾಳ್ ಗೆಲುವು ಸಾಧಿಸಿದ ಹಿನ್ನೆಲೆ ಮಾಜಿ ಸಂಸದ ಸಂಗಣ್ಣ ಕರಡಿ ಮನೆಗೆ ಕಾಂಗ್ರೆಸ್ ನಾಯಕರು ಭೇಟಿ ನೀಡಿ ವಿಜಯೋತ್ಸವ ಆಚರಿಸಿದರು.
ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಖಚಿತವಾಗುತ್ತಿದ್ದಂತೆ ಸಚಿವ ಶಿವರಾಜ್ ತಂಗಡಗಿ, ಶಾಸಕ ಕೆ.ರಾಘವೇಂದ್ರ ಹಿಟ್ನಾಳ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಮರೇಗೌಡ ಪಾಟೀಲ್ ಬಯ್ಯಾಪುರ ಸೇರಿ ಕಾಂಗ್ರೆಸ್ ನಾಯಕರು ಹಾಗೂ ಮುಖಂಡರು ಮಾಜಿ ಸಂಸದ ಸಂಗಣ್ಣ ಕರಡಿ ಭೇಟಿ ನೀಡಿ ಸಿಹಿ ಹಂಚಿ, ಪಟಾಕಿ ಸಿಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಂಸದ ಸಂಗಣ್ಣ ಕರಡಿ, ಕೊಪ್ಪಳ ಲೋಕಸಭಾ ಕ್ಷೇತ್ರದ ಮೊದಲಿನಿಂದ ಕಾಂಗ್ರೆಸ್ ಭದ್ರಕೋಟೆಯಾಗಿತ್ತು. ಕಳೆದ ಎರಡು ಅವಧಿಯಲ್ಲಿ ಬಿಜೆಪಿಯಿಂದ ನಾನು ಸಂಸದನಾಗಿದ್ದೆನು. ಬದಲಾದ ರಾಜಕೀಯ ಬೆಳವಣಿಗೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡು ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸಿ ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸಿದ್ದೇವೆ. ಕಾರ್ಯಕರ್ತರು ನಿತಂತರವಾಗಿ ಶ್ರಮಿಸಿದ್ದಾರೆ ಎಂದರು.
ಕಾಂಗ್ರೆಸ್ ಮುಖಂಡರಾದ ರಾಜಶೇಖರ ಆಡೂರು ಸೇರಿದಂತೆ ಹಲವಾರು ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಕಾಂಗ್ರೆಸ್ ಗೆಲುವು ಪ್ರಜಾಪ್ರಭುತ್ವದ ಗೆಲುವಾಗಿದೆ. ಬಿಜೆಪಿಗೆ ದುಡಿದ ನನ್ನಂತ ನಿಷ್ಠಾವಂತರನ್ನು ಕಡೆಗಣಿಸಿದ್ದನ್ನು ಗಮನಿಸಿದ್ದ ಮತದಾರರು ಕಾಂಗ್ರೆಸ್ ಗೆ ಮತದಾನ ಮೂಲಕ ಬಿಜೆಪಿಗೆ ತಿರುಗೇಟು ನೀಡಿದ್ದಾರೆ. ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದ್ದ ಬಿಜೆಪಿಗೆ ಮರ್ಮಾಘಾತವಾಗಿದೆ. ನಿಷ್ಠಾವಂತರನ್ನು ಕಡೆಗಣಿಸಿದರೆ ಏನಾಗುತ್ತದೆ ಎಂಬುದನ್ನು ಮತದಾರರು ತೀರ್ಪು ನೀಡಿದ್ದಾರೆ. ಕಾರ್ಯಕರ್ತರು, ಅಭಿಮಾನಿಗಳು ಮನೆ ಮನೆಗೆ ಕಾಂಗ್ರೆಸ್ ಗ್ಯಾರೆಂಟಿ ಮುಟ್ಟಿಸುವ ಮೂಲಕ ಹಗಲು- ರಾತ್ರಿಯನ್ನದೇ ಕೆಲಸ ಮಾಡಿದ್ದಾರೆ. ಹಿಂದೆ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಕೊಪ್ಪಳ ಮರಳಿ ಪಡೆದಿದೆ. ಕಳೆದ 10 ವರ್ಷದಿಂದ ನಾನು ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ಕೆ.ರಾಜಶೇಖರ ಹಿಟ್ನಾಳ್ ಮುಂದುವರಿಸಲಿ.

  • ಸಂಗಣ್ಣ ಕರಡಿ, ಮಾಜಿ ಸಂಸದರು ಹಾಗೂ ಕಾಂಗ್ರೆಸ್ ನಾಯಕರು.

ಕೆ.ರಾಜಶೇಖರ ಹಿಟ್ನಾಳ್ ಗೆಲುವು ನಿರೀಕ್ಷಿತ. ಇದು ಕಾಂಗ್ರೆಸ್ ಕಾರ್ಯಕರ್ತರ ಗೆಲುವು. ಕಾಂಗ್ರೆಸ್ ಗ್ಯಾರೆಂಟಿ, ಮಾಜಿ ಸಂಸದ ಸಂಗಣ್ಣ ಅವರು ಕಾಂಗ್ರೆಸ್ ಸೇರ್ಪಡೆ ಯಿಂದ ಪಕ್ಷಕ್ಕೆ ಮತ್ತಷ್ಟು ಬಲ ಬಂದಿದ್ದು, ಮತದಾರರು ಕಾಂಗ್ರೆಸ್ ಪರ ತೀರ್ಪು ನೀಡಿದ್ದಾರೆ. ಬಿಜೆಪಿಯ ಭಂಡತನಕ್ಕೆ ಸಿಕ್ಕ ಫಲಿತಾಂಶ ಇದಾಗಿದೆ.

  • ಅಮರೇಶ್ ಕರಡಿ, ಕಾಂಗ್ರೆಸ್ ಯುವ ನಾಯಕರು.

Get real time updates directly on you device, subscribe now.

Comments are closed.

error: Content is protected !!
%d bloggers like this: